ಸಾಹಿತಿ ನಾ. ಡಿಸೋಜಾಗೆ ಪಂಪ ಪ್ರಶಸ್ತಿ; ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿವಿಧ ಪ್ರಶಸ್ತಿ ಪಟ್ಟಿ ಪ್ರಕಟ

Date:

Advertisements

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗುರುವಾರ ವಿವಿಧ ಪ್ರಶಸ್ತಿ ಪಟ್ಟಿ ಪ್ರಕಟಿಸಿದ್ದು, ಹಿರಿಯ ಸಾಹಿತಿ, ಶಿವಮೊಗ್ಗದ ನಾ. ಡಿಸೋಜಾ ಅವರಿಗೆ 2023–24ನೇ ಸಾಲಿನ ಪಂಪ ಪ್ರಶಸ್ತಿ ಲಭಿಸಿದೆ.

ಇದರೊಂದಿಗೆ ಸಾಹಿತ್ಯ ಮತ್ತು ನಾಟಕ ಪ್ರಶಸ್ತಿ ವಿಭಾಗ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಇಲಾಖೆ ಪ್ರಕಟಿಸಿದ್ದು, ಪ್ರೊ. ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿಗೆ ಮಹಾರಾಷ್ಟ್ರದ ಡಾ. ಕೆ.ವಿಶ್ವನಾಥ್ ಕಾರ್ನಾಡ (2022–23) ಮತ್ತು ಬೆಳಗಾವಿಯ ಚಂದ್ರಕಾಂತ ಪೋಕಳೆ (2023–24)ಆಯ್ಕೆ ಆಗಿದ್ದಾರೆ.

ಬಿ ವಿ ಕಾರಂತ ಪ್ರಶಸ್ತಿಗೆ ಬೆಂಗಳೂರಿನ ಸಿ.ಬಸವಲಿಂಗಯ್ಯ (2022–23), ಮಂಗಳೂರಿನ ಸದಾನಂದ ಸುವರ್ಣ (2023–24), ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಗೆ ಹಾಸನದ ಬಾನು ಮುಷ್ತಾಕ್ (2022–23) ಮತ್ತು ರಾಯಚೂರಿನ ಎಚ್‌.ಎಸ್.ಮುಕ್ತಾಯಕ್ಕ (2023–24), ಡಾ. ಗುಬ್ಬಿ ವೀರಣ್ಣ ಪ್ರಶಸ್ತಿಗೆ ತುಮಕೂರಿನ ಚನ್ನಬಸಯ್ಯ ಗುಬ್ಬಿ (2022-23), ವಿಜಯಪುರದ ಎಲ್.ಬಿ.ಶೇಖ್ ಮಾಸ್ತರ (2023–24), ಡಾ. ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿಗೆ ಹಂಪಿ ಡಾ. ಮೊಗಳ್ಳಿ ಗಣೇಶ್ (2021–22), ಉತ್ತಮ ಕಾಂಬ್ಳೆ (2022–23), ದಾವಣಗೆರೆಯ ಬಿ.ಟಿ.ಜಾಹ್ನವಿ (2023–24) ಆಯ್ಕೆ ಆಗಿದ್ದಾರೆ.

Advertisements

ಈ ಪ್ರಶಸ್ತಿಗಳು ತಲಾ ₹5 ಲಕ್ಷ ನಗದು, ಸ್ಮರಣಿಕೆ, ಪ್ರಶಸ್ತಿ ಫಲಕ ಒಳಗೊಂಡಿದೆ. ಡಾ. ಬರಗೂರು ರಾಮಚಂದ್ರಪ್ಪ ಅವರು ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

ಸಂಗೀತ, ನೃತ್ಯ ಪ್ರಶಸ್ತಿ ವಿಭಾಗ

ನಿಜಗುಣ–ಪುರಂದರ ಪ್ರಶಸ್ತಿಗೆ ಮೈಸೂರಿನ ಎಂ.ಕೆ.ಸರಸ್ವತಿ (2022–23), ಧಾರವಾಡದ ಅಕ್ಕಮಹಾದೇವಿ ಮಠ (2023–24), ಕುಮಾರವ್ಯಾಸ ಪ್ರಶಸ್ತಿಗೆ ಗದುಗಿನ ಸಿದ್ದೇಶ್ವರ ಶಾಸ್ತ್ರಿ (2022–23), ಮೈಸೂರಿನ ಕೃಷ್ಣಗಿರಿ ರಾಮಚಂದ್ರ (2023–24), ಶಾಂತಲಾ ನಾಟ್ಯ ಪ್ರಶಸ್ತಿಗೆ ಬೆಂಗಳೂರಿನ ಚಿತ್ರಾ ವೇಣುಗೋಪಾಲ್ (2022–23), ಬೆಂಗಳೂರಿನ ರೇವತಿ ನರಸಿಂಹನ್‌ (2023–24), ಸಂತ ಶಿಶುನಾಳ ಷರೀಫ್ ಪ್ರಶಸ್ತಿಗೆ ಬೆಂಗಳೂರಿನ ಕಸ್ತೂರಿ ರಂಗನ್‌ (2022–23), ಶಿವಮೊಗ್ಗದ ಎನ್.ಬಿ.ಶಿವಲಿಂಗಪ್ಪ (2023–24)ಆಯ್ಕೆ ಆಗಿದ್ದಾರೆ.

ಈ ಪ್ರಶಸ್ತಿಗಳು ತಲಾ ₹ 5 ಲಕ್ಷ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಡಾ. ನರಸಿಂಹಲು ವಡವಾಟಿ ಆಯ್ಕೆ ಸಮಿತಿ ಅಧ್ಯಕ್ಷರಾಗಿದ್ದರು.

ಈ ಸುದ್ದಿ ಓದಿದ್ದೀರಾ? ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆನಂದ್ ತೆಲ್ತುಂಬ್ಡೆ, ಡಾ. ಎನ್ ಜಿ ಮಹದೇವಪ್ಪ ಆಯ್ಕೆ

ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಶಸ್ತಿ ವಿಭಾಗ

ಸಂಗೊಳ್ಳಿ ರಾಯಣ್ಣ ಪ್ರಶಸ್ತಿಗೆ ಬೆಂಗಳೂರಿನ ಕೆ. ಮರುಳಸಿದ್ದಪ್ಪ (2020–21), ಬೆಳಗಾವಿಯ ಹಸನ್‌ ನಯೀಂ ಸುರಕೋಡ (2021–22), ಕೋಲಾರದ ಕೆ. ರಾಮಯ್ಯ (2022–23), ಬಳ್ಳಾರಿಯ ವೀರಸಂಗಯ್ಯ (2023–24), ಅಕ್ಕಮಹಾದೇವಿ ಪ್ರಶಸ್ತಿಗೆ ಧಾರವಾಡದ ಜಗನ್ಮಾತೆ ಅಕ್ಕಮಹಾದೇವಿ ಆಶ್ರಮ ಟ್ರಸ್ಟ್ (2020–21), ಮಂಡ್ಯದ ಡಾ. ಆರ್.ಸುನಂದಮ್ಮ (2021–22), ಕಲಬುರಗಿಯ ಮೀನಾಕ್ಷಿ ಬಾಳಿ (2022–23), ಬೆಂಗಳೂರಿನ ಡಾ. ವಸುಂಧರಾ ಭೂಪತಿ (2023–24), ಕನಕಶ್ರೀ ಪ್ರಶಸ್ತಿಗೆ ಹಾವೇರಿಯ ಡಾ. ಲಿಂಗದಹಳ್ಳಿ ಹಾಲಪ್ಪ (2021–22), ಮಂಗಳೂರಿನ ಡಾ. ಬಿ.ಶಿವರಾಮ ಶೆಟ್ಟಿ (2022–23) ಆಯ್ಕೆ ಅಗಿದ್ದಾರೆ.

ಈ ಪ್ರಶಸ್ತಿಗಳು ತಲಾ ₹ 5 ಲಕ್ಷ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಬಿ.ಟಿ.ಲಲಿತಾ ನಾಯಕ್ ಅವರು ಈ ಪ್ರಶಸ್ತಿಗಳ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

ಕಲಾ ಪ್ರಶಸ್ತಿ ವಿಭಾಗ

ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿಗೆ ಮೈಸೂರಿನ ಜಿ.ಎಲ್.ಎನ್.ಸಿಂಹ (2022–23), ಕಲಬುರಗಿಯ ಬಸವರಾಜ್ ಎಲ್. ಜಾನೆ (2023–24), ಜಾನಪದಶ್ರೀ ಪ್ರಶಸ್ತಿ- ವಾದನ: ದಕ್ಷಿಣ ಕನ್ನಡದ ಅರುವ ಕೊರಗಪ್ಪ ಶೆಟ್ಟಿ (2022–23), ಚಿಕ್ಕಮಗಳೂರಿನ ಜಿ.ಪಿ. ಜಗದೀಶ್ (2023–24), ಜಾನದಪಶ್ರೀ ಪ್ರಶಸ್ತಿ– ಗಾಯನ: ಬೀದರ್‌ನ ಕಲ್ಲಪ್ಪ ಮಿರ್ಜಾಪುರ (2022–23), ಚಿತ್ರದುರ್ಗದ ಹಲಗೆ ದುರ್ಗಮ್ಮ (2023–24) ಆಯ್ಕೆ ಆಗಿದ್ದಾರೆ.

ಈ ಪ್ರಶಸ್ತಿಗಳು ತಲಾ ₹ 5 ಲಕ್ಷ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಡಾ. ವಿ.ಟಿ.ಕಾಳೆ ಅವರು ಆಯ್ಕೆ ಸಮಿತಿ ಅಧ್ಯಕ್ಷರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಕೊಲೆಯಾದ ದಲಿತ ವಿದ್ಯಾರ್ಥಿನಿ ಮನೆಗೆ ಎಸ್ಎಫ್ಐ ನಿಯೋಗ; ಪೋಷಕರ ಭೇಟಿ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಕೋವೆರಹಟ್ಟಿ ಗ್ರಾಮದ ಕೊಲೆಗೀಡಾದ ದಲಿತ ವಿದ್ಯಾರ್ಥಿನಿ...

ಸಿಎಂ ಸ್ಥಾನ ಸಿಗುತ್ತೆ ಎಂದರೆ ನಾನು ಕೂಡ ಆರ್‌ಎಸ್‌ಎಸ್‌ ಗೀತೆ ಹಾಡುತ್ತೇನೆ: ಸಚಿವ ಸತೀಶ್ ಜಾರಕಿಹೊಳಿ

ಆರ್‌ಎಸ್‌ಎಸ್‌ ಗೀತೆ ಹಾಡಿದರೆ ಮುಖ್ಯಮಂತ್ರಿ ಸ್ಥಾನ ಸಿಗುತ್ತೆ ಎಂದರೆ ನಾನು, ಶಾಸಕ...

ರಾಜ್ಯದಲ್ಲಿರುವ ಶೇ.85ರಷ್ಟು ವಲಸೆ ಕಾರ್ಮಿಕರು ಈ ಆರು ರಾಜ್ಯಗಳಿಗೆ ಸೇರಿದವರು

ಇಡೀ ದೇಶದಲ್ಲೇ ಸುಮಾರು ಒಂದು ಲಕ್ಷ ನೋಂದಾಯಿತ ವಲಸೆ ಕಾರ್ಮಿಕರಿಗೆ ನೆಲೆಯಾಗಿರುವ...

‘ಅವರು RSS ಗೀತೆ ಹಾಡಬಹುದು, ಶಾ ಜೊತೆ ಕೂರಬಹುದು’; ಡಿಕೆಶಿ ವಿರುದ್ಧ ರಾಜಣ್ಣ ವಾಗ್ದಾಳಿ

“ಅವರು (ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್) ಆರ್‌ಎಸ್‌ಎಸ್‌ ಗೀತೆ ಹಾಡಬಹುದು, ಖಾಸಗಿ ಕಾರ್ಯಕ್ರಮದಲ್ಲಿ ಬಿಜೆಪಿ...

Download Eedina App Android / iOS

X