ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ದಿನ ರಜೆ ಘೋಷಿಸಿದ ಹಿಮಾಚಲ ಪ್ರದೇಶ ಸರ್ಕಾರ

Date:

Advertisements

ಅಯೋಧ್ಯೆಯಲ್ಲಿ ಜನವರಿ 22 ರಂದು(ನಾಳೆ) ನಡೆಯುವ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ದಿನದಂದು ಹಿಮಾಚಲ ಪ್ರದೇಶ ಸರ್ಕಾರ ಸಾರ್ವಜನಿಕ ರಜೆ ಘೋಷಿಸಿದೆ.

ರಾಜ್ಯದ ಎಲ್ಲ ಸರ್ಕಾರಿ ನೌಕರರು ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅನುವು ಮಾಡಿಕೊಡುವ ಉದ್ದೇಶದಿಂದ ನಾಳೆ ಎಲ್ಲ ಶಾಲೆಗಳು, ಕಾಲೇಜುಗಳು, ವಿವಿಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. ರಜೆಯು ದಿನಗೂಲಿ ಉದ್ಯೋಗಿಗಳಿಗೂ ಅನ್ವಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಮ ಮಂದಿರ ಉದ್ಘಾಟನೆ ದಿನದಂದು ಸಾರ್ವಜನಿಕ ರಜೆ ಘೋಷಿಸಿದ ದೇಶದಲ್ಲಿರುವ ಕಾಂಗ್ರೆಸ್ ನೇತೃತ್ವದ ಮೂರು ರಾಜ್ಯಗಳಲ್ಲಿ ಹಿಮಾಚಲ ಪ್ರದೇಶ ಮೊದಲ ರಾಜ್ಯವಾಗಿದೆ. ಹಲವು ರಾಜ್ಯ ಸರ್ಕಾರಗಳು, ಕೇಂದ್ರ ಸರ್ಕಾರ ಕೂಡ ಅರ್ಧ ದಿನ ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ಉದ್ಘಾಟನೆ ದಿನದಂದು ರಜೆ ಘೋಷಿಸಿದೆ.

Advertisements

ಪ್ರಾಣ ಪ್ರತಿಷ್ಟಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್‌ನ ಉನ್ನತ ನಾಯಕರು ನಿರಾಕರಿಸಿದ ನಿಲುವಿಗೆ ವ್ಯತಿರಿಕ್ತವಾಗಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಜೆ ಘೋಷಿಸಿದೆ. ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್ ಒಳಗೊಂಡು ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಅಧೀರ್ ರಂಜನ್ ಚೌಧರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಿರಾಕರಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಗ್ಗಿ ಬದುಕಿದವರು ಎದ್ದು ನಿಲ್ಲುವುದು ಯಾವಾಗ?

ಕಾರ್ಯಕ್ರಮದಿಂದ ಬಿಜೆಪಿಯು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ಹಲವು ವಿಪಕ್ಷಗಳು ಕಾರ್ಯಕ್ರಮದಿಂದ ದೂರ ಉಳಿದಿವೆ.

ಈ ನಡುವೆ ಪ್ರಧಾನಿ ನರೇಂದ್ರ ಮೋದಿ, ಎನ್‌ಡಿಎ ರಾಜಕಾರಣಿಗಳು, ನಟರು, ಉದ್ಯಮಿಗಳು ಹಾಗೂ ಕ್ರೀಡಾಪಟುಗಳು ಅಯೋಧ್ಯೆಯ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಹಿಂದೂ ಧರ್ಮ ಪ್ರಚಾರಕ ಪ್ರೇಮಾನಂದರಿಗೆ ತನ್ನ ಕಿಡ್ನಿ ದಾನ ಮಾಡಲು ಮುಂದಾದ ಮುಸ್ಲಿಂ ಯುವಕ

ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ 26 ವರ್ಷದ ಮುಸ್ಲಿಂ ಯುವಕನೊಬ್ಬ ತನ್ನ ಒಂದು...

ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್...

ಲಕ್ನೋ | ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡು ಸುಳ್ಳು ಆರೋಪ ಸೃಷ್ಟಿ: ವಕೀಲನಿಗೆ ಜೀವಾವಧಿ ಶಿಕ್ಷೆ

ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡ ಮತ್ತು ಸುಳ್ಳು ಆರೋಪಗಳನ್ನು ದಾಖಲಿಸಿದ ವಕೀಲರೊಬ್ಬರಿಗೆ...

Download Eedina App Android / iOS

X