ಕಲಬುರಗಿ ನಗರದ ಕೋಟನೂರ(ಡಿ) ಗ್ರಾಮದ ಲುಂಬುಣಿ ಉದ್ಯಾನವನದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀರು ಬಂಧಿಸಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ, ತನಿಖೆಯ ನಂತರ ನಾಲ್ಕು ಜನ ಆಪಾದಿತರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಶಾಂತತೆಯನ್ನು ಕಾಪಾಡಬೇಕು ಎಂದು ಪೊಲೀಸರು ಕೋರಿದ್ದಾರೆ.