ಗದಗ | 75ನೇ ಗಣರಾಜ್ಯೋತ್ಸವದ, ಮಲ್ಲಕಂಬ ಪ್ರದರ್ಶನ ನೀಡಿದ ವಿಶೇಷಚೇತನ ಮಕ್ಕಳು

Date:

Advertisements

ಗದಗ ಜಿಲ್ಲೆಯ ನರೇಗಲ್ಲ ಪಟ್ಟಣದ ಶ್ರೀಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿಯ ಕಿವಿ ಕೇಳಿಸದ ವಿಶೇಷಚೇತನ ಮಕ್ಕಳ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮಲ್ಲಕಂಬ ಕ್ರೀಡೆ ಪ್ರದರ್ಶಿಸಿದ್ದಾರೆ.

75ನೇ ಗಣರಾಜ್ಯೋತ್ಸವದ ಅಂಗವಾಗಿ ಅಂಗ ಸಂಸ್ಥೆಯ ವತಿಯಿಂದ ಪದವಿ ಮಹಾವಿದ್ಯಾಲಯದ ಆವರಣಲ್ಲಿ ಏರ್ಪಡಿಸಲಾದ ಕಾಯ೯ಕ್ರಮದಲ್ಲಿ ಮಲ್ಲಕಂಬ ಪ್ರದರ್ಶನದಲ್ಲಿ 40ಕ್ಕೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಈ ಕ್ರೀಡೆಯಲ್ಲಿ ಪೋಲ್ ಮಲ್ಲಕಂಬ ಪ್ರದರ್ಶನ ಹಾಗೂ ರೋಪ ಮಲ್ಲಕಂಬದ ಆಟ, ಈ ಆಟಗಳಲ್ಲಿ ದಸರಂಗ, ಸಲಾಮಿ, ಹಾಲಾಸನ, ಭಜರಂಗಾಸನ, ಸಂಖ್ಯಾಸನ, ವೀರಭದ್ರಾಸನ, ಚೋಕಾರ ಆಸನ ಅಲ್ಲದೇ ರೋಪ ಮಲ್ಲಕಂಬ ಕ್ರೀಡೆಯಲ್ಲಿ ಕ್ರಾಸ್, ಪದ್ಮಾಸನ, ಪಶ್ಚಿಮ ಉತ್ತಾಸನ, ಕ್ರೀತ್ತಾಸನ, ಭಜರಂಗಾಸನ, ಪಾದಹಸ್ತಾಸನ, ಒಳಗೊಂಡು ಕೆಲವು ಆಸನಗಳನ್ನು ವಿದ್ಯಾರ್ಥಿಗಳು ಪ್ರದರ್ಶನ ಮಾಡಿದರು.

Advertisements

ನರೇಗಲ್ಲದ ಮಲ್ಲಕಂಬ ಕ್ರೀಡಾಪಟು ಕಳಪ್ಪ ಚವಡಿ ಹಾಗೂ ಎಂ.ವ್ಹಿ. ಹರ್ಲಾಪೂರ, ರಫೀಕ ರೇವಡಿಗಾರ ದೈಹಿಕ ಶಿಕ್ಷಕರ ಮಾರ್ಗದರ್ಶನದಲ್ಲಿ ಕಿವುಡ ಮಕ್ಕಳು ಮಲ್ಲಕಂಬ ಪ್ರದರ್ಶನ ನೀಡಿದರು.

ಸಂಸ್ಥೆಯ ಅಧ್ಯಕ್ಷರಾದ ಮ.ನಿ.ಪ್ರ. ಪೂಜ್ಯ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು, ಆಡಳಿತಾಧಿಕಾರಿಗಳಾದ ಎನ್.ಆರ್. ಗೌಡರ, ಕಿವುಡ ಮಕ್ಕಳ ಶಾಲೆಯ ಚೇರ್‌ಮನ್‌ ಶರಣಪ್ಪ ರೇವಡಿ ಹಾಗೂ ಸಂಸ್ಥೆಯ ಸದಸ್ಯರುಗಳು, ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X