ವಿಜಯಪುರ | ಸುಭಾಷ್ ಚಂದ್ರ ಬೋಸ್ ಜನ್ಮ ದಿನಾಚರಣೆ ಕಾರ್ಯಕ್ರಮ

Date:

Advertisements

ದಿನೇ ದಿನೇ ಸಾಂಸ್ಕೃತಿಕವಾಗಿ, ನೈತಿಕವಾಗಿ ಅಧಃಪತನ ಹೊಂದುತ್ತಿರುವ ಪ್ರಸಕ್ತ ಸಾಮಾಜಿಕ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳ ನಡುವೆ ಸ್ವಾತಂತ್ರ‍್ಯ ಹೋರಾಟಗಾರ, ಮಹಾನ್ ಕ್ರಾಂತಿಕಾರಿ ನೇತಾಜಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಖುದಿರಾಮ್ ಬೋಸ್, ಅಶ್ವಾಖುಲ್ಲಾ ಖಾನ್ ಇನ್ನಿತರ ವಿಚಾರ, ಆದರ್ಶ ಹಾಗೂ ಮೌಲ್ಯಗಳನ್ನು ವಿದ್ಯಾರ್ಥಿಗಳ ಮೈಗೂಡಿಸಿಕೊಳ್ಳಬೇಕು ಎಂದು ಎಐಡಿಎಸ್‌ಒ ಮುಖಂಡೆ ಕಾವೇರಿ ರಜಪೂತ್ ಹೇಳಿದ್ದಾರೆ.

ಮಂಗಳವಾರ ವಿಜಯಪುರದ ಎಸ್‌ಎಸ್‌ ಹೈಸ್ಕೂಲ್‌ನಲ್ಲಿ ಆಯೋಜಿಸಿದ್ದ ನೇತಾಜಿ ಸುಭಾಷ್ ಚಂದ್ರಬೋಸ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಭಾರತೀಯರ ಪರವಾಗಿ ನಿಂತು, ಸ್ವಾತಂತ್ರ‍್ಯದ ಧ್ಯೇಯಕ್ಕಾಗಿ, ನನ್ನ ಜೀವನವನ್ನು ನೀಡಲು ಸಿದ್ಧನಿದ್ದೇನೆ. ಸತ್ಯಕ್ಕೆ ಏನಾದರೂ ಮಹತ್ವವಿದ್ದಲ್ಲಿ, ದೇಶದ ಜನ ಮುಂದೊಂದು ದಿನ ನನ್ನ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತಾರೆಂದು ನೇತಾಜಿ ಹೇಳಿದ್ದರು” ಎಂದು ಅವರು ತಿಳಿಸಿದರು.

Advertisements

“ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಪ್ರತಿಯೊಬ್ಬರಿಗೂ ಶಿಕ್ಷಣ, ಉದ್ಯೋಗ, ಹೆಣ್ಣು ಮಕ್ಕಳು ಘನತೆ ಗೌರವದಿಂದ ಬದುಕುವ ಸಮ ಸಮಾಜ ನಿರ್ಮಾಣದ ಕನಸನ್ನು ಕಂಡಿದ್ದರು. ಆದರೆ, ಅದಕ್ಕೆ ತದ್ವಿರುದ್ಧವಾಗಿ ಪ್ರಸ್ತುತ, ಶಿಕ್ಷಣದ ವ್ಯಾಪಾರೀಕರಣ, ನಿರುದ್ಯೋಗ, ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹೆಚ್ಚಾಗುತ್ತಲೇ ಇವೆ. ಇಂತಹ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ನೇತಾಜಿಯವರ ವಿಚಾರಗಳನ್ನು ಅರಿತು, ಮೈಗೂಡಿಸಿಕೊಂಡು ಅನ್ಯಾಯ ಹಾಗೂ ಅಸತ್ಯದೊಂದಿಗೆ ಹೋರಾಡುತ್ತಾ ನೇತಾಜಿ ಅವರ ಕನಸಿನ ಭಾರತವನ್ನು ನಿರ್ಮಿಸುವ ಸಂಕಲ್ಪ ಮಾಡಬೇಕಿದೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X