ಭಾರತ್ ಜೋಡೋ ನ್ಯಾಯ ಯಾತ್ರೆ | ಅಸ್ಸಾಂ ಪೊಲೀಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ

Date:

Advertisements

ಭಾರತ್ ಜೋಡೋ ನ್ಯಾಯ ಯಾತ್ರೆಯು ಸದ್ಯ ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿದ್ದು, ಯಾತ್ರೆಯು ಗುವಾಹಟಿ ಪ್ರವೇಶಿಸದಂತೆ ಪೊಲೀಸರು ತಡೆದಿದ್ದಾರೆ. ಈ ನಡುವೆ ಅಸ್ಸಾಂ ಪೊಲೀಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ.

ಈ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದಾಗಿ ವರದಿಯಾಗಿದ್ದು, ಕೆಲವು ಕಾಂಗ್ರೆಸ್ ಕಾರ್ಯಕರ್ತರಿಗೆ ಗಾಯಗಳಾಗಿರುವುದಾಗಿ ಕಾಂಗ್ರೆಸ್ ಐಟಿ ಸೆಲ್ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದೆ.

ಲಾಠಿ ಚಾರ್ಜ್‌ನಿಂದ ಆಕ್ರೋಶಗೊಂಡ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿದ್ದ ಮಂದಿ, ಪೊಲೀಸರು ನಿರ್ಮಿಸಿದ್ದ ಮರದ ಬ್ಯಾರಿಕೇಡ್‌ ಅನ್ನೇ ಎತ್ತಿ ಎಸೆದಿರುವುದಾಗಿ ವರದಿಯಾಗಿದೆ.

Advertisements

ಈ ಬೆಳವಣಿಗೆಯ ಬಳಿಕ ಜನರನ್ನುದ್ದೇಶಿಸಿ ಮಾತನಾಡಿದ ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ಮುನ್ನಡೆಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಇಂದು ಅಸ್ಸಾಂನಲ್ಲಿ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ನಡೆಯುತ್ತಲಿದೆ. ಬಜರಂಗದಳ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ರ್‍ಯಾಲಿ ಇದೇ ಮಾರ್ಗವಾಗಿ ನಡೆದಿತ್ತು. ಆದರೆ ನಮ್ಮ ಮೆರವಣಿಗೆಯನ್ನು ಅಸ್ಸಾಂ ಬಿಜೆಪಿ ಸರ್ಕಾರ ತಡೆದು ನಿಲ್ಲಿಸಿದೆ. ಕಾಂಗ್ರೆಸ್ ಕಾರ್ಯಕರ್ತರು ರಸ್ತೆಗೆ ಹಾಕಿದ್ದ ಬ್ಯಾರಿಕೇಡ್‌ಗಳನ್ನು ತೆಗೆದಿದ್ದಾರೆ. ನಾವು ಬ್ಯಾರಿಕೇಡ್‌ಗಳನ್ನು ತೆಗೆದಿರಬಹುದು. ಆದರೆ ಕಾನೂನನ್ನು ಕೈಗೆತ್ತಿಕೊಳ್ಳುವುದಿಲ್ಲ. ಕಾಂಗ್ರೆಸ್ ಕಾರ್ಯಕರ್ತರು ದುರ್ಬಲರು ಎಂದು ನೀವು ಭಾವಿಸಬೇಡಿ. ಕಾಂಗ್ರೆಸ್ ಕಾರ್ಯಕರ್ತರು ಸಿಂಹದಂತೆ ಘರ್ಜಿಸುವವರು(ಬಬ್ಬರ್ ಶೇರ್‌)” ಎಂದು ಹೇಳಿದರು.

“ನಾವು ಕಾನೂನನ್ನು ಅನುಸರಿಸುವವರು. ಆದ್ದರಿಂದ ನಾವು ಅನುಮತಿ ಪಡೆದ ಮಾರ್ಗದ ಮೂಲಕ ಪ್ರಯಾಣವನ್ನು ನಡೆಸುತ್ತೇವೆ. ಇಲ್ಲಿ ನಿಂತಿರುವ ಪೊಲೀಸ್ ಅಧಿಕಾರಿಗಳಿಗೆ ನಾನು ಹೇಳಲು ಬಯಸುವುದು ಏನೆಂದರೆ, ನೀವು ನಿಮ್ಮ ಕೆಲಸವನ್ನಷ್ಟೇ ಮಾಡುತ್ತಿದ್ದೀರಿ ಎಂಬುದು ನಮಗೆ ಗೊತ್ತು. ನಿಮಗೆ ಮೇಲಿನಿಂದ ಬಂದ ಆದೇಶದಂತೆ ನೀವು ಕೆಲಸ ಮಾಡಿದ್ದೀರಿ ಎಂದೂ ಕೂಡ ನಮಗೆ ತಿಳಿದಿದೆ. ಆದರೆ ನಿಮಗೆ ಒಂದು ವಿಷಯ ನೆನಪಿರಲಿ, ಅಸ್ಸಾಂನ ಜನರಿಗೂ ನ್ಯಾಯ ಸಿಗಬೇಕು ಎಂಬುದು ನಮ್ಮ ಆಗ್ರಹ. ಏಕೆಂದರೆ ಅಸ್ಸಾಂನಲ್ಲಿರುವ ಮುಖ್ಯಮಂತ್ರಿ 24 ಗಂಟೆಯೂ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಅವರು” ಎಂದು ರಾಹುಲ್ ಗಾಂಧಿ ಹೇಳುತ್ತಿದ್ದಂತೆ ಕೆಲವು ಪೊಲೀಸರು ಕಿರು ನಗೆ ಬೀರಿದರು.

ಇದನ್ನು ಗಮನಿಸಿದ ರಾಹುಲ್ ಗಾಂಧಿ, “ನಾನು ಹೇಳುತ್ತಿರುವ ಸತ್ಯ ಇಲ್ಲಿರುವ ಪೊಲೀಸ್‌ನವರಿಗೂ ತಿಳಿದಿದೆ. ದಯವಿಟ್ಟು ನೀವು ತಪ್ಪಿಯೂ ಕೂಡ ನನ್ನ ಮಾತಿಗೆ ಚಪ್ಪಾಳೆ ತಟ್ಟಬೇಡಿ. ಆದರೆ, ನಿಮ್ಮ ಮನಸ್ಸಿನಲ್ಲಿರುವ ವಿಚಾರ ನಾನು ಅರ್ಥಮಾಡಿಕೊಳ್ಳಬಲ್ಲೆ” ಎಂದು ಪೊಲೀಸರನ್ನುದ್ದೇಶಿಸಿ ಹೇಳಿದರು.

ನಿನ್ನೆ ಭಾರತ್ ಜೋಡೋ ನ್ಯಾಯ ಯಾತ್ರೆಯ ವೇಳೆ ಅಸ್ಸಾಂ ಪೊಲೀಸರು, ವಿದ್ವಾಂಸರಾದ ಶ್ರೀಮಂತ ಶಂಕರದೇವ ಅವರ ಜನ್ಮಸ್ಥಳವಾದ ನಾಗಾಂವ್‌ನಲ್ಲಿರುವ ಬಟಾದ್ರವ ಸತ್ರ ದೇವಸ್ಥಾನಕ್ಕೆ ರಾಹುಲ್ ಗಾಂಧಿ ಭೇಟಿ ನೀಡದಂತೆ ತಡೆದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X