ಸುಭಾಷ್ ಚಂದ್ರ ಬೋಸ್ ಅವರ ತತ್ವಾದರ್ಶ ನಮಗೆ ದಾರಿದೀಪವಾಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements

ಸುಭಾಷ್ ಚಂದ್ರ ಬೋಸ್ ಅಪ್ರತಿಮ ದೇಶಪ್ರೇಮಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರು. ಅವರ ಆದರ್ಶಗಳನ್ನು ನಾವೆಲ್ಲರೂ ಅನುಸರಿಸುವುದೇ ಅವರಿಗೆ ಸಲ್ಲಿಸುವ ಗೌರವ. ಅವರ ತತ್ವಾದರ್ಶಗಳು ನಮಗೆ ದಾರಿದೀಪವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಅಂಗವಾಗಿ ಅವರ ಪ್ರತಿಮೆಗೆ ಮಂಗಳವಾರ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದರೊಂದಿಗೆ ಮಾತನಾಡಿದರು.

“ಸುಭಾಷ್ ಚಂದ್ರ ಬೋಸ್ ಅವರ 127ನೇ ಜಯಂತಿಯನ್ನು ಆಚರಿಸುತ್ತಿದ್ದು, ಇಂದು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸ್ಮರಿಸಿ, ಗೌರವಿಸಿದ್ದೇವೆ. ಕಾಂಗ್ರೆಸ್ ಅಧ್ಯಕ್ಷರಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯುವಜನರ ವಿಶ್ವಾಸ ಉಳಿಸಿಕೊಳ್ಳುವುದೇ ಕೆಪಿಎಸ್‌ಸಿ?

“ಗಾಂಧೀಜಿ ಹಾಗೂ ಸುಭಾಷ್ ಚಂದ್ರ ಬೋಸ್ ನಡುವೆ ಸ್ವಾತಂತ್ರ್ಯ ಹೋರಾಟದ ಹಾದಿಯ ಬಗ್ಗೆ ಭಿನ್ನಾಭಿಪ್ರಾಯ ಮೂಡಿತ್ತು. ಮಹಾತ್ಮ ಗಾಂಧೀಜಿ ಶಾಂತಿ, ಅಹಿಂಸೆ ಮೂಲಕ ಸ್ವಾತಂತ್ರ್ಯ ಗಳಿಸಬೇಕು ಎಂದರೆ, ಸುಭಾಷ್ ಚಂದ್ರ ಬೋಸ್ ಅವರಿಗೆ ಅದರ ತದ್ವಿರುದ್ಧವಾದ ನಿಲುವು ಇತ್ತು. ಬೇರೆ ವಿಚಾರಗಳಲ್ಲಿ ಗಾಂಧೀಜಿಯವರ ಬಗ್ಗೆ ಅಪಾರವಾದ ಗೌರವವಿತ್ತು. ಈ ವಿಚಾರದಲ್ಲಿ ಮಾತ್ರ ಆಲೋಚನೆಗಳಲ್ಲಿ ಭಿನ್ನಾಭಿಪ್ರಾಯ ಇತ್ತು” ಎಂದು ಹೇಳಿದರು.

“ಭಾರತೀಯ ರಾಷ್ಟ್ರೀಯ ಸೇನೆಯನ್ನು ಸ್ಥಾಪಿಸಿ ಅದರ ಮುಖ್ಯಸ್ಥರಾಗಿದ್ದರು. ಜಪಾನ್ ದೇಶದಲ್ಲಿ ಅವರು ವಿಮಾನ ದುರಂತದಲ್ಲಿ ಅವರು ಸಾವಿಗೀಡಾದರು. ಅಪ್ರತಿಮ ಸ್ವಾತಂತ್ರ್ಯ ಪ್ರೇಮಿ, ದೇಶಪ್ರೇಮಿಯಾಗಿದ್ದರು. ಸುಭಾಷ್ ಚಂದ್ರ ಬೋಸ್ ಅವರು ನಮಗೆಲ್ಲಾ ಆದರ್ಶ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

ಅಲೆಮಾರಿಗಳ ಹಕ್ಕು ತಿರಸ್ಕರಿಸಿದ ಸಿಎಂ; ಹೋರಾಟ ತೀವ್ರಗೊಳಿಸಲು ನಿರ್ಧಾರ

"ಹೋರಾಟದ ಮಾದರಿ ಬದಲಿಸೋಣ. ನಮ್ಮ ಕಷ್ಟ ಜನರಿಗೆ ಗೊತ್ತಾಗಲಿ. ಅಲೆಮಾರಿಗಳು ವಾಪಸ್‌...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Download Eedina App Android / iOS

X