- ಶನಿವಾರ ಶಿಗ್ಗಾಂವಿ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಸಿಎಂ
- ಕ್ಷೇತ್ರದ ಬಿಜೆಪಿ ಮುಖಂಡರು ಜನಪ್ರತಿನಿಧಿಗಳೊಂದಿಗೆ ಬೊಮ್ಮಾಯಿ ಸಭೆ
ವಿಧಾನಸಭೆ ಚುನಾವಣೆ ಸ್ಪರ್ಧೆ ಸಲುವಾಗಿ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಅವರು ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಳೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರ ಶಿಗ್ಗಾಂವಿ ಕ್ಷೇತ್ರದಲ್ಲಿನ ತಮ್ಮ ಪಕ್ಷದ ಎಲ್ಲಾ ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ.
ಹಾವೇರಿಗೆ ತೆರಳುವ ಮುನ್ನ ಅಂಬೇಡ್ಕರ್ ಜಯಂತಿ ಹಿನ್ನೆಲೆ ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ಸಮಾಜಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬೊಮ್ಮಾಯಿ ಸಂವಿಧಾನ ಶಿಲ್ಪಿಗೆ ಪುಷ್ಪ ನಮನ ಸಲ್ಲಿಸಿದರು.
ಮತ್ತೊಂದು ಕಡೆ ರಾಜ್ಯಾದ್ಯಂತ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಗುರುವಾರದಿಂದ ಆರಂಭವಾಗಿದ್ದು ಮೊದಲ ದಿನವೇ 221 ನಾಮಪತ್ರಗಳು ಸಲ್ಲಿಕೆಯಾಗಿವೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ನಿನ್ನೆ( ಏಪ್ರಿಲ್ 13ರಂದು) 30 ನಾಮಪತ್ರಗಳ ಸಲ್ಲಿಕೆಯಾಗಿವೆ.
ಈ ಸುದ್ದಿ ಓದಿದ್ದೀರಾ? :ಕುಟುಂಬ ರಾಜಕಾರಣದ ವಿರುದ್ಧ ಮಾತನಾಡುವ ಬಿಜೆಪಿಯಿಂದಲೇ 40 ಮಂದಿಗೆ ಟಿಕೆಟ್: ಪ್ರಿಯಾಂಕ್ ಖರ್ಗೆ
ಇದರಲ್ಲಿ 22 ಪುರುಷ, 8 ಮಹಿಳೆ, ಬಿಜೆಪಿಯ 2, ಕಾಂಗ್ರೆಸ್‌ನ 1, ಆಪ್ ಪಕ್ಷದ 2, ಜೆಡಿಎಸ್‌ನ 1 ಹಾಗೂ 24 ಜನ ಪಕ್ಷೇತರ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ.