ರಾಮನಗರ | ಕ್ರೆಡಿಟ್ ಕಾರ್ಡ್ ಏಜೆನ್ಸಿ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

Date:

Advertisements
  • ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಬಲಿಯಾದ ವ್ಯಕ್ತಿ
  • ಖಾಸಗಿ ಏಜೆನ್ಸಿ ವಿರುದ್ಧ ಪೊಲೀಸರಿಗೆ ದೂರು ನೀಡಿದ ಮೃತನ ಪತ್ನಿ

ಇತ್ತೀಚಿನ ದಿನಗಳಲ್ಲಿ ಮೇಲೆ ಬಿದ್ದು ಸುಲಭವಾಗಿ ಸಾಲ ನೀಡುವ ಖಾಸಗಿ ಕಂಪನಿಗಳು, ಬಳಿಕ ಅಧಿಕ ಬಡ್ಡಿ ವಿಧಿಸಿ ಸಾಲದ ಸುಳಿಗೆ ಸಿಲುಕಿಸುತ್ತಿವೆ. ಅದರಿಂದ ಹೊರಬರಲಾರದೆ ಹಲವರು ಪ್ರಾಣ ಕಳೆದುಕೊಳ್ಳುತ್ತಿರುವ ನಿದರ್ಶನಗಳು ಸಾಕಷ್ಟು ನಡೆಯುತ್ತಿವೆ. ಅಂತಹದ್ದೆ ಪ್ರಕರಣ ರಾಮನಗರ ಜಿಲ್ಲೆಯಲ್ಲಿ ವರದಿಯಾಗಿದೆ.

ಕ್ರೆಡಿಟ್ ಕಾರ್ಡ್ ಹಣ ವಸೂಲಿ ಮಾಡುವ ಏಜೆನ್ಸಿಯ ಕಿರುಕುಳದಿಂದ ಮನನೊಂದು ವ್ಯಕ್ತಿಯೊಬ್ಬರು ರಾಮನಗರ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಿಲ್ಲೆಯ ಕನಕಪುರದ ಕೆಎನ್ಎಸ್ ವೃತ್ತದಲ್ಲಿ ಸೈಬರ್ ಸೆಂಟರ್ ನಡೆಸುತ್ತಿದ್ದ ಬಸವೇಶ್ವರ ನಗರದ ನಿವಾಸಿ ಸಂತೋಷ್ (41) ಆತ್ಮಹತ್ಯೆಗೆ ಬಲಿಯಾದ ವ್ಯಕ್ತಿ.

Advertisements

ಹಲವು ಕ್ರೆಡಿಟ್ ಕಾರ್ಡ್‌ಗಳ ಮೂಲಕ ಸಾಲ ಪಡೆದಿದ್ದ ಸಂತೋಷ್, ಹಣ ಮರುಪಾವತಿಸುವಲ್ಲಿ ವಿಫಲರಾಗಿದ್ದರು. ಹಣ ವಸೂಲಿ ಏಜೆನ್ಸಿಯವರು ಮನೆ ಬಳಿಗೆ ಬಂದು ಗಲಾಟೆ ಮಾಡಿದ್ದರು. ಶೀಘ್ರ ಹಣ ಪಾವತಿಸುವಂತೆ ಎಚ್ಚರಿಕೆ ನೀಡಿ ಹೋಗಿದ್ದರು ಎಂದು ಸಂತೋಷ್ ಡೆತ್‌ನೋಟ್‌ ಬರೆದಿದ್ದಾರೆ.

ನಾಳೆ ಮತ್ತೆ ನಿಮ್ಮ ಮನೆಗೆ ಬರುತ್ತೇವೆ, ಅಷ್ಟರಲ್ಲಿ ಸಾಲ ಪಡೆದ ಪೂರ್ಣ ಹಣವನ್ನು ಮರುಪಾವತಿ ಮಾಡದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕರೆ ಮಾಡಿ ಎಚ್ಚರಿಕೆ ನೀಡಿದ್ದರು. ಇದರಿಂದ ಭಯಗೊಂಡಿದ್ದ ಸಂತೋಷ್ ಭಾನುವಾರ ಡೆತ್ ನೋಟು ಬರೆದಿಟ್ಟು ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಂತೋಷ್ ಮನೆಗೆ ಬಂದಿದ್ದ ಹಣ ರಿಕವರಿ ಏಜೆನ್ಸಿ ಸಿಬ್ಬಂದಿ ಕೊಠಡಿ ಬಾಗಿಲು ಒಡೆದು ನೋಡಿದಾಗ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಸಂತೋಷ್‌ ಮೃತದೇಹ ನೋಡಿದ ಸಾಲ ವಸೂಲಾತಿಗೆ ಬಂದವರು ಪರಾರಿಯಾಗಿದ್ದಾರೆ.

“ನನ್ನ ಗಂಡನ ಸಾವಿಗೆ ಸಾಲ ವಸೂಲಿ ಏಜೆನ್ಸಿ ಸಿಬ್ಬಂದಿಯೇ ಕಾರಣ. ಅವರ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಸಂತೋಷ್ ಪತ್ನಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸೈಬರ್ ವಂಚನೆ, ಜೂಜಾಟ, ವ್ಯಸನದ ವಿರುದ್ಧ ಸಾಲಿಡಾರಿಟಿ ಜಾಗೃತಿ ಅಭಿಯಾನ : ಸೈಯದ್ ತನ್ವೀರ್

ಯುವ ಪೀಳಿಗೆಯನ್ನು ಸೈಬರ್ ವಂಚನೆ, ಆನ್‌ಲೈನ್ ಜೂಜಾಟ ಹಾಗೂ ಗೇಮಿಂಗ್ ವ್ಯಸನದ...

ಹಾವೇರಿ | ಕಾನೂನು ಸುವ್ಯವಸ್ಥೆ ಕಾಪಾಡಿ: ಡಿವೈಎಸ್ಪಿ ಗುರುಶಾಂತಪ್ಪ

"ಗೌರಿ ಗಣೇಶ ಹಬ್ಬ ಹಾಗೂ ಈದ್‌ ಮಿಲಾದ್ ಹಬ್ಬವನ್ನು ಹಿಂದೂ–ಮುಸ್ಲಿಂ ಸಮುದಾಯದವರು...

ಶಿರಸಿ | 35 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿ ಕೊನೆಗೂ ಬಂಧನ

ಹಳೆಯ ಪ್ರಕರಣವೊಂದರಲ್ಲಿ ಸುಮಾರು 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಉತ್ತರ ಕನ್ನಡ...

ಹಾವೇರಿ | ಗುಣಾತ್ಮಕ ಶಿಕ್ಷಣಕ್ಕಾಗಿ ಕಲಿಕೆ: ಕ್ಷೇತ್ರ ಶಿಕ್ಷಣಾಧಿಕಾರಿ ಶ್ಯಾಮಮಸುಂದರ ಅಡಿಗ

"ಎಲ್. ಬಿ.ಎ.ಫ್.ಲ್ ಎನ್ ಕಾರ್ಯಕ್ರಮಗಳ ಪರಿಣಾಮ ಮುಂದಿನ ದಿಗಳಲ್ಲಿ ಕಾಣಬಹುದು. ಆಂಗ್ಲ...

Download Eedina App Android / iOS

X