ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಕೇಂದ್ರ ಸರ್ಕಾರವು ಮರಣೋತ್ತರ ಭಾರತ ರತ್ನ ಪ್ರಶಸ್ತಿ ಪ್ರಕಟಿಸಿದೆ.
ಸಮಾಜವಾದಿ ನಾಯಕ ಕರ್ಪೂರಿ ಠಾಕೂರ್ ಅವರ ಜನ್ಮ ಶತಮಾನೋತ್ಸವ ಆಚರಣೆಯ ಒಂದು ದಿನದ ಮೊದಲೇ ರಾಷ್ಟ್ರಪತಿ ಕಚೇರಿಯು ಪ್ರಶಸ್ತಿಯನ್ನು ಪ್ರಕಟಿಸಿದೆ.
1970ರ ಅವಧಿಯಲ್ಲಿ ಬಿಹಾರದ ಮುಖ್ಯಮಂತ್ರಿಯಾಗಿದ್ದ ಇವರು ಸಮಾಜದಲ್ಲಿ ತುಳಿತಕ್ಕೊಳಗಾದ ವರ್ಗದವವರ ಪರವಾಗಿ ಹೆಚ್ಚು ಕೆಲಸ ಮಾಡಿದ್ದರು. ಉತ್ತರ ಭಾರತದಲ್ಲಿ ಹೋರಾಟ ಮಾಡಿದ ಕರ್ಪೂರಿ ಅವರನ್ನು ಸಾಮಾಜಿಕ ನ್ಯಾಯದ ಹರಿಕಾರ ಎಂದು ಕರೆಯುತ್ತಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯಾವುದು ರಾಮರಾಜ್ಯ? ಗಾಂಧೀಜಿ ಹೇಳಿದ್ದೇ, ಪ್ರಧಾನಿ ಪಾಲಿಸುತ್ತಿರುವುದೇ?
ತಮ್ಮ ವಿದ್ಯಾರ್ಥಿ ದಿನಗಳಲ್ಲಿ ರಾಷ್ಟ್ರೀಯವಾದಿ ವಿಚಾರಗಳಿಂದ ಕರ್ಪೂರಿ ಅವರು ಆಳವಾಗಿ ಪ್ರಭಾವಿತರಾಗಿದ್ದರು. ಅವರ ರಾಜಕೀಯ ಸಿದ್ಧಾಂತವು ‘ಲೋಹಿಯಾ’ ಚಿಂತನೆಯಿಂದ ಮತ್ತಷ್ಟು ರೂಪುಗೊಂಡಿತು. ಇದು ತುಳಿತಕ್ಕೊಳಗಾದವರ ಸಬಲೀಕರಣಕ್ಕೆ ಒತ್ತು ನೀಡಿತು.
ಸರ್ಕಾರಿ ಸೇವೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಸಮಾನ ಪ್ರಾತಿನಿಧ್ಯವನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿದ್ದ ಠಾಕೂರ್ ಅವರು ನವೆಂಬರ್ 1978 ರಲ್ಲಿ, ಬಿಹಾರದಲ್ಲಿ ಹಿಂದುಳಿದ ವರ್ಗಗಳಿಗೆ ಶೇ. 26 ರಷ್ಟು ಮೀಸಲಾತಿಯನ್ನು ಜಾರಿಗೆ ತಂದರು. ಇದು 1990 ರ ದಶಕದಲ್ಲಿ ಮಂಡಲ್ ಆಯೋಗದ ಶಿಫಾರಸುಗಳಿಗೆ ವೇದಿಕೆಯನ್ನು ಸಿದ್ಧಪಡಿಸಿತು.