ಮಾರಕಾಸ್ತ್ರ ಹಿಡಿದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಶಂಶಾಕ್ (26) ಬಂಧಿತ ಆರೋಪಿ. ಈತ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದನು. ಅಲ್ಲದೇ, ಸಮಾಜದಲ್ಲಿ ಭಯಭೀತ ವಾತಾವರಣ ಸೃಷ್ಟಿ ಮಾಡುತ್ತಿದ್ದನು. ಹೀಗಾಗಿ, ಬೆಂಗಳೂರು ಪೊಲೀಸರು ಶಂಶಾಕ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವಾಗ ಶಂಶಾಕ್ ಮೇಲೆ ನಗರದ ನಾನಾ ಪೊಲೀಸ್ ಠಾಣೆಗಳಲ್ಲಿ 7 ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.
ಈ ಸುದ್ದಿ ಓದಿದ್ದೀರಾ? ಮತದಾರರ ಜಾಗೃತಿಗೆ ವ್ಯಂಗ್ಯ ಚಿತ್ರಕಾರರ ಕಾರ್ಯಾಗಾರ ಮತ್ತು ಪ್ರದರ್ಶನ
2015ರಲ್ಲಿ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ, 2019ರಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ, ರಾಜಾಜಿನಗರ, ತಿಲಕನಗರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಕೊಲೆ ಪ್ರಯತ್ನ, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಅಪಹರಣ ಮತ್ತು ಕೊಲೆ ಯತ್ನ ಹಾಗೂ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಸೇರಿದಂತೆ ಒಟ್ಟು ಏಳು ಪ್ರಕರಣಗಳು ಈತನ ಮೇಲೆ ದಾಖಲಾಗಿವೆ.