ವಿಜಯನಗರ | ಮನರೇಗಾ ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲಿ ಅಂಬೇಡ್ಕರ್‌ ಜನ್ಮ ದಿನಾಚರಣೆ

Date:

Advertisements

ಗ್ರಾಮೀಣ ಕೂಲಿಕಾರ್ಮಿಕರ ಸಂಘಟನೆ (ಗ್ರಾಕೂಸ) ನೇತೃತ್ವದಲ್ಲಿ ಮನರೇಗಾ ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲಿ ಭಾರತದ ಸಂವಿಧಾನ ಪೀಠಿಕೆ ಓದುವುದರ ಮೂಲಕ ವಿಭಿನ್ನವಾಗಿ ಡಾ. ಬಿ ಆರ್ ಅಂಬೇಡ್ಕರ್‌ ಜಯಂತಿ ಆಚರಿಸಿದ್ದಾರೆ.

ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಅರಸನಾಳು, ಹಲವಾಗಲು, ಕುಂಚೂರು, ಬೆನ್ನಿಹಳ್ಳಿ, ಹಳ್ಳಿಕೆರೆ, ಗೌರಿಹಳ್ಳಿ, ಕಂಚಿಕೆರೆ, ಕುಣೆಮಾದಿಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ ಆಚರಿಸಲಾಗಿದೆ.

ಮನರೇಗಾ ಕಾರ್ಮಿಕರಿಂದ ಅಂಬೇಡ್ಕರ್‌ ಜಯಂತಿ ಹರಪನಹಳ್ಳಿ
ಸಂವಿಧಾನ ಪೀಠಿಕೆ ಓದುವ ಮೂಲಕ ಅಂಬೇಡ್ಕರ್‌ ಜಯಂತಿ ಆಚರಣೆ

ಕೂಲಿ ಕಾರ್ಮಿಕರ ಸಂಘಟನೆ ಭಾಗ್ಯಮ್ಮ ಮಾತನಾಡಿ, “ಅಂಬೇಡ್ಕರ್ ನಮ್ಮ ದೇಶದಲ್ಲಿ ಹುಟ್ಟಿರುವುದೇ ನಮ್ಮ ಪುಣ್ಯ. ಅವರು ಪ್ರಪಂಚವೇ ಮೆಚ್ಚುವಂತಹ ಸಂವಿಧಾನವನ್ನು ರಚಿಸಿಕೊಟ್ಟಿದ್ದಾರೆ. ಶೋಷಿತ, ದುರ್ಬಲ, ಹಿಂದುಳಿದ ವರ್ಗದ ಜನರಿಗೆ ಮುಳುಗದೆ ಇರುವಂತಹ ಸೂರ್ಯನಾಗಿ ಸದಾ ಬೆಳಕನ್ನು ಚೆಲ್ಲುತ್ತಿದ್ದಾರೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸುಳ್ಳು ಆರೋಪ ಖಂಡಿಸಿ ಸಿಯುಕೆ ವಿದ್ಯಾರ್ಥಿ ಉಪವಾಸ ಸತ್ಯಾಗ್ರಹ

“ಡಾ. ಬಿ.ಆರ್ ಅಂಬೇಡ್ಕರ್ ಅವರು ಮತದಾನ ಹಕ್ಕಿನ ಮೂಲಕ ತಮ್ಮ ಭವಿಷ್ಯದ ಉತ್ತಮ ನಾಯಕರನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರವನ್ನು ಭಾರತ ದೇಶದ ಪ್ರತಿಯೊಬ್ಬ ಪ್ರಜೆಗೂ ಕೊಟ್ಟಿದ್ದಾರೆ. ನಾವು ದುರುಪಯೋಗ ಮಾಡಿಕೊಳ್ಳದೆ ಯಾವುದೇ ಆಸೆ ಆಕಾಂಕ್ಷಿಗಳಿಗೆ ಬಲಿಯಾಗದೆ ಉತ್ತಮ ನಾಯಕರನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ನಮ್ಮ ಮುಂದೆ ಬಂದಿದೆ. ಇದರ ಸದುಪಯೋಗ ಪಡೆದುಕೊಂಡು ಉತ್ತಮರನ್ನು ಆಯ್ಕೆ ಮಾಡಿಕೊಳ್ಳೊಣ” ಎಂದು ಸಲಹೆ ನೀಡಿದರು.

“ಪ್ರತಿ ನಿಮಿಷಕ್ಕೂ ಸದಾ ಬೆಳೆಯುತ್ತಿರುವ ವ್ಯಕ್ತಿ ಎಂದರೆ, ಡಾ. ಬಿ ಆರ್ ಅಂಬೇಡ್ಕರ್. ಅವರ ತತ್ವ ಸಿದ್ಧಾಂತಗಳ ಅಡಿಯಲ್ಲಿ ಮುನ್ನಡೆಯೋಣ” ಎಂದು ಮನರೇಗಾ ಕೂಲಿಕಾರ್ಮಿಕರ ಸಂಘದ ಶೃತಿ ತಿಳಿಸಿದರು.

ಈ ಸಂದರ್ಭದಲ್ಲಿ ಕಾರ್ಮಿಕರು ಯಶೋಧ ಮಾರುತಿ ನೀಲಮ್ಮ ಹೊನ್ನಮ್ಮ ಗಂಗಮ್ಮ, ಜಗದೀಶ, ನಾಗಪ್ಪ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X