ವಿಜಯಪುರ | ಮನರೇಗಾ ಯೋಜನೆಯಲ್ಲಿ 2,000 ಕೋಟಿಗೂ ಹೆಚ್ಚು ಭ್ರಷ್ಟಾಚಾರ: ತನಿಖೆಗೆ ಕೆಆರ್‌ಎಸ್ ಪಕ್ಷ ಒತ್ತಾಯ

Date:

Advertisements

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (ಕೆಆರ್‌ಎಸ್‌) ಪದಾಧಿಕಾರಿಗಳು ವಿಜಯಪುರ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳ ಮನರೇಗಾ ಯೋಜನೆಯ ಅಕ್ರಮಗಳ ತನಿಖೆ ಮಾಡುವಂತೆ ಒತ್ತಾಯಿಸಿ ಸೋಮವಾರ (ಜ.22) ವಿಜಯಪುರ ಜಿಲ್ಲಾಧಿಕಾರಿ ಮಹದೇವ್ ಮುರುಗಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಬೆಂಗಳೂರಿನ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಾಮಾಜಿಕ ಪರಿಶೋಧನಾ ನಿರ್ದೇಶಕರಿಗೆ ಮನವಿ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಕೆಆರ್‌ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ವಿಜಯಪುರ ಜಿಲ್ಲೆಯಲ್ಲಿ ಸಂಪೂರ್ಣ ಪ್ರಮಾಣದಲ್ಲಿ ಹಳ್ಳ ಹಿಡಿದಿದೆ. ನೂರಕ್ಕೆ ಪ್ರತಿಶತ 99 ಯಂತ್ರಗಳನ್ನ ಬಳಸಿ ಗ್ರಾಮ ಪಂಚಾಯಿತಿ ಸದಸ್ಯರು, ಅಧ್ಯಕ್ಷರು, ಕಾರ್ಯದರ್ಶಿ ಇಒ, ಸಿಇಒ ಸೇರಿದಂತೆ ಹಲವು ಚುನಾಯಿತ ಸದಸ್ಯರು ಮತ್ತು ಅಧಿಕಾರಿಗಳ ಜೇಬು ತುಂಬಿಕೊಳ್ಳುವ ವಂಶಪಾರಂಪರಿಕ ಪ್ರಕ್ರಿಯೆ ಮುಂದುವರೆದಿದೆ ಎಂದು ಆರೋಪಿಸಿದರು.

ಇತ್ತ ಜಿಲ್ಲೆಯ ಬಡ ಕಾರ್ಮಿಕರು ಕೆಲಸಕ್ಕಾಗಿ ಹೊರರಾಜ್ಯಕ್ಕೆ ಗುಳೆ ಹೋಗುತ್ತಿರುವುದು ಸರ್ವೇಸಾಮಾನ್ಯವಾಗಿದೆ. ರಾಜ್ಯ ಸರ್ಕಾರ ಇತ್ತೀಚಿಗೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಭ್ರಷ್ಟ 31 ಪಿಡಿಒಗಳನ್ನು ಮತ್ತು ಒಬ್ಬ ಸಹಾಯಕ ನಿರ್ದೇಶಕನನ್ನ ಸೇವೆಯಿಂದ ಅಮಾನತು ಮಾಡಿದ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯದ ವಿವಿಧ ಭಾಗಗಳಲ್ಲಿ ರಾಜ್ಯ ಸರ್ಕಾರದ ಮೇಲೆ ಒಂದು ರೀತಿಯ ಧನಾತ್ಮಕ ವಿಚಾರಗಳು ಹೊರಹೊಮ್ಮಿವೆ. ಭ್ರಷ್ಟಾಚಾರದಲ್ಲಿ ತೊಡಗಿರುವ ಚುನಾಯಿತ ಸದಸ್ಯರು ಸೇರಿದಂತೆ ಅಧಿಕಾರಿ ವರ್ಗದಲ್ಲಿ ನಡುಕ ಹುಟ್ಟಿಸುವಂತಹ ಕಾರ್ಯವಾಗಿದೆ.

Advertisements

ರಾಜ್ಯದ ಮುಖ್ಯಮಂತ್ರಿಗಳಾಗಿರುವ ಸಿದ್ದರಾಮಯ್ಯ ಅವರಲ್ಲಿ ಈ ಮೂಲಕ ವಿನಂತಿ ಮಾಡಿಕೊಳ್ಳುವುದೇನೆಂದರೆ, ವಿಜಯಪುರ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನಡೆದಂತ ಎಲ್ಲಾ ಕಾಮಗಾರಿಗಳ ತನಿಖೆಗಾಗಿ ಪ್ರತ್ಯೇಕವಾದ ಒಂದು ಸಮಿತಿಯನ್ನ ರಚನೆ ಮಾಡಬೇಕು ಎಂದು ಕೋರಿಕೊಳ್ಳುತ್ತೇವೆ ಎಂದರು.

ಕಡಿಮೆ ಎಂದರು 2,000 ಕೋಟಿಗೂ ಹೆಚ್ಚು ಭ್ರಷ್ಟಾಚಾರವು ಮನರೇಗಾ ಯೋಜನೆಯಡಿ ನಡೆದಿದೆ. ಈ ಭ್ರಷ್ಟಾಚಾರವನ್ನು ಹೊರಗೆ ತರುವುದರ ಮೂಲಕ ವಿಜಯಪುರ ಜಿಲ್ಲೆಯ ಬಡವರ ಮತ್ತು ಕಾರ್ಮಿಕ ವರ್ಗದ ಬದುಕಿಗೆ ಜೀವ ಜಲವಾಗುತ್ತೀರಿ ಎಂದು ಸಾರ್ವಜನಿಕರ ಪರವಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ವಿನಂತಿಸಿಕೊಳ್ಳುತ್ತದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ಮುಖಂಡರಾದ ರಾಕೇಶ್ ಇಂಗಳಗಿ, ವಿಕ್ರಮ್ ವಾಗಮೋರೆ ಹಮೀದ್ ಇನಾಮದಾರ್, ಪ್ರವೀಣ್ ಕನಸೆ, ಸುರೇಂದ್ರ ಕುನಸಲೇ, ಗಣಪತಿ ರಾಥೋಡ್, ರಾಘವೇಂದ್ರ ಛಲವಾದಿ, ಮೈಬೂಬ್ ತಾಂಬೋಳಿ, ನಬಿರಸುಲ್ ಹುಣಶ್ಯಾಳ, ಭೀಮಾಶಂಕರ್ ಕಾಂಬಳೆ, ಪುಂಡಲಿಕ ಬಿರಾದಾರ್‌ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X