ಕೆಐಎ | ಈ ತಿಂಗಳು ಅಂತ್ಯದೊಳಗೆ ಇಂದಿರಾ ಕ್ಯಾಂಟೀನ್ ತಲೆ ಎತ್ತುವ ಸಾಧ್ಯತೆ?

Date:

Advertisements

ದೇಶದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ವಿಮಾನ ನಿಲ್ದಾಣಗಳ ಪೈಕಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೂ ಒಂದು. ಈ ವಿಮಾನ ನಿಲ್ದಾಣದಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್​ಗಳಿವೆ. ಆದರೆ, ಇಲ್ಲಿ ದೊರಕುವ ಆಹಾರಗಳ ದರ ಜನಸಾಮಾನ್ಯರಿಗೆ ನಿಲುಕದ್ದಾಗಿವೆ. ದುಬಾರಿ ಬೆಲೆಯ ಆಹಾರವನ್ನು ಬಡ ಕಾರ್ಮಿಕರು ಕೊಳ್ಳಲು ಅಸಾಧ್ಯವಾಗಿದೆ. ಕ್ಯಾಬ್‌ ಚಾಲಕರಿಗೂ ಇದು ಕಷ್ಟವಾಗಿದೆ. ಈ ಹಿನ್ನೆಲೆ, ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಆಹಾರ ಒದಗಿಸಲು ರಾಜ್ಯ ಸರ್ಕಾರ ಕೆಐಎನಲ್ಲಿ 2 ಇಂದಿರಾ ಕ್ಯಾಂಟೀನ್​ಗಳನ್ನು ತೆರೆಯಲು ತೀರ್ಮಾನಿಸಿದೆ. ಈ ತಿಂಗಳು ಅಂತ್ಯದೊಳಗೆ ಇಂದಿರಾ ಕ್ಯಾಂಟೀನ್ ತಲೆ ಎತ್ತುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ವಿಮಾನ ನಿಲ್ದಾಣದ ಸಿಬ್ಬಂದಿ, ಚಾಲಕರು ಮತ್ತು ಕಾರ್ಮಿಕರು ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸುವಂತೆ ಮನವಿ ಮಾಡಿದ್ದರು. ಕಾರ್ಮಿಕರ ಬೇಡಿಕೆಗೆ ಸ್ಪಂದಿಸಿದ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್ ಸ್ಥಾಪನೆಗೆ ಮುಂದಾಗಿದೆ. ಟರ್ಮಿನಲ್ -1ನ ಮುಂಭಾಗದ ಪಾರ್ಕಿಂಗ್ ಏರಿಯಾದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುತ್ತಿದೆ.

“ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದಂತೆ ದೇವನಹಳ್ಳಿ ವಿಮಾನ ನಿಲ್ದಾಣದ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪನೆ ಕಾರ್ಯವನ್ನು ತೀವ್ರಗತಿಗೊಳಿಸಲಾಗಿದ್ದು, ಟೆಂಡರ್ ಕರೆಯಲಾಗಿದೆ” ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.

Advertisements

ಈ ಇಂದಿರಾ ಕ್ಯಾಂಟೀನ್‌ನಲ್ಲಿ ಪ್ರತಿದಿನ ಸುಮಾರು 2,000 ಮಂದಿ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟವನ್ನು ಸೇವನೆ ಮಾಡಬಹುದು ಎಂದು ಮುಖ್ಯ ಆರೋಗ್ಯ ಅಧಿಕಾರಿ ಸಿರಾಜ್ ಅಹ್ಮದ್ ಮದನಿ ಅವರು ಹೇಳಿದ್ದಾರೆ.

ವಿಮಾನ ನಿಲ್ದಾಣದ ಪಾರ್ಕಿಂಗ್ ಏರಿಯಾ ಸಂಖ್ಯೆ 7ರಲ್ಲಿ ಇಂದಿರಾ ಕ್ಯಾಂಟೀನ್ ಅನ್ನು ಸ್ಥಾಪಿಸಲಾಗುತ್ತಿದೆ. ಇದರಿಂದ ಕೆಳ, ಮಧ್ಯಮ ವರ್ಗದವರು ಅಥವಾ ದುಬಾರಿ ಆಹಾರವನ್ನು ಪಡೆಯಲು ಸಾಧ್ಯವಾಗದ ಕಾರ್ಮಿಕರಿಗೆ ಸಹಾಯವಾಗಲಿದೆ. ಕ್ಯಾಂಟೀನ್‌ನಲ್ಲಿ ಅಗ್ಗದ ದರದಲ್ಲಿ ಆರೋಗ್ಯಕರ ಆಹಾರವನ್ನು ಸೇವನೆ ಮಾಡಬಹುದಾಗಿದೆ.

ಈ ಸುದ್ದಿ ಓದಿದ್ದೀರಾ? ಜಯದೇವ ಆಸ್ಪತ್ರೆ ನಿರ್ದೇಶಕ ಅವಧಿ ಅಂತ್ಯ: ರಾಜಕೀಯದಲ್ಲಿ ಆಸಕ್ತಿಯಿಲ್ಲ ಎಂದ ಡಾ.ಮಂಜುನಾಥ್

ಚಾಲಕರ ಮನವಿಗೆ ಸ್ಪಂದಿಸಿದ ಸರ್ಕಾರ

2023ರ ಜುಲೈ 27ರಂದು ಕ್ಯಾಬ್ ಚಾಲಕರು ಬಂದ್​ಗೆ ಕರೆ ನೀಡಿದ್ದರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಮಧ್ಯಸ್ಥಿಕೆಯಿಂದ ಬಂದ್ ಹಿಂಪಡೆಯಲಾಗಿತ್ತು. 2023ರ ಜುಲೈ 24 ರಂದು ಚಾಲಕರ ಸಂಘಗಳ ಒಕ್ಕೂಟದೊಂದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಭೆ ನಡೆಸಿದ್ದರು. ಸಚಿವರ ಭರವಸೆ ಮೇರೆಗೆ ಬಂದ್ ವಾಪಸ್ ಪಡೆಯಲಾಗಿತ್ತು. ಈ ಸಂದರ್ಭದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕೆಂದು ಮನವಿ ಸಲ್ಲಿಸಿದ್ದರು.

ಪ್ರತಿದಿನ ಸಾವಿರಾರು ಚಾಲಕರು ವಿಮಾನ ನಿಲ್ದಾಣಕ್ಕೆ ಬರುತ್ತಾರೆ. ಸಾವಿರಾರು ಜನರೂ ಸಹ ಆಗಮಿಸುತ್ತಾರೆ. ಈಗ ಇರುವ ಹೋಟೆಲ್​ಗಳಲ್ಲಿ ಎಲ್ಲರೂ ಊಟ ತಿಂಡಿ ಮಾಡಲು ಸಾಧ್ಯವಿಲ್ಲ. ಬಡ ಮತ್ತು ಮಧ್ಯಮ ವರ್ಗದ ಜನರ ಹಿತದೃಷ್ಟಿಯಿಂದ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ಚಾಲಕರು ಬೇಡಿಕೆ ಇಟ್ಟಿದ್ದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಸಚಿವರು, ಕ್ಯಾಂಟೀನ್ ತೆರೆಯುವ ಭರವಸೆ ನೀಡಿದ್ದರು.

ವಿಮಾನ ನಿಲ್ದಾಣದ ಆವರಣದಲ್ಲಿ ಕೈಗೆಟುಕುವ ದರದ ಆಹಾರಕ್ಕಾಗಿ ಓಲಾ, ಉಬರ್ ಮತ್ತು ಇತರ ಖಾಸಗಿ ಟ್ಯಾಕ್ಸಿ ಚಾಲಕರು ಪರದಾಡುತ್ತಿರುತ್ತಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಈ ಉಪಕ್ರಮವನ್ನು ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಬಿಬಿಎಂಪಿ ಮುಂದೆ ಪ್ರಸ್ತಾಪವಿಟ್ಟಿದ್ದರು. ಇದಕ್ಕೆ ಡಿ.ಕೆ ಶಿವಕುಮಾರ್ ಅವರು ಸ್ಪಂದನೆ ನೀಡಿದ್ದರು. ಇದರಂತೆ ಇಂದಿರಾ ಕ್ಯಾಂಟೀನ್ ಅನ್ನು ವಿಮಾನ ನಿಲ್ದಾಣದಲ್ಲಿ ಸ್ಥಾಪನೆ ಮಾಡಲಾಗುತ್ತಿದೆ.

ಹೊಸ ಆಹಾರ ಪಟ್ಟಿ

ಇಂದಿರಾ ಕ್ಯಾಂಟೀನ್​ಗಳಲ್ಲಿ ನೀಡಲಾಗುತ್ತಿರುವ ಆಹಾರಗಳ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದ್ದು, ಹೊಸ ಆಹಾರವನ್ನು ಪರಿಚಯಿಸಲು ಸರ್ಕಾರ ತೀರ್ಮಾನ ಮಾಡಿದೆ.

ಹೊಸ ಮೆನುವಿನಲ್ಲಿ ರಾಗಿ ಮುದ್ದೆ, ಇಡ್ಲಿ, ಮಂಗಳೂರು ಬನ್ಸ್, ಬಿಸಿ ಬೇಳೆ ಬಾತ್, ಪಲಾವ್, ಖಾರಬಾತ್, ಪೊಂಗಲ್, ಬ್ರೆಡ್ ಜಾಮ್, ಚೌಚೌ ಬಾತ್ ಸೇರಿದಂತೆ ಹಲವು ಖಾದ್ಯಗಳು ನಿಗದಿ ಪಡಿಸಲಾದ ದಿನಗಳಲ್ಲಿ ಲಭ್ಯವಾಗಲಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X