ದಕ್ಷಿಣ ಕನ್ನಡ | ಮಂಗಳೂರು ವಿವಿಯಲ್ಲಿ ಅಮ್ಮೆಂಬಳ ಪ್ರಶಸ್ತಿ ಪ್ರದಾನ

Date:

Advertisements

ಕನ್ನಡ‌ ಸಾಹಿತ್ಯದಲ್ಲಿ ಕೆಲಸ ಮಾಡುವವರಿಗೆ ಆತ್ಮಸ್ಥೈರ್ಯ ತುಂಬಿ, ಹುರುಪು ನೀಡುವ ಕಾರ್ಯ ನಿರಂತರವಾಗಿ ನಡೆಯಬೇಕು. ಕನ್ನಡ ಭಾಷೆ‌ ಎಂಟು ಜ್ಞಾನ ಪೀಠ ಪ್ರಶಸ್ತಿಗಳನ್ನು ತಂದುಕೊಟ್ಟಿರುವುದು ಕನ್ನಡದ ಶಕ್ತಿಯಾಗಿದೆ. ಅಮ್ಮೆಂಬಳ ಶಂಕರನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನವು ಕನ್ನಡದ ವಿದ್ವಾಂಸರನ್ನು, ಸಾಹಿತಿಗಳನ್ನು ಗುರುತಿಸಿ ಅಮ್ಮೆಂಬಳ ಪ್ರಶಸ್ತಿ ನೀಡಿ ಗೌರವಿಸಿರುವುದು ಮಹತ್ವದ ಕಾರ್ಯ ಎಂದು ಕರ್ಣಾಟಕ ಬ್ಯಾಂಕ್‌ನ ಮಾಜಿ ನಿರ್ದೇಶಕ, ಕಾರ್ಯನಿರ್ವಹಣಾಧಿಕಾರಿ ಡಾ. ಮಹಾಬಲೇಶ್ವರ ಎಂ.ಎಸ್ ಹೇಳಿದರು.

ಮಂಗಳೂರು ವಿಶ್ವವಿದ್ಯಾಲಯದ ವಿಪಿ ಕನ್ನಡ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಅಮ್ಮೆಂಬಳ ಶಂಕರನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ ಆಯೀಜಿಸಿದ್ದ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಡಾ.ಹಿ.ಚಿ.ಬೋರಲಿಂಗಯ್ಯ, ಡಾ.ಬಸವರಾಜ ಕಲ್ಗುಡಿ, ಡಾ.ಪಾದೆಕಲ್ಲು ವಿಷ್ಣುಭಟ್, ಡಾ.ಬಿ. ಜನಾರ್ದನ ಭಟ್ ಅವರಿಗೆ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

“ಕನ್ನಡ ನೆಲ ಜಲ ಸೇರಿದಂತೆ ಕನ್ನಡ‌ ಭಾಷೆಯ ಸಂರಕ್ಷಣೆಗಾಗಿ ನಾವೆಲ್ಲರೂ ಒಗ್ಗಟ್ಟಾಗಿ ಸಾಮಾಜಿಕ ಜವಾಬ್ಧಾರಿಯೊಂದಿಗೆ ಹೋರಾಡಿದರೆ ಇಂದು ಯಾವುದೇ ಕನ್ನಡ ಶಾಲೆಗಳು ಮುಚ್ಚಲು ಸಾಧ್ಯವಿಲ್ಲ” ಎಂದರು.

Advertisements

ಮಂಗಳೂರು ವಿವಿ ಕುಲಪತಿ ಪ್ರೊ.ಜಯರಾಜ್ ಅಮೀನ್ ಮಾತನಾಡಿ, “ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಅಪೂರ್ವ ಕೊಡುಗೆಗಾಗಿ ನೀಡುವ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿಯು ಅತ್ಯಂತ ಮಹತ್ವವಾದುದು. ನಾಲ್ಬರು ಹಿರಿಯ ಸಾಹಿತಿಗಳಿಗೆ ಅರ್ಹವಾಗಿಯೇ ಈ ಪ್ರಶಸ್ತಿ ಸಂದಿವೆ” ಎಂದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಹಿ.ಚಿ ಬೋರಲಿಂಗಯ್ಯ, “ಕನ್ನಡದ ಕೆಲಸಗಳನ್ನು ನಾವು ತಪಸ್ಸಿನ ರೀತಿಯಲ್ಲಿ ಮುನ್ನಡೆಸಿದರೆ ಕನ್ನಡಕ್ಕೆ ಇನ್ನಷ್ಟು ಜ್ಞಾನಪೀಠ ಪ್ರಶಸ್ತಿಗಳು ಅರಸಿಕೊಂಡು ಬರಲಿವೆ. ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಅತ್ಯಂತ ಗೌರವಯುತ ಪ್ರಶಸ್ತಿಯಾಗಿದ್ದು, ಕೃತಜ್ಞನಾಗಿದ್ದೇನೆ” ಎಂದರು.

ಡಾ.ಬಸವರಾಜ ಕಲ್ಗುಡಿ ಮಾತನಾಡಿ, “ಕನ್ನಡ ಜೀವಂತವಾಗಿ,‌ ಸೃಜನ ಶೀಲತೆಯೊಂದಿಗೆ ಮುನ್ನಡೆಯಲು ತುಳುನಾಡಿನ ವಿದ್ವಾಂಸರ ಕೊಡುಗೆ ಅಪಾರವಾದುದು. ಅಮ್ಮೆಂಬಳರ ಕವಿತೆಗಳಲ್ಲಿ ಲೌಕಿಕತೆಯ ಪರ ಧ್ವನಿಯಿದೆ. ನವೋದಯ ಕಾಲದಲ್ಲಿ ಇದು ವಿಶೇಷ” ಎಂದರು.

ಪ್ರೊ.ಪಾದೆಕಲ್ಲು ವಿಷ್ಣುಭಟ್ ಅವರು ಮಾತನಾಡಿ,‌ “ಪಂಡಿತ ಪರಂಪರೆಯನ್ನು ನೋಡಿದ ತೃಪ್ತಿ ನನಗಿದೆ. ಹಿರಿಯ ಪಂಡಿತರಾದ ಅಮ್ಮೆಂಬಳ ಶಂಕರನಾರಾಯಣ ನಾವಡರ ಹೆಸರಿನಲ್ಲಿ ಪ್ರಶಸ್ತಿ ಸ್ವೀಕರಿಸಿರುವುದಕ್ಕೆ ನಾನು ಕೃತಜ್ಞನಾಗಿದ್ದೇನೆ” ಎಂದರು.

ಡಾ.ಬಿ ಜನಾರ್ದನ ಭಟ್ ಮಾತನಾಡಿ, “ಅಮ್ಮೆಂಬಳ ಶಂಕರನಾರಾಯಣ ನಾವಡರು ಸಾಹಿತ್ಯದ ಅಂತರ್ಜಲವನ್ನು ವೃದ್ಧಿಸಿದವರು. ಅವರ ಹೆಸರಿನಲ್ಲಿ ಪ್ರಶಸ್ತಿ ಸ್ವೀಕರಿಸಿರುವುದು ನನ್ನ ಜೀವನದ ಅವಿಸ್ಮರಣೀಯ ಕ್ಷಣ” ಎಂದರು.

ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಉಳ್ಳಾಲದ ಮಾಜಿ ಶಾಸಕರಾದ ಜಯರಾಮ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಕನ್ನಡ ವಿಭಾಗದ ಅಧ್ಯಕ್ಷರಾದ ಪ್ರೊ.ಸೋಮಣ್ಣ ಹೊಂಗಳ್ಳಿ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಕುವೆಂಪು ಭಾಷಾ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಡಾ.ಗಿರೀಶ್ ಭಟ್ ಅಜಕ್ಕಳ ಅವರು ಪ್ರಶಸ್ತಿ ಪುರಸ್ಕೃತರ ಬಗ್ಗೆ ಅಭಿನಂದನಾ ಭಾಷಣ ಮಾಡಿದರು. ಪ್ರೊ.ಎ.ವಿ.ನಾವಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಪ್ರಾಧ್ಯಾಪಕರಾದ ಡಾ.ಧನಂಜಯ ಕುಂಬ್ಳೆ ಅವರು ಕಾರ್ಯಕ್ರಮ‌‌ ನಿರೂಪಿಸಿದರು. ಡಾ.ಗಾಯತ್ರಿ ನಾವಡ ಅವರು ವಂದಿಸಿದರು.ಶ್ರೀದೇವಿ ಕಲ್ಲಡ್ಕ ಭಾವಗೀತೆಗಳನ್ನು ಹಾಡಿದರು. ಸಮಾರಂಭದಲ್ಲಿ ಜಾನಪದ ವಿದ್ವಾಂಸ ಪ್ರೊ.ಕೆ ಚಿನ್ನಪ್ಪಗೌಡ, ಅಮ್ಮೆಂಬಳ ಅವರ ಶಿಷ್ಯ ಪ್ರೊ.ಸುಬ್ಬ ಪಕ್ಕಳ, ಕನ್ನಡ ವಿಭಾಗದ ಡಾ.ನಾಗಪ್ಪ ಗೌಡ, ಡಾ.ಯಶುಕುಮಾರ್ ಮತ್ತಿತರರು ಭಾಗವಹಿಸಿದ್ದರು. ಪ್ರಶಸ್ತಿಯು ಸನ್ಮಾನ, ಪ್ರಶಸ್ತಿ ಫಲಕ ಮತ್ತು ಹತ್ತು ಸಾವಿರ ನಗದು ಒಳಗೊಂಡಿತ್ತು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X