ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಂಡು, ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದೆ.
ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿರುವ ಸಂಘಟನೆಯ ಕಾರ್ಯಕರ್ತರು, ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
“ಕಲಬುರಗಿಯ ಕೋಟ್ನೂರು ಡಿ. ಬಡಾವಣೆಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಕಿಡಿಗೇಡಿಗಳು ಅಪಮಾನಗೊಳಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಾರೆ, ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಶಿವರಾಜ ಜಾನೇಕಲ್, ರಾಜ್ಯ ಸಂ. ಕಾರ್ಯದರ್ಶಿ ಕೆ.ಈ. ಕುಮಾರ , ಉಪಾಧ್ಯಕ್ಷ ಗುರುದೇವ, ಜಿಲ್ಲಾ ಕಾರ್ಯದರ್ಶಿ, ವೆಂಕಟೇಶ ಕಲ್ಲೂರ್‌ಕರ್ ತಮ್ಮಣ್ಣ ವಕೀಲರು,ಎಂ.ಮಾರೆಪ್ಪ, ಮಧುಕಾಂತ, ಶ್ರೀನಿವಾಸ ಉಪಸ್ಥಿತರಿದ್ದರು.
ವರದಿ : ಹಫೀಜುಲ್ಲ