ರೆಪ್ತಕೋಶ್ ಬ್ರೆಟ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿಗದಿ ಮಾಡಿದ್ದ ಮಾರ್ಗಸೂಚಿಗಲನ್ನು ಅನುಸರಿಸಿ ಗ್ರಾಮ ಪಂಚಾಯತಿ ನೌಕರರಿಗೆ ಕನಿಷ್ಠ ವೇತನ ಗಮಧಿ ಮಾಡುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಹೈಕೋರ್ಟ್ ಆದೇಶವನ್ನು ಜಾರಿಗೊಳಿಸಿ, ಗ್ರಾಮ ಪಂಚಾಯತಿ ನೌಕರರಿಗೆ 31,000 ರೂ. ಕನಿಷ್ಠ ನಿಗದಿ ಮಾಡಬೇಕೆಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘ ಒತ್ತಾಯಿಸಿದೆ.
ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗಾರ, ಗುಮಾಸ್ತ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್. ಜವಾನ, ನೀರುಗಂಟಿ, ಸ್ವಚ್ಛತಾಗಾರರು ಇತ್ಯಾದಿ ನೌಕರರು ಗ್ರಾಮ ಪಂಚಾಯತಿಗಳು ಆರಂಭವಾದ ಕಾಲದಿಂದಲೂ ಕಡಿಮೆ ಕೂಲಿಗೆ ದುಡಿಯುತ್ತಿದ್ದಾರೆ. ಅವರಿಗೆ ಬೇರಾವುದೇ ಸೌಲಭ್ಯಗಳೂ ಇಲ್ಲ. ಹೀಗಾಗಿ, ಅವರು ನಿವೃತ್ತಿಯಾದಾಗ ಇಳಿ ವಯಸ್ಸಿನಲ್ಲಿ ಜೀವನ ನಡೆಸುವುದಕ್ಕೆ ಬಹಳ ದುಃಸ್ವರವಾಗುತ್ತದೆ. ಅವರಿಗೆ ಪಿಂಚಣಿ ನೀಡಲು ಸರ್ಕಾರವೇ ಆಯೋಗ ರಚಿಸಿತ್ತು. ಆಯೋಗವು ತನ್ನ ವರದಿಯನ್ನು ಇಲಾಖೆಗೆ ಸಲ್ಲಿಸಿದೆ. ವರದಿಯ ಶಿಫಾರಸ್ಸಿನಲ್ಲಿ ಪಿಂಚಣಿ ವ್ಯವಸ್ಥೆ ಜಾರಿ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.
ಸೇವಾ ಹಿರಿತನದ ವೇತನ ಹೆಚ್ಚಳ, ಆರೋಗ್ಯ ವಿಮೆ, ಐಪಿಡಿ ಸಾಲಪ್ಪ ವರದಿಯಂತೆ ಸ್ವಚ್ಛತಾಗಾರರ ನೇಮಕ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದೆ.
ಪ್ರತಿಭಟನಾಕಾರರ ಹಕ್ಕೊತ್ತಾಯಗಳು
1) ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು, ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಿ ಬಡವರ ಪರವಾದ ನೀತಿಗಳನ್ನು ಜಾರಿಗೆ ತರಬೇಕು.
2) ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ರೈತ ಬೆಳೆಗಳಿಗೆ ಲಾಭದಾಯಕ ಬೆಂಬಲ ಬೆಲೆ ಬೇಕು, ಖಾತರಿಪಡಿಸಬೇಕು, ರಸಗೊಬ್ಬರ ಒಳಗೊಂಡಂತೆ ಕೃಷಿ ಹಿಡುವಳಿಗಳಿಗೆ ಸಬ್ಸಿಡಿ ಕಡಿತಗೊಳಿಸುವ ನೀತಿಗಳನ್ನು
ಕೈಬಿಡುವುದು.
3) ರೈಲ್ವೆ, ವಿದ್ಯುತ್ ಸೇರಿದಂತೆ ಎಲ್ಲಾ ಕ್ಷೇತ್ರವನ್ನು ಎಲ್ಲಾ ಸ್ವರೂಪದ ಖಾಸಗೀಕರಣವನ್ನು ಕೈಬಿಡಬೇಕು.
4) ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ರೂ. 31,000 ನಿಗಧಿಗಾಗಿ,
5) ಕನಿಷ್ಠ ಪಿಂಚಣಿ ರೂ. 6000 ಸಾವಿರ ನಿಗಧಿಗಾಗಿ
6) ಐಪಿಡಿ ಸಾಲಪ್ಪ ವರದಿಯಂತೆ ಸ್ವಚ್ಛತಾಗಾರರನ್ನು ನೇಮಿಸಬೇಕು.
7) ಸೇವಾ ಹಿರಿತನದ ಪರಿಶೀಲಿಸಿ ವೇತನ ಹೆಚ್ಚಳ ಮಾಡಬೇಕು.
8) ತೀವ್ರವಾದ ಅನಾರೋಗ್ಯಕ್ಕೆ ತುತ್ತಾದ ನೌಕರರಿಗೆ ಆಸ್ಪತ್ರೆ ವೆಚ್ಚ ಭರಿಸಬೇಕು.
9) ಗುತ್ತಿಗೆ ಮತ್ತು ಹೊರಗುತ್ತಿಗೆ ನೇಮಕಾತಿ ರದ್ದತಿಗಾಗಿ
10) ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯವ್ರಹಿಸುವ ನೌಕರರಿಗೆ ವರ್ಗಾವಣೆಗೆ ಅವಕಾಶ ನೀಡಬೇಕು.
11) ನೀರುಗಂಟಿಗಳಿಗೆ ಮಲ್ಟಿಪರ್ಪಸ್ ಎಂದಿರುವುದನ್ನು ಕೈ ಬಿಟ್ಟು ನಿರ್ದಿಷ್ಟವಾದ ಕೆಲಸಗಳನ್ನು ನಿಗದಿಪಡಿಸಬೇಕು.
12) ಆದಾಯಕ್ಕೆ ಅನುಗುಣವಾಗಿ ಕರವಸೂಲಿಗಾರರ ಹುದ್ದೆಗಳನ್ನು ನಿಗದಿಗೊಳಿಸಬೇಕು.
ಪ್ರತಿಭಟನೆಯಲ್ಲಿ ಜೈಲಾಲ್ ತೋಟಮನಿ, ಮಲ್ಲಣ್ಣ ಬಿರೆದಾರ, ಅನೀತಾ ಹಿರೇಮಠ, ಮಲ್ಲಿಕಾರ್ಜುನ ಕೊಟಗಾರ, ಎಸ್.ಎಂ. ಸಾಗರ, ಮಲ್ಲಪ್ಪ ಬೆಳಗುಂದಿ, ದಾವಲಸಾಬ್ ನದಾಫ್, ಸಿದ್ರಾಮಪ್ಪ, ನಾಗಪ್ಪ ಜೋಗುಂಡಭಾವಿ, ಮಲ್ಲಿಕಾರ್ಜುನ ಬಂದಳ್ಳಿ, ಬಸವರಾಜ ಹೇಮನೂರ ಸುರಪುರ, ಯಲ್ಲಪ್ಪ ಸುರಪುರ, ಅಮರಪ್ಪ, ಮಲ್ಲಿಕಾರ್ಜುನ ಕಕ್ಕಸಗೇರಾ, ಮಹಾದೇವಪ್ಪ, ಮುನಿಯಪ್ಪಗೌಡ ಬಸವರಾಜ, ಎಲ್ ಮಲ್ಲಿಕಾರ್ಜುನ ಇನ್ನಿತರರು ಉಪಸ್ಥಿತರಿದ್ದರು.