ಕಲಬುರಗಿ ಹೊರವಲಯದ ಫರಹತಾಬಾದ ಗ್ರಾಮದ ಬಳಿ ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರರು ಇಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
ಮೃತಪಟ್ಟ ಇಬ್ಬರು ಚಿತ್ತಾಪೂರ ತಾಲೂಕಿನ ಹೊನಗುಂಟಾ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ.
ಬೈಕ್ ಸವಾರ ಬಲಭೀಮ ಸ್ನೇಹಿತರೊಂದಿಗೆ ಬೈಕ್ ಮೇಲೆ ತೆರಳುವಾಗ ಫರಹತಾಬಾದ ಬಳಿ ಕಾರಿಗೆ ಮುಖಾಮುಖಿ ಅಪಘಾತ ಸಂಭವಿಸಿತು. ಪರಿಣಾಮ ಬಲಭೀಮ ಸೇರಿದಂತೆ ಮೂವರಿಗೆ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಬೈಕ್ ಸವಾರರು ಇಬ್ಬರು ಸಾವನಪ್ಪಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯುವಜನರ ವಿಶ್ವಾಸ ಉಳಿಸಿಕೊಳ್ಳುವುದೇ ಕೆಪಿಎಸ್‌ಸಿ?
ಈ ಕುರಿತು ಸಂಚಾರಿ ಪೊಲೀಸ್ ಠಾಣೆ -1ರಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.