ಹೀಗೆ ಬಂದು ಹಾಗೇ ಹೋಗುವವರು ಪಕ್ಷಕ್ಕೆ ಬೇಡ, ಅರ್ಹರನ್ನು ಮಾತ್ರ ಸೇರಿಸಿಕೊಳ್ಳಿ: ಮಲ್ಲಿಕಾರ್ಜುನ ಖರ್ಗೆ

Date:

Advertisements

ಒಂದು ವಸ್ತು ಕೊಳ್ಳಬೇಕಾದರೆ ಹತ್ತಾರು ಸಲ ಯೋಚಿಸಿ ತೆಗೆದುಕೊಳ್ಳುತ್ತೇವೆ. ಹಾಗೆ ಪಕ್ಷಕ್ಕೆ ಯಾರನ್ನಾದರೂ ತೆಗೆದುಕೊಳ್ಳಬೇಕಾದರೆ ಅವರ ಗುಣ, ಹಿನ್ನೆಲೆ, ಅವರ ತತ್ವ ಯಾವುದು ಎಂಬುದನ್ನು ಪರಿಶೀಲಿಸಿ. ಅರ್ಹರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

75ನೇ ಗಣರಾಜ್ಯೋತ್ಸವದ ಅಂಗವಾಗಿ ಕೆಪಿಸಿಸಿ ಕಚೇರಿ ಆವರಣದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದ ನಂತರ ಮಾತಾಡಿದ ಖರ್ಗೆ ಅವರು ಪರೋಕ್ಷವಾಗಿ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

“ಕಾಂಗ್ರೆಸಿನೊಳಗೆ ಯಾರೇ ಬಂದರೂ ಸೇರಿಸಿಕೊಂಡು ಶಕ್ತಿಯನ್ನು ತುಂಬುವಂತಹ ಕೆಲಸ ಮಾಡಬೇಕು. ಹಾಗೆ ಪಕ್ಷಕ್ಕೆ ಬರುವವರು ನಿಷ್ಠಾವಂತರಾಗಿರಬೇಕು. ಇವತ್ತು ಬಂದು ನಾಳೆ ಹೋಗುವಂತೆ ಇರಬಾರದು” ಎಂದು ಕಿವಿಮಾತು ಹೇಳಿದರು.

Advertisements

“ನಮ್ಮ ಕಾಂಗ್ರೆಸ್‌ ಪಕ್ಷವು ತತ್ವ ಸಿದ್ಧಾಂತದ ಆಧಾರದ ಮೇಲೆ ನಿಂತಿದೆ. ತತ್ವಕ್ಕಾಗಿಯೇ ನಮ್ಮ ಪಕ್ಷದಲ್ಲಿ ಇಂದಿರಾಗಾಂಧಿಯವರು, ರಾಜೀವ್‌ ಗಾಂಧಿಯವರು ತಮ್ಮ ಜೀವವನ್ನೆ ತ್ಯಾಗ ಮಾಡಿದ್ದಾರೆ. ನಮ್ಮ ಪಕ್ಷ ತತ್ವಕ್ಕೆ ಬದ್ಧವಾಗಿದೆ, ನಮ್ಮದು ಬಡವರ ಬಗ್ಗೆ, ರೈತರ ಬಗ್ಗೆ, ವಿಧ್ಯಾರ್ಥಿಗಳ ಬಗ್ಗೆ ಮತ್ತು ಮಹಿಳೆಯರ ಬಗ್ಗೆ ಅಪಾರ ಕಾಳಜಿ ಇರುವ ಪಕ್ಷ” ಎಂದರು.

ಈ ಸುದ್ದಿ ಓದಿದ್ದೀರಾ? ಅಲ್ಪಸಂಖ್ಯಾತ ಸಮುದಾಯ ಶೆಟ್ಟರ್‌​ರನ್ನು ಒಪ್ಪಿರಲಿಲ್ಲ, ಹೋಗಿದ್ದು ಒಳ್ಳೆಯದಾಯಿತು: ಡಿಕೆ ಶಿವಕುಮಾರ್‌

“ಇಂದಿನ ಪರಿಸ್ಥಿತಿಯಲ್ಲಿ ನಮ್ಮ ಸಂವಿಧಾನಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ಎರಡಕ್ಕೂ ಧಕ್ಕೆ ಇದೆ. ಇದರಿಂದ ನಮ್ಮ ಯುವಪೀಳಿಗೆಗೆ ಇನ್ನೂ ಹೆಚ್ಚಿನ ಅಪಾಯ ಇದೆ. ದಿನೇ ದಿನೇ ಹಣದುಬ್ಬರ, ನಿರುದ್ಯೋಗ ಸಮಸ್ಯೆ ಏರುತ್ತಿದೆ. ಈ ಅನಾಹುತವನ್ನು ತಡೆಯಬೇಕು ಎಂದರೆ ಬರುವ ಲೋಕಸಭಾ ಚುನಾವಣೆಯಲ್ಲಿ ನೀವೆಲ್ಲರೂ ಕಾಂಗ್ರೆಸ್‌ಗೆ ಶಕ್ತಿ ತುಂಬಬೇಕು” ಎಂದು ಕರೆ ನೀಡಿದರು.

“ಭಾರತದ ಇತಿಹಾಸದಲ್ಲಿ ಜನವರಿ 26 ವಿಶೇಷವಾದ ದಿನ. ಈ ದೇಶದಲ್ಲಿ ಸಂವಿಧಾನ ಅಸ್ತಿತ್ವದಲ್ಲಿ ಇರದಿದ್ದರೆ ನಾವು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಆಗುತ್ತಿರಲಿಲ್ಲ. ಭಾರತದ ಸ್ವಾತಂತ್ರ್ಯಕ್ಕೆ ಹೋರಾಡಿದ ಮತ್ತು ಸಂವಿಧಾನ ಸಭೆಯ ನಾಯಕರು ಸೇರಿ ನಮ್ಮ ಸಂವಿಧಾನ ರಚಿಸಿದರು. ನಮ್ಮ ಸಂವಿಧಾನವು ಪ್ರಮುಖವಾಗಿ ಸಮಾನತೆ, ಭಾತೃತ್ವ, ಜಾತ್ಯತೀತತೆ, ನ್ಯಾಯ ತತ್ವಗಳಿಂದ ಕೂಡಿದೆ” ಎಂದರು.

“ಸಂವಿಧಾನ ತಿರುಚಬೇಕೆಂದು, ಸಂವಿಧಾನ ಬದಲಿಸಬೇಕೆಂದು ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಪ್ರಯತ್ನ ಮಾಡುತ್ತಿವೆ. ನಮ್ಮ ಸ್ವಾಯತ್ತ ಸಂಸ್ಥೆಗಳನ್ನು ಒಂದೊಂದಾಗಿ ನಾಶಮಾಡುತ್ತಾ ಅದರ ಶಕ್ತಿಯನ್ನು ಕಡಿಮೆ ಮಾಡಲು ಬಿಜೆಪಿಯವರು ಸರ್ವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಆರ್‌ಎಸ್‌ಎಸ್‌ನ ಕೈಗೊಂಬೆಯಾಗಿ ನಡೆದುಕೊಳ್ಳುತ್ತಿದ್ದು, ಅದರಿಂದ ನಮ್ಮ ದೇಶದ ನ್ಯಾಯಾಂಗಕ್ಕೆ, ಜಾತ್ಯತೀತತೆಗೆ ಪೆಟ್ಟು ಬೀಳುತ್ತಿದೆ” ಎಂದು ಆರೋಪಿಸಿದರು.

“ಪ್ರಧಾನಮಂತ್ರಿ ಮತ್ತು ಕೇಂದ್ರ ಗೃಹ ಮಂತ್ರಿಯವರು ನಮಗೆ ಸಿಕ್ಕಿರುವ ಸ್ವಾತಂತ್ರ್ಯವನ್ನು ತಮ್ಮ ಕಪಿಮುಷ್ಠಿಯಲ್ಲಿ ಹಿಡಿದಿಟ್ಟುಕೊಳ್ಳುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಮತ್ತು ಸಂವಿಧಾನ ಉಳಿದರೆ ಮಾತ್ರ ನಮ್ಮ ಮುಂದಿನ ಪೀಳಿಗೆ ಉಳಿಯುತ್ತದೆ. ಇಲ್ಲವಾದರೆ ಮುಂದಿನ ಪೀಳಿಗೆ ಎಲ್ಲದರಲ್ಲೂ ಅವಕಾಶ ವಂಚಿತರಾಗುತ್ತಾರೆ” ಎಂದರು.

“ಸ್ವಾತಂತ್ರ್ಯ ಬಂದಾಗಿನಿಂದ 2014ರ ವರೆಗೆ ಈ ದೇಶದ ಸಾಲ 55 ಲಕ್ಷ ಕೋಟಿ ಇತ್ತು, ಆದರೆ ಈಗ ಬಿಜೆಪಿ ಸರ್ಕಾರ 10 ವರ್ಷಗಳಲ್ಲಿ 150 ಲಕ್ಷ ಕೋಟಿ ಸಾಲ ಮಾಡಿದೆ” ಎಂದು ಕಿಡಿಕಾರಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X