ದಕ್ಷಿಣ ಕನ್ನಡ | ರಾಮರಾಜ್ಯದ ಆಶಯವನ್ನು ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿದೆ: ಸಚಿವ ದಿನೇಶ್ ಗುಂಡೂರಾವ್

Date:

Advertisements

ಸರ್ವರಿಗೂ ನ್ಯಾಯ ಮತ್ತು ಸುಖೀರಾಜ್ಯಕ್ಕೆ ಪೂರಕವಾದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯ ಕಾಂಗ್ರೆಸ್‌ ಸರ್ಕಾರವು ರಾಮರಾಜ್ಯದ ಪರಿಕಲ್ಪನೆಯನ್ನು ಜಾರಿಗೆ ತಂದಿದೆ ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. “ಜನರು ಆರ್ಥಿಕವಾಗಿ ಸಬಲೀಕರಣಗೊಂಡು ನೆಮ್ಮದಿಯಿಂದ ಬಾಳಬೇಕು ಎಂಬ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಹಿಂದೆ ಒಂದು ಯೋಜನೆ ರೂಪಿಸಿ ಅನುಷ್ಠಾನಗೊಳಿಸಲು ವರ್ಷ ತಗಲುತ್ತಿತ್ತು. ಆದರೆ, ರಾಜ್ಯ ಸರ್ಕಾರವು ಕ್ಷಿಪ್ರಗತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ನೇರವಾಗಿ ಜನರ ಮನೆಗೆ ತಲುಪಿಸಿದೆ. ಯಾವುದೇ ಮಧ್ಯವರ್ತಿಗಳಿಲ್ಲದೇ, ಜನರೇ ಸ್ವಯಂ ಆಗಿ ಅರ್ಜಿ ಹಾಕಿ ಯೋಜನೆಯ ಲಾಭ ಪಡೆಯುತ್ತಿರುವುದು ಕಲ್ಯಾಣ ಕಾರ್ಯಕ್ರಮಗಳಲ್ಲಿ ಚಾರಿತ್ರಿಕವಾಗಿದೆ” ಎಂದು ಹೇಳಿದರು.

“ಪ್ರಸಕ್ತ ವರ್ಷ ಗ್ಯಾರಂಟಿ ಯೋಜನೆಗಳಿಗೆ 38 ಸಾವಿರ ಕೋಟಿ ರೂ. ಅನುದಾನ ವೆಚ್ಚ ಮಾಡಲಾಗುತ್ತಿದೆ. ಮುಂದಿನ ವರ್ಷ ಇದನ್ನು 58 ಸಾವಿರ ಕೋಟಿಗಳಿಗೆ ಹೆಚ್ಚಿಸಲಾಗುವುದು” ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

Advertisements

“ಜನರ ಸಮಸ್ಯೆಗಳಿಗೆ ಕ್ಷಿಪ್ರವಾಗಿ ಸ್ಪಂದಿಸಲು ಜನತಾದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇಲ್ಲಿ ಸ್ವೀಕರಿಸಲಾದ ಸಾರ್ವಜನಿಕರ ಅಹವಾಲುಗಳನ್ನು ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಲಿದ್ದಾರೆ. ಈ ಸಂಬಂಧ ಜಿಲ್ಲಾಡತದಿಂದ ವರದಿ ಪಡೆಯಲಾಗುವುದು” ಎಂದು ಸಚಿವರು ಹೇಳಿದರು.

“ಸುಳ್ಯ, ಕಡಬ ತಾಲೂಕಿನ ಸಮಸ್ಯೆಗಳ ಬಗ್ಗೆ ಅರಿವಿದೆ. ಅರಣ್ಯ ಭೂಮಿ, ಸರ್ವೇ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸಲಾಗುವುದು” ಎಂದು ಸಚಿವರು ಹೇಳಿದರು.

ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪಂ. ಸಿಇಓ ಡಾ. ಕೆ. ಆನಂದ್ ಉಪಸ್ಥಿತರಿದ್ದರು.

ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ಜನತಾ ದರ್ಶನಕ್ಕೂ ಮೊದಲು ಸಚಿವ ದಿನೇಶ್ ಗುಂಡೂರಾವ್ ಅವರು ಸುಳ್ಯ ತಾಲೂಕಿನ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಪರಿಶಿಷ್ಟ ವರ್ಗಗಳ ಬಾಲಕರ ಹಾಸ್ಟೆಲ್ ಬಾಳಿಲ, ವಾಲ್ಮೀಕಿ ಆಶ್ರಮ ಶಾಲೆ ಬಾಳಿಲ, ವಾಲ್ಮೀಕಿ ಆಶ್ರಮ ಶಾಲೆ ಸುಬ್ರಹ್ಮಣ್ಯ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ ಸುಳ್ಯ ಕಚೇರಿ ಶಂಕುಸ್ಥಾಪನೆ, ಸುಳ್ಯ ತಾಲೂಕಿನ ವಿವಿಧ ಲೋಕೋಪಯೋಗಿ ರಸ್ತೆಗಳನ್ನು ರೂ. 190 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಸಚಿವರು ಚಾಲನೆ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X