‘ಕಾನೂನು ಕ್ರಮ ಕೈಗೊಳ್ಳುವೆ’ ಎಂದು ಪವಿತ್ರಾ ಗೌಡಗೆ ಎಚ್ಚರಿಕೆ ನೀಡಿದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ

Date:

Advertisements

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇಂದು ನಟ ದರ್ಶನ್ ಅವರ ಸುದ್ದಿ ಹರಿದಾಡುತ್ತಿದೆ. ಹೌದು, ರೂಪದರ್ಶಿ ಹಾಗೂ ನಟಿ ಪವಿತ್ರಾ ಗೌಡ ಅವರು ನಟ ದರ್ಶನ್‌ ಅವರೊಂದಿಗಿನ ಸಂಬಂಧಕ್ಕೆ 10 ವರ್ಷ ತುಂಬಿದೆ ಎಂದು ದರ್ಶನ್ ಅವರ ಜತೆಗಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ್ದಾರೆ. ಇತ್ತ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಪವಿತ್ರಾ ಗೌಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಪವಿತ್ರಾ ಗೌಡ ಪೋಸ್ಟ್‌ನಲ್ಲಿ ಏನಿದೆ?

ಪವಿತ್ರಾ ಗೌಡ ಅವರು ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರ ಜೊತೆಗಿನ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, “ಒಂದು ದಶಕ ಕಳೆಯಿತು, ಇದು ಹೀಗೆ ಮುಂದುವರೆಯುತ್ತದೆ. ನಮ್ಮ ಸಂಬಂಧಕ್ಕೆ 10 ವರ್ಷ ತುಂಬಿದೆ. ಧನ್ಯವಾದಗಳು” ಎಂದು ದರ್ಶನ್ ಹಾಗೂ ಅವರ ಮಗಳು ಖುಷಿಯನ್ನು ಟ್ಯಾಗ್ ಮಾಡಿ ಪೋಸ್ಟ್ ಮಾಡಿ ಕಾಮೆಂಟ್ ಸೆಕ್ಷನ್ ಆಫ್ ಮಾಡಿದ್ದಾರೆ.

Advertisements

ದರ್ಶನ್ ಜತೆಗೆ ಪೂಜೆಗೆ ಕುಳಿತಿರುವ ಫೋಟೊ, ಅವರು ಇಬ್ಬರು ಸಾಕಷ್ಟು ಪ್ರವಾಸ ಮಾಡಿರುವ ಫೋಟೋಗಳು ಹಾಗೂ ಪವಿತ್ರಾ ಗೌಡ ಮಗಳು ಖುಷಿ ಗೌಡ ಅವರ ಹುಟ್ಟುಹಬ್ಬ ಆಚರಣೆ ಮಾಡಿದ ಫೋಟೋಗಳು ಕೂಡ ಅದರಲ್ಲಿ ಇವೆ. ಅಲ್ಲದೇ, ಸಾಕಷ್ಟು ಸಂದರ್ಭಗಳಲ್ಲಿ ಇಬ್ಬರು ಒಟ್ಟಿಗೆ ಕ್ಲಿಕ್ಕಿಸಿಕೊಂಡಿರುವ ಫೋಟೊಗಳು ಆ ವಿಡಿಯೋದಲ್ಲಿದೆ.

ಪವಿತ್ರಾ ಗೌಡ

ವಿಜಯಲಕ್ಷ್ಮೀ ದರ್ಶನ್ ಪ್ರತಿಕ್ರಿಯೆ?

“ಬೇರೆಯವರ ಗಂಡನ ಜೊತೆಗಿನ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವಾಗ ಪವಿತ್ರಾ ಗೌಡ ಅವರು ಯೋಚನೆ ಮಾಡಬೇಕು ಎಂದು ನಾನು ಅಂದುಕೊಳ್ಳುತ್ತಿದ್ದೇನೆ. ಇದು ಅವರ ಕ್ಯಾರೆಕ್ಟರ್ ಏನು, ನೈತಿಕತೆ ಏನು ಎಂದು ತೋರಿಸುತ್ತದೆ. ಮದುವೆಯಾಗಿರುವ ಪುರುಷ ಎಂದು ಗೊತ್ತಿದ್ದರೂ ವೈಯಕ್ತಿಕ ಹಿತಾಸಕ್ತಿಗೋಸ್ಕರ ಅವರು ಈ ರೀತಿ ಮಾಡಿದ್ದಾರೆ. ಖುಷಿ ಗೌಡ ಅವರು ಪವಿತ್ರಾ ಗೌಡ ಮತ್ತು ಸಂಜಯ್ ಸಿಂಗ್ ಅವರ ಪುತ್ರಿ ಎನ್ನೋದನ್ನು ಈ ಫೋಟೋ ಸ್ಪಷ್ಟವಾಗಿ ಹೇಳುತ್ತದೆ. ನಾನು ಸಾಮಾನ್ಯವಾಗಿ ವೈಯಕ್ತಿಕ ವಿಷಯಗಳ ಬಗ್ಗೆ ಮಾತನಾಡಲು ಸೋಶಿಯಲ್ ಮೀಡಿಯಾವನ್ನು ಬಳಸೋದಿಲ್ಲ. ಆದರೆ, ಈಗ ನನ್ನ ಕುಟುಂಬದ ಪರವಾಗಿ ನಾನು ಮಾತನಾಡಬೇಕಿದೆ. ಇಡೀ ಸಮಾಜಕ್ಕೆ ಬೇರೆ ಚಿತ್ರಣವನ್ನು ನೀಡುತ್ತಿರುವ ವ್ಯಕ್ತಿಗಳ ವಿರುದ್ಧ ನಾನು ಕಾನೂನು ಕ್ರಮ ಕೈಗೊಳ್ಳುತ್ತೇನೆ” ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ.

ಅಲ್ಲದೇ, ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಅವರು, ಪವಿತ್ರಾ ಗೌಡ ಅವರ ಹಲವು ಫೋಟೋಗಳನ್ನು ಹಂಚಿಕೊಂಡು ‘ಇದು ಇವರ ನೈಜ ಮುಖ’ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ದರ್ಶನ್ 2

ನಮ್ಮ ಫ್ಯಾಮಿಲಿ ಎಲ್ಲದಕ್ಕಿಂತ ಹೆಚ್ಚು ಎಂದು ವಿಜಯಲಕ್ಷ್ಮಿ ಟ್ವೀಟ್

ವಿಜಯಲಕ್ಷ್ಮಿ ದರ್ಶನ್ ಇನ್‌ಸ್ಟಾಗ್ರಾಂನಲ್ಲಿ ರಾತ್ರಿ 11 ಗಂಟೆಗೆ ಒಂದು ಪೋಸ್ಟ್ ಮಾಡಿದ್ದು, ಅದರಲ್ಲಿ ಪತಿ ದರ್ಶನ್ ಹಾಗೂ ಪುತ್ರಿ ವಿನೀಶ್ ಜೊತೆಗಿನ ಫೋಟೊ ಹಂಚಿಕೊಂಡು ‘ಇದು ನಾವು, ನಮ್ಮ ಪ್ರೀತಿ ಪಾತ್ರರ ಜೊತೆ. ನಮ್ಮವರ ಫ್ಯಾಮಿಲಿ ಎಲ್ಲದಕ್ಕಿಂತ ಹೆಚ್ಚು’ ಎಂದು ಫೋಟೊಗೆ ಕ್ಯಾಪ್ಷನ್ ಕೊಟ್ಟಿದ್ದರು. ಈ ಪೋಸ್ಟ್‌ಗೆ ಪ್ರತಿಯಾಗಿ ಪವಿತ್ರಾ ಗೌಡ ಪೋಸ್ಟ್ ಮಾಡಿದ್ದಾರೆ ಎನ್ನುವ ಚರ್ಚೆ ಇದೀಗ ಶುರುವಾಗಿದೆ.

ಈ ಹಿಂದೆಯೂ ಹಲವು ಬಾರಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಮತ್ತು ಪವಿತ್ರಾ ಗೌಡ ಸಂಬಂಧದ ಕುರಿತು ಚರ್ಚೆಗಳಾಗಿವೆ. ಈ ವಿಷಯಕ್ಕೆ ಸಂಬಂಧಪಟ್ಟಂತೆ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಮತ್ತು ಪವಿತ್ರಾ ಗೌಡ ನಡುವೆ ಜಗಳವೂ ಆಗಿದೆ. ಮಗಳು ಖುಷಿ ಗೌಡ ಹುಟ್ಟುಹಬ್ಬದ ಸಂದರ್ಭದಲ್ಲಿಯೂ ಪವಿತ್ರಾ ಗೌಡ ಅವರು ದರ್ಶನ್‌ ಇರುವ ವಿಡಿಯೋವನ್ನು ಹಂಚಿಕೊಂಡಿದ್ದರು.

ಆ ವಿಡಿಯೋದಲ್ಲೂ ದರ್ಶನ್‌ ಮತ್ತು ಖುಷಿ ಗೌಡ ಡ್ಯಾನ್ಸ್‌ ಮಾಡುವ ದೃಶ್ಯವಿತ್ತು. ಖುಷಿ ಗೌಡ ಜತೆಗೆ ದರ್ಶನ್‌ ಕೇಕ್‌ ಕಟ್‌ ಮಾಡಿದ್ದರು. ಈ ವಿಡಿಯೋವನ್ನು ಪವಿತ್ರಾ ಗೌಡ ಅವರು ದರ್ಶನ್‌ಗೆ ಟ್ಯಾಗ್‌ ಮಾಡಿದ್ದರು. ಇದೀಗ ಪವಿತ್ರಾ ಗೌಡ ಮತ್ತು ವಿಜಯಲಕ್ಷ್ಮಿ ಅವರು ಬಹಿರಂಗವಾಗಿಯೇ ಜಗಳ ಆರಂಭಿಸಿದ್ದಾರೆ.

ಕಳೆದ ವರ್ಷ ದರ್ಶನ್​ರ ಹುಟ್ಟುಹಬ್ಬಕ್ಕೆ ನಟಿ ಮೇಘಾ ಶೆಟ್ಟಿ ಹಂಚಿಕೊಂಡಿದ್ದ ಚಿತ್ರದಲ್ಲಿ ದರ್ಶನ್ ಜೊತೆಗೆ ಪವಿತ್ರಾ ಗೌಡ ಇದ್ದರು. ಆಗ ಮೊದಲ ಬಾರಿಗೆ ಇದರ ವಿರುದ್ಧ ಬಹಿರಂಗವಾಗಿ ಧ್ವನಿ ಎತ್ತಿದ್ದ ದರ್ಶನ್​ರ ಪತ್ನಿ ವಿಜಯಲಕ್ಷ್ಮಿ, ಮೇಘಾ ಶೆಟ್ಟಿಗೆ ಕ್ಲಾಸ್ ತೆಗೆದುಕೊಂಡಿದ್ದರು. ಕೂಡಲೇ ಮೇಘಾ ಶೆಟ್ಟಿ, ತಾವು ಹಂಚಿಕೊಂಡಿದ್ದ ಚಿತ್ರಗಳನ್ನು ಡಿಲೀಟ್ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಜ.24 ರಂದು ಒಂದೇ ದಿನ ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 39 ಸಾವು

ಯಾರು ಈ ಪವಿತ್ರಾ ಗೌಡ?

ಪವಿತ್ರಾ ಗೌಡ ಅವರು ಮಾಡೆಲ್ ಮತ್ತು ನಟಿ. ಅಗಮ್ಯ, ಛತ್ರಿಗಳು ಸಾರ್ ಛತ್ರಿಗಳು, ಸಾಗುವ ದಾರಿ, ಪ್ರೀತಿ ಕಿತಾಬು ಸೇರಿದಂತೆ ಕನ್ನಡದ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ, ಇವರು ಅಷ್ಟಾಗಿ ಗುರುತಿಸಿಕೊಂಡಿಲ್ಲ. ಸಿನಿಮಾ ಕಾರ್ಯಕ್ರಮದಲ್ಲಿ ಒಬ್ಬ ಕಾಮನ್ ಫ್ರೆಂಡ್​ನಿಂದಾಗಿ ದರ್ಶನ್ ಹಾಗೂ ಪವಿತ್ರಾ ಪರಿಚಯ ಆಯಿತು ಎನ್ನಲಾಗುತ್ತದೆ. ಈ ಪರಿಚಯ ಆಪ್ತ ಸ್ನೇಹಕ್ಕೆ ತಿರುಗಿತು ಎನ್ನಲಾಗಿದೆ.

ಪವಿತ್ರಾ ಗೌಡಗೆ ಈಗಾಗಲೇ ವಿವಾಹವಾಗಿ ಖುಷಿ ಗೌಡ ಹೆಸರಿನ ಮಗಳಿದ್ದಾರೆ. ನಾಲ್ಕು ತಿಂಗಳ ಹಿಂದಷ್ಟೆ ತಮ್ಮ ಪುತ್ರಿ ಜತೆಗೆ ದರ್ಶನ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ವಿಡಿಯೋ ಹಂಚಿಕೊಂಡಿದ್ದರು. ಪವಿತ್ರಾ ಗೌಡ ಪತಿ ಹೆಸರು ಸಂಜಯ್ ಸಿಂಗ್ ಎಂದಾಗಿದ್ದು, ಪವಿತ್ರಾ ಹಾಗೂ ಸಂಜಯ್ ಹಲವು ವರ್ಷಗಳಿಂದ ಪರಸ್ಪರ ದೂರವೇ ಇದ್ದಾರೆ.

ಪವಿತ್ರಾ ಗೌಡ ರೆಡ್ ಕಾರ್ಪೆಟ್ ಸ್ಟುಡಿಯೋ 777 ಹೆಸರಿನ ಫ್ಯಾಷನ್ ಬುಟಿಕ್ ಅನ್ನು ಸಹ ನಡೆಸುತ್ತಿದ್ದು, ಸೆಲೆಬ್ರಿಟಿಗಳಿಗೆ ಹಾಗೂ ಜನಸಾಮಾನ್ಯರಿಗೆ ಉಡುಗೆಗಳನ್ನು ಮಾರಾಟ ಮಾಡುತ್ತಾರೆ.

ಸದ್ಯ ವಿಜಯಲಕ್ಷ್ಮೀ ಅವರನ್ನು ಬೆಂಬಲಿಸಿ ದರ್ಶನ್ ಅಭಿಮಾನಿಗಳು ಕಾಮೆಂಟ್‌ ಮಾಡುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X