ಉಡುಪಿ | ವಾರದಲ್ಲಿ ‌ಅಕಾಡೆಮಿ, ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕ: ಸಚಿವ ಶಿವರಾಜ್ ತಂಗಡಗಿ

Date:

Advertisements

ಒಂದು ವಾರದೊಳಗೆ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತದೆ ಎಂದು ಕನ್ನಡ ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮಂಗಳವಾರ ಭೇಟಿ ನೀಡಿದ್ದ ಅವರು, ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. “ಅಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ಶೀಘ್ರವೇ ಪೂರ್ಣಗೊಳ್ಳಲಿದೆ” ಎಂದರು.

“ಕೊಂಕಣಿ, ಬ್ಯಾರಿ, ಯಕ್ಷಗಾನ, ತುಳು ಅಕಾಡೆಮಿಗಳಿಗೂ ಇಲ್ಲಿಗೂ ಸಂಬಂಧ ಹೆಚ್ಚಿದೆ. ಕಳೆದ ಚುನಾವಣೆಯಲ್ಲಿ ಪರಭಾವಗೊಂಡ ಪಕ್ಷದ ಅಭ್ಯರ್ಥಿಗಳು ಹಾಗೂ ಸ್ಥಳೀಯ ಮುಖಂಡರ ಸಲಹೆ ಪಡೆದು ಅಧ್ಯಕ್ಷರ ನೇಮಕ ಮಾಡಲಾಗುವುದು. ಕಾಂಗ್ರೆಸ್ ಕಟ್ಟಾಳು, ಪಕ್ಷದ ಬಾವುಟ ಹಿಡಿದು ದುಡಿದವರಿಗೆ ಅಕಾಡೆಮಿಯಲ್ಲಿ ಅವಕಾಶ ಕಲ್ಪಿಸಲಾಗುವುದು. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ” ಎಂದು ಸಚಿವರು ಕಾರ್ಯಕರ್ತರಿಗೆ ಭರವಸೆ ನೀಡಿದರು.

Advertisements

“ಶಕ್ತಿ ಮೀರಿ ಜಿಲ್ಲೆಯಲ್ಲಿ ಇಲಾಖೆ ವತಿಯಿಂದ ಕೆಲಸ ಮಾಡಲಾಗುವುದು. ಕಾಂಗ್ರೆಸ್ ಕೊಡುಗೆಯಿಂದ ಹಾಗೂ ಕಾರ್ಯಕರ್ತರ ಆಶೀರ್ವಾದದಿಂದ ನಾನು ಮಂತ್ರಿಯಾಗಿದ್ದೇನೆ. ಜಿಲ್ಲೆಗೂ ನನಗೂ ಅವಿನಾಭಾವ ಸಂಬಂಧ ಇದೆ.‌ ಈ ಹಿಂದೆ ನಾನು ಸಣ್ಣ ನೀರಾವರಿ ಸಚಿವನಾಗಿದ್ದ ವೇಳೆ ಜಿಲ್ಲೆಗೆ ಭೇಟಿ ನೀಡಿದ್ದೆ” ಎಂದು ಸಚಿವರು ನೆನಪು ಮಾಡಿಕೊಂಡರು.

“ಇಲ್ಲಿನ ಸಂಸದರು ನಮ್ಮ ಮುಖ್ಯಮಂತ್ರಿ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದನ್ನು ನಾನು ಖಂಡಿಸಿದ್ದೆ. ಆ ವೇಳೆ ತಮ್ಮ ಜಿಲ್ಲೆಗೆ ಬಂದು ಮಾತನಾಡಲು ಯಾವುದೇ ಅಂಜಿಕೆ ಇಲ್ಲ ಎಂದಿದ್ದೆ. ಇದೀಗ ನಿಮ್ಮ ಜಿಲ್ಲೆಗೆ ಬಂದು ಮಾತನಾಡುತ್ತಿದ್ದೇನೆ” ಎಂದು ಸಂಸದ ಅನಂತಕುಮಾರ್ ಹೆಗಡೆ ಅವರ ಹೆಸರು ಹೇಳದೇ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, “ತುಳು ಭಾಷೆಗೆ ಎರಡನೇ ಭಾಷೆಯ ಮಹತ್ವ ನೀಡಬೇಕು. ಇನ್ನು ಸರ್ಕಾರದ ನಿಲುವು ಹಾಗೂ ವಿರೋಧ ಪಕ್ಷದ ಟೀಕೆಗೆ ಗಟ್ಟಿ ಧ್ವನಿಯಲ್ಲಿ ನಿರಂತರವಾಗಿ ಪ್ರತಿಪಾದನೆ ಮಾಡುತ್ತಿರುವ ಏಕೈಕ ವ್ಯಕ್ತಿ ಶಿವರಾಜ್ ತಂಗಡಗಿ” ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪಕ್ಷದ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಎಂ.ಎ.ಗಫೂರ್, ರಮೇಶ್ ಕಾಂಚನ್, ಕಿಶನ್ ಹೆಗ್ಡೆ, ದಿನಕರ ಹೇರೂರು, ಗೀತಾ ವಾಗ್ಲೆ, ಸದಾಶಿವ ದೇವಾಡಿಗ, ತಿಮ್ಮ ಪೂಜಾರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X