ಜಾತ್ಯತೀತತೆ ಭಾರತದ ಆತ್ಮ, ಒಂದು ಧರ್ಮದ ಪ್ರಚಾರ ಸಲ್ಲ: ಕೇರಳ ಸಿಎಂ

Date:

Advertisements

ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಯ ಉದ್ಘಾಟನೆ ನೆರವೇರಿಸಿದ ಕೆಲವು ಗಂಟೆಗಳ ನಂತರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಡಿಯೋ ಸಂದೇಶ ಪ್ರಕಟಿಸಿದ್ದು, ಧಾರ್ಮಿಕ ಕಾರ್ಯಕ್ರಮವನ್ನು ದೇಶದ ಕಾರ್ಯಕ್ರಮವನ್ನಾಗಿ ಆಚರಿಸಿರುವುದಕ್ಕಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

“ನಮ್ಮ ಸಂವಿಧಾನದಲ್ಲಿ ಉನ್ನತ ಸ್ಥಾನ ಹೊಂದಿರುವವರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ದೂರವುಳಿದು ನಮ್ಮ ಜಾತ್ಯತೀತ ರಾಷ್ಟ್ರ ಮೌಲ್ಯಗಳಿಗೆ ಬದ್ಧರಾಗಿರಬೇಕು. ಜಾತ್ಯತೀತತೆ ನಮ್ಮ ದೇಶದ ಆತ್ಮವಾಗಿದೆ. ಭಾರತದ ಮೊದಲ ಪ್ರಧಾನಿ ಜವಹರ್‌ ಲಾಲ್ ನೆಹರು ಕೂಡ ಭಾರತದ ಜಾತ್ಯತೀತತೆ ಎಂದರೆ ಧರ್ಮ ಹಾಗೂ ಆಡಳಿತದಿಂದ ಅಂತರ ಕಾಯ್ದುಕೊಂಡಿರಬೇಕು ಎಂದು ಹೇಳಿದ್ದರು” ಎಂದು ತಿಳಿಸಿದ್ದಾರೆ.

“ಇತ್ತೀಚಿನ ದಿನಗಳಲ್ಲಿ ಧರ್ಮ ಹಾಗೂ ಆಡಳಿತದ ನಡುವಿನ ಅಂತರ ದಿನದಿಂದ ದಿನಕ್ಕೆ ಕುಗ್ಗುತ್ತಿದೆ. ಧಾರ್ಮಿಕ ಸಮಾರಂಭವನ್ನು ರಾಷ್ಟ್ರದ ಅಧಿಕೃತ ಕಾರ್ಯಕ್ರಮವಾಗಿ ಆಚರಿಸುವ ಹಂತಕ್ಕೆ ನಾವು ತಲುಪಿದ್ದೇವೆ. ಆ ಸಮಾರಂಭದಲ್ಲಿ ಭಾಗವಹಿಸುವ ಆಹ್ವಾನವನ್ನು ನಿರಾಕರಿಸುವ ಮೂಲಕ, ಭಾರತದ ಜಾತ್ಯತೀತ ಸ್ವರೂಪಕ್ಕೆ ನಮ್ಮ ಬದ್ಧತೆಯನ್ನು ಗಟ್ಟಿಗೊಳಿಸಿದ್ದೇವೆ’ ಎಂದು ಪಿಣರಾಯಿ ವಿಜಯನ್ ಹೇಳಿದರು.

Advertisements

“ಈ ಸಂದರ್ಭದಲ್ಲಿ ನಾವು ಒಂದು ಧರ್ಮವನ್ನು ವೈಭವೀಕರಿಸಿ ಇತರ ಧರ್ಮಗಳನ್ನು ಕೀಳಾಗಿ ಕಾಣಬಾರದು. ಇತರ ಧರ್ಮಗಳು ಹಾಗೂ ನಂಬಿಕೆಯನ್ನು ಆಚರಿಸುವವರು ಕೂಡ ನಮ್ಮ ಸ್ವತಂತ್ರ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಈ ದೇಶ ಎಲ್ಲ ಜನ ಸಮಾಜದ ಎಲ್ಲ ಪಂಗಡಗಳ ಜನರಿಗೆ ಸೇರಿದೆ. ಎಲ್ಲರನ್ನು ಸಮಾನವಾಗಿ ಪರಿಗಣಿಸಬೇಕು” ಎಂದು ಕೇರಳ ಸಿಎಂ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯುವಜನರ ವಿಶ್ವಾಸ ಉಳಿಸಿಕೊಳ್ಳುವುದೇ ಕೆಪಿಎಸ್‌ಸಿ?

ಧರ್ಮವು ಖಾಸಗಿ ವಿಷಯ. ಸಂವಿಧಾನ ಕೂಡ ಎಲ್ಲ ವ್ಯಕ್ತಿಗಳು ಅವರ ಆತ್ಮಸಾಕ್ಷಿಯ ಅನುಗುಣವಾಗಿ ಯಾವುದೇ ಧರ್ಮವನ್ನು ಮುಕ್ತವಾಗಿ ಆಚರಣೆ ಮಾಡುವ, ಪ್ರಚಾರ ಮಾಡುವ ಹಕ್ಕನ್ನು ಹೊಂದಿದೆ ಎಂದು ಹೇಳುತ್ತದೆ” ಎಂದು ತಿಳಿಸಿದ್ದಾರೆ.

ಧರ್ಮ, ಭಾಷೆ ಮತ್ತು ಪ್ರಾದೇಶಿಕ ಅಥವಾ ವಿಭಾಗೀಯ ವೈವಿಧ್ಯತೆಗಳನ್ನು ಮೀರಿ ಭಾರತದ ಎಲ್ಲ ಜನರಲ್ಲಿ ಸಾಮರಸ್ಯ ಮತ್ತು ಸಮಾನ ಸಹೋದರತ್ವದ ಮನೋಭಾವವನ್ನು ಉತ್ತೇಜಿಸಲು ಪಿಣರಾಯಿ ವಿಜಯನ್ ಕರೆ ನೀಡಿದರು.

“ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾಗವಹಿಸಲು ನನಗೆ ಆಹ್ವಾನ ಬಂದಿತ್ತು. ಆಹ್ವಾನವನ್ನು ಸ್ವೀಕರಿಸದೆ ಸಾಂವಿಧಾನಿಕ ಜವಾಬ್ದಾರಿಯನ್ನು ಎತ್ತಿಹಿಡಿದಿದ್ದೇವೆ. ವೈಜ್ಞಾನಿಕ ಮನೋಭಾವ, ಮಾನವತಾವಾದ ಮತ್ತು ವಿಚಾರಣೆ ಮತ್ತು ಸುಧಾರಣೆಯ ಮನೋಭಾವವನ್ನು ಅಭಿವೃದ್ಧಿಪಡಿಸುವ ಮೂಲಕ ಭಾರತವು ಮತ್ತಷ್ಟು ಏಳಿಗೆಯಾಗಲಿ” ಎಂದು ಜನತೆಗೆ ಕೇರಳ ಸಿಎಂ ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X