ಜನವರಿ 25ರಿಂದ ಭಾರತದಲ್ಲಿ ಆರಂಭವಾಗುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳಿಂದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಹೊರಗುಳಿಯಲಿದ್ದಾರೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಬಿಸಿಸಿಐ, ”ವಿರಾಟ್ ಕೊಹ್ಲಿ ಅವರು ನಾಯಕ ರೋಹಿತ್ ಶರ್ಮಾ, ತಂಡದ ನಿರ್ವಹಣೆ ಹಾಗೂ ಆಯ್ಕೆ ಸಮಿತಿಗೆ ಈ ವಿಷಯ ತಿಳಿಸಿದ್ದಾರೆ. ದೇಶದ ತಂಡದ ಭಾಗವಹಿಸುವಿಕೆಯಲ್ಲಿ ಅವರಿಗೆ ಸದಾ ಪ್ರಮುಖ ಆದ್ಯತೆಯನ್ನು ನೀಡಲಾಗುತ್ತದೆ. ಕೆಲವೊಂದು ವೈಯಕ್ತಿಕ ಕಾರಣಗಳಿಂದ ಅವರ ಉಪಸ್ಥಿತಿಯನ್ನು ನಿರಾಕರಿಸಲಾಗಿದೆ” ಎಂದು ತಿಳಿಸಿದೆ.
ವಿರಾಟ್ ನಿರ್ಧಾರದ ನಂತರವೂ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಉತ್ತಮ ಪ್ರದರ್ಶನ ನೀಡಲಿದೆ ಎಂಬ ವಿಶ್ವಾಸವನ್ನು ಬಿಸಿಸಿಐ ವ್ಯಕ್ತಪಡಿಸಿದೆ. ಸೂಕ್ತ ಸಮಯದಲ್ಲಿ ಅವರ ಬದಲಿ ಆಟಗಾರರ ಹೆಸರನ್ನು ಘೋಷಿಸುವುದಾಗಿ ಬಿಸಿಸಿಐ ತಿಳಿಸಿದೆ. ಈಗಾಗಲೇ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ತಂಡವನ್ನು ಪ್ರಕಟಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯುವಜನರ ವಿಶ್ವಾಸ ಉಳಿಸಿಕೊಳ್ಳುವುದೇ ಕೆಪಿಎಸ್‌ಸಿ?
ವಿರಾಟ್ ಕೊಹ್ಲಿ ದೇಶೀಯ ಪಿಚ್‌ಗಳಲ್ಲಿ ಉತ್ತಮ ಲಯ ಹೊಂದಿದ್ದಾರೆ. ಮೊದಲ ಪಂದ್ಯ ನಡೆಯುವ ಹೈದರಾಬಾದ್‌ನಲ್ಲಿ ಕೊಹ್ಲಿ ಉತ್ತಮ ದಾಖಲೆ ಹೊಂದಿದ್ದಾರೆ. ಕಳೆದ ವರ್ಷದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ 4 ಇನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ಒಂದು ಅರ್ಧ ಶತಕದೊಂದಿಗೆ 172 ರನ್ ಬಾರಿಸಿದ್ದರು.
ಇಂಗ್ಲೆಂಡ್ ವಿರುದ್ಧ ಮೊದಲ ಎರಡು ಟೆಸ್ಟ್ ಪಂದ್ಯವಾಡುವ ಟೀಂ ಇಂಡಿಯಾ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್ (ವಿಕೆಟ್ ಕೀಪರ್), ಕೆ ಎಸ್ ಭರತ್ (ವಿಕೆಟ್ ಕೀಪರ್), ಧ್ರುವ ಜರುಲ್(ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್‌ದೀಪ್ ಯಾದವ್, ಮೊಹಮದ್ ಸಿರಾಜ್, ಮುಕೇಶ್ ಕುಮಾರ್, ಜಸ್‌ಪ್ರೀತ್ ಬೂಮ್ರಾ(ಉಪ ನಾಯಕ), ಆವೇಶ್ ಖಾನ್.
ಪಂದ್ಯಗಳ ವೇಳಾಪಟ್ಟಿ:
ಮೊದಲ ಟೆಸ್ಟ್ – ಹೈದರಾಬಾದ್ , ಜನವರಿ 25 ರಿಂದ 29
ಎರಡನೇ ಟೆಸ್ಟ್ – ವಿಶಾಖ ಪಟ್ಟಣ – ಫೆಬ್ರವರಿ 2 ರಿಂದ 6
ಮೂರನೇ ಟೆಸ್ಟ್ – ರಾಜ್ ಕೋಟ್ – ಫೆಬ್ರವರಿ 15 ರಿಂದ 19
ನಾಲ್ಕನೇ ಟೆಸ್ಟ್ – ರಾಂಚಿ – ಫೆಬ್ರವರಿ 23 ರಿಂದ 27
ಐದನೇ ಟೆಸ್ಟ್ – ಧರ್ಮಶಾಲಾ – ಮಾರ್ಚ್ 7 ರಿಂದ 11