ಹನಿಮೂನ್‌ಗೆ ಗೋವಾ ಬದಲು ಅಯೋಧ್ಯೆಗೆ ಕರೆದುಕೊಂಡು ಹೋದ ಪತಿ; ವಿಚ್ಛೇದನಕ್ಕೆ ಮುಂದಾದ ಪತ್ನಿ

Date:

Advertisements

ಮಧ್ಯಪ್ರದೇಶದ ಮಹಿಳೆಯೊಬ್ಬಳು ತನ್ನ ಗಂಡ ಹನಿಮೂನ್‌ಗೆ ಗೋವಾ ಬದಲು ಅಯೋಧ್ಯೆ ಹಾಗೂ ವಾರಣಾಸಿಗೆ ಕರೆದುಕೊಂಡು ಹೋಗಿದ್ದಕ್ಕೆ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾಳೆ.

ಮಾಧ್ಯಮಗಳ ವರದಿಗಳ ಪ್ರಕಾರ, ಈ ಅಸಮಾನ್ಯ ಪ್ರಕರಣವು ಜನವರಿ 19ರಂದು ವರದಿಯಾಗಿದೆ. 10 ದಿನಗಳ  ಪ್ರವಾಸದಿಂದ ವಾಪಸಾದ ನಂತರ ಮಹಿಳೆಯು ಭೋಪಾಲ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾಳೆ.

ವಿಚ್ಛೇದನದ ಅರ್ಜಿಯಲ್ಲಿ ಮಹಿಳೆಯು, ತನ್ನ ಪತಿ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಉತ್ತಮ ವೇತನ ಪಡೆಯುತ್ತಿದ್ದಾರೆ. ನಾನು ಕೂಡ ಕೆಲಸ ಮಾಡುತ್ತಿದ್ದು ಉತ್ತಮ ಸಂಬಳ ಪಡೆಯುತ್ತಿದ್ದೇನೆ. ಈ ಹಿನ್ನೆಲೆಯಲ್ಲಿ ಇಬ್ಬರು ವಿದೇಶಕ್ಕೆ ಹನಿಮೂನ್‌ಗೆ ಹೋಗುವುದು ದೊಡ್ಡ ವಿಷಯವಾಗಿರಲಿಲ್ಲ.

Advertisements

ಹಣಕಾಸಿನ ಯಾವುದೇ ನಿರ್ಬಂಧದ ಹೊರತಾಗಿಯೂ ಮಹಿಳೆಯ ಪತಿಯು ವಿದೇಶಕ್ಕೆ ಹನಿಮೂನ್‌ಗೆ ಕರೆದುಕೊಂಡು ಹೋಗಲು ನಿರಾಕರಿಸಿ ಭಾರತದಲ್ಲಿಯೇ ಇರುವ ಯಾವುದಾದರೂ ಸ್ಥಳಕ್ಕೆ ಕರೆದೊಯ್ಯಲು ಒತ್ತಾಯಿಸಿದ್ದ. ಇದಕ್ಕೆ ಕಾರಣ ತನ್ನ ಪೋಷಕರನ್ನು ಈತ ನೋಡಿಕೊಳ್ಳಬೇಕಿತ್ತು. ಈ ಹಿನ್ನೆಲೆಯಲ್ಲಿ ದಂಪತಿಗಳು ಗೋವಾ ಅಥವಾ ದಕ್ಷಿಣ ಭಾರತಕ್ಕೆ ಹೋಗಲು ಪರಸ್ಪರ ಒಪ್ಪಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವೇಗೌಡರ ದೈವಭಕ್ತಿ ಮತ್ತು ಕುಟುಂಬ ಕಲ್ಯಾಣ

ಆದಾಗ್ಯೂ, ಮಹಿಳೆಯ ಪತಿ ತನ್ನ ಪತ್ನಿಗೆ ತಿಳಿಸದೆ ಅಯೋಧ್ಯೆ ಹಾಗೂ ವಾರಣಾಸಿಗೆ ವಿಮಾನವನ್ನು ಕಾಯ್ದಿರಿಸಿದ್ದ. ನಂತರ ಪತ್ನಿಗೆ ಒಂದು ದಿನ ಮೊದಲು, ತನ್ನ ತಾಯಿಯು ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೂ ಮುನ್ನ ಅಯೋಧ್ಯೆ ನೋಡಬಯಸಿದ ಕಾರಣ ತಾನು ಪ್ರವಾಸದ ಯೋಜನೆಗಳನ್ನು ಬದಲಿಸಿರುವುದಾಗಿ ಹೇಳಿದ್ದ.

ಅಯೋಧ್ಯೆ ಪ್ರವಾಸಕ್ಕೆ ತೆರಳುವ ಸಂದರ್ಭದಲ್ಲಿ ಆಕೆ ಯಾವುದೇ ವಿರೋಧ ವ್ಯಕ್ತಪಡಿಸದೆ ಗಂಡನೊಂದಿಗೆ ಪ್ರವಾಸಕ್ಕೆ ತೆರಳಿದ್ದಳು. ದೇವಸ್ಥಾನ ಪ್ರವಾಸದಿಂದ ಬಂದ ನಂತರದಲ್ಲಿ ತನ್ನ ಪತಿಯ ವಿರುದ್ಧ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾಳೆ. ಅರ್ಜಿಯಲ್ಲಿ ತನ್ನ ಪತಿ ನನಗಿಂತ ತನ್ನ ಪೋಷಕರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದ ಎಂದು ತಿಳಿಸಿದ್ದಾಳೆ.

ಆದರೆ ಪತಿ ತನ್ನ ಹೇಳಿಕೆಯಲ್ಲಿ ಪತ್ನಿ ಸದಾ ಜಗಳವಾಡುತ್ತಿದ್ದಳು ಎಂದು ತಿಳಿಸಿದ್ದಾನೆ. ಪ್ರಸ್ತುತ ಇಬ್ಬರು ಭೋಪಾಲ್ ಕೌಟುಂಬಿಕ ನ್ಯಾಯಾಲಯದಲ್ಲಿ ಸಮಾಲೋಚನೆ ಪಡೆಯುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X