ದೀರ್ಘಕಾಲದ ಪ್ರಕರಣ: ರಾಜ್ಯದ ಪೊಲೀಸರಿಂದ 200 ಮಂದಿ ಆರೋಪಿಗಳ ಬಂಧನ

Date:

Advertisements

ರಾಜ್ಯಾದ್ಯಂತ ಕ್ರಿಮಿನಲ್ ನ್ಯಾಯಾಲಯಗಳಲ್ಲಿ ಹಲವಾರು ವರ್ಷಗಳಿಂದ ಬಾರಿ ಇರುವ ದೀರ್ಘಕಾಲದ ಪ್ರಕರಣಗಳನ್ನು ತೆರವುಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ, ಕಳೆದ ಆರು ತಿಂಗಳಲ್ಲಿ ದೀರ್ಘಕಾಲದ ಪ್ರಕರಣಗಳ ಸಂಬಂಧ ಸುಮಾರು 200 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಇವುಗಳಲ್ಲಿ ಬೆಂಗಳೂರು ನಗರದಲ್ಲಿಯೇ 52 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

1992ರ ಬಾಬರಿ ಮಸೀದಿ ಧ್ವಂಸ ಘಟನೆ ನಡೆದ ಸಮಯದಲ್ಲಿ ಹುಬ್ಬಳ್ಳಿಯಲ್ಲಿ ಗಲಭೆ ನಡೆದಿತ್ತು. ಆ ಗಲಭೆಯಲ್ಲಿ ಭಾಗಿಯಾಗಿದ್ದ ಕರಸೇವಕ ಶ್ರೀಕಾಂತ್ ಪೂಜಾರಿ ಎಂಬಾತ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ 36 ಮಂದಿಯನ್ನು ಕಳೆದ ತಿಂಗಳು ಹುಬ್ಬಳ್ಳಿ-ಧಾರವಾಡ ಪೊಲೀಸರು ಬಂಧಿಸಿದ್ದರು. ಶ್ರೀಕಾಂತ್ ಪೂಜಾರಿ ಬಂಧನದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈಗ, ಆತನಿಗೆ ಜಾಮೀನು ನೀಡಲಾಗಿದೆ.

2005ರಲ್ಲಿ ತುಮಕೂರಿನಲ್ಲಿ ನಡೆದಿದ್ದ ಪೊಲೀಸ್ ಚೆಕ್‌ ಪೋಸ್ಟ್‌ ಮೇಲಿನ ದಾಳಿ ಪ್ರಕರಣದಲ್ಲಿ 5 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಬಂಧಿಸಿದ್ದಾರೆ. ಅದೇ ಪ್ರಕರಣದಲ್ಲಿ 29 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದೆ.

Advertisements

ರಾಜ್ಯದಲ್ಲಿ 10 ವರ್ಷಕ್ಕಿಂತ ಹೆಚ್ಚು ಹಳೆಯದಾದ ಬರೋಬ್ಬರಿ 10.14 ಲಕ್ಷ ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ ಎಂದು ತಿಳಿದುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X