ಸೋಂಕು ರಹಿತ ಡಯಾಲಿಸಿಸ್ ಸೇವೆಗೆ ನಾಳೆ ಸಿಎಂ ಚಾಲನೆ: ಡಯಾಲಿಸಿಸ್ ಬಗ್ಗೆ ಮುತುವರ್ಜಿ ವಹಿಸಿದ್ದ ಆರೋಗ್ಯ ಸಚಿವ ಗುಂಡೂರಾವ್

Date:

Advertisements
  • ರಾಜ್ಯಾದ್ಯಂತ 800 ಏಕ ಬಳಕೆಯ ಡಯಾಲೈಸರ್‌ಗಳ ಕಾರ್ಯಾರಂಭ
  • ಡಯಾಲಿಸಿಸ್ ಸದೃಢಗೊಳಿಸುತ್ತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದಿಟ್ಟ ಹೆಜ್ಜೆ

ಉಚಿತವಾಗಿ ಉತ್ತಮ ಡಯಾಲಿಸಿಸ್ ಸೇವೆ ಎದುರು ನೋಡುತ್ತಿದ್ದ, ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ಜನರಿಗೆ ಸಂತಸದ ಸುದ್ದಿ ಇದು. ಸೋಂಕು ರಹಿತ ಡಯಾಲಿಸಿಸ್ ಸೇವೆ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಡಯಾಲಿಸಿಸ್ ಮಾಡಿಸಿಕೊಳ್ಳುವವರಿಗೆ ಇನ್ಮುಂದೆ ಏಕ ಬಳಕೆಯ ಡಯಾಲೈಸರ್ ಆರೈಕೆ ಲಭ್ಯವಾಗಲಿದೆ.

ರಾಜ್ಯದಲ್ಲಿ ಕೆಲವು ದೂರು ದುಮ್ಮಾನಗಳಿಂದ ನಡೆಯುತ್ತಿದ್ದ ಡಯಾಲಿಸಿಸ್ ವ್ಯವಸ್ಥೆಯನ್ನ ಆರೋಗ್ಯಕರ ಹಂತಕ್ಕೆ ತರುವಲ್ಲಿ ಕಳೆದ ಆರು ತಿಂಗಳಿನಿಂದ ಸಾಕಷ್ಟು ಸವಾಲುಗಳನ್ನ ಎದುರಿಸಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೊನೆಗೂ ರಾಜ್ಯದ ಡಯಾಲಿಸಿಸ್ ವ್ಯವಸ್ಥೆಯನ್ನ ಸರಿ ದಾರಿಗೆ ತರುವತ್ತ ಮಹತ್ವದ ಪಾತ್ರ ವಹಿಸಿದ್ದಾರೆ.

ಜನಸಾಮಾನ್ಯರಿಗೆ ಸೋಂಕು ರಹಿತ ಡಯಾಲಿಸಿಸ್ ಸೇವೆ ಕಲ್ಪಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆದ್ಯತೆ ನೀಡಿದ್ದರು. ಡಯಾಲಿಸಿಸ್ ಕೇಂದ್ರಗಳಲ್ಲಿ ಅಲ್ಲಲ್ಲಿ ಅಸ್ವಸ್ಥಗೊಂಡಿದ್ದ ಬಹುಬಳಕೆಯ ಡಯಾಲೈಸರ್ ಯಂತ್ರಗಳಿಂದ ಡಯಾಲಿಸಿಸ್ ಪಡೆಯುತ್ತಿದ್ದವರಿಗೆ ಸೋಂಕು ತಗುಲುತ್ತಿರುವುದನ್ನ ಗಮನಿಸಿದ್ದ ಸಚಿವ ದಿನೇಶ್ ಗುಂಡೂರಾವ್, ರಾಜ್ಯದ ಇಡೀ ಡಯಾಲಿಸಿಸ್ ವ್ಯವಸ್ಥೆಯನ್ನ ಸದೃಢಗೊಳಿಸುವ ನಿಟ್ಟಿನಲ್ಲಿ ಏಕ ಬಳಕೆಯ ಡಯಾಲೈಸರ್ ಯಂತ್ರಗಳನ್ನ ಅಳವಡಿಸಲು ನಿರ್ಧರಿಸಿದರು. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯಾದ್ಯಂತ 800 ಹೊಸ ಏಕ ಬಳಕೆಯ ಡಯಾಲಿಸಿಸ್ ಯಂತ್ರಗಳನ್ನ ಅಳವಡಿಸುವ ಕಾರ್ಯಕ್ಕೆ ಮುಂದಾಗಿದ್ದರು‌.

Advertisements

rao 1

ಇದೀಗ ಹೊಸ ಡಯಾಲೈಸರ್ ಗಳ ಅಳವಡಿಕೆ ಕಾರ್ಯ ಬಹುತೇಕ ಅಂತಿಮ ಘಟ್ಟಕ್ಕೆ ತಲುಪಿದ್ದು, ನಾಳೆ(ಜ.27)ಯಿಂದ ಏಕ ಬಳಕೆಯ ಡಯಾಲಿಸಿಸ್ ಆರೋಗ್ಯ ಸೇವೆ ಆರಂಭವಾಗಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಸಂಜೆ 5 ಗಂಟೆಗೆ ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಹೊಸ ಡಯಾಲಿಸಿಸ್ ಸೇವೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರಿನ ಕೆ.ಸಿ‌. ಜನರಲ್ ಆಸ್ಪತ್ರೆಯೊಂದರಲ್ಲೇ 20 ಹೊಸ ಏಕ ಬಳಕೆಯ ಡಯಾಲೈಸರ್ ಯಂತ್ರಗಳನ್ನ ಅಳವಡಿಸಲಾಗಿದ್ದು, ಪ್ರತಿ ನಿತ್ಯ 72 ರೋಗಿಗಳಿಗೆ ಡಯಾಲಿಸಿಸ್ ಸೇವೆ ಒದಗಿಸುವ ಸಾಮರ್ಥ್ಯ ಕಲ್ಪಿಸಲಾಗಿದೆ.

ರಾಜ್ಯದಲ್ಲಿದ್ದ 171 ಡಯಾಲಿಸಿಸ್ ಕೇಂದ್ರಗಳನ್ನ 219ಕ್ಕೆ ಹೆಚ್ಚಿಸಲಾಗಿದ್ದು, ಹೊಸದಾಗಿ 48 ತಾಲೂಕುಗಳಲ್ಲಿ ಡಯಾಲಿಸಿಸ್ ಕೇಂದ್ರಗಳನ್ನ ಆರಂಭಿಸಲಾಗಿದೆ. 219 ಕೇಂದ್ರಗಳಲ್ಲಿ ಒಟ್ಟು 800 ಏಕಬಳಕೆಯ ಡಯಾಲೈಸರ್ ಯಂತ್ರಗಳನ್ನ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು ವಿಭಾಗದ 57 ಡಯಾಲಿಸಿಸ್ ಕೇಂದ್ರಗಳಲ್ಲಿ 250 ಯಂತ್ರಗಳು, ಮೈಸೂರು ವಿಭಾಗದ 55 ಕೇಂದ್ರಗಳಲ್ಲಿ 222 ಯಂತ್ರಗಳು, ಬೆಳಗಾವಿ ವಿಭಾಗದ 62 ಕೇಂದ್ರಗಳಲ್ಲಿ 201 ಯಂತ್ರಗಳು, ಕಲಬುರಗಿ ವಿಭಾಗದ 45 ಕೇಂದ್ರಗಳಲ್ಲಿ 127 ಯಂತ್ರಗಳು ಸೇರಿದಂತೆ ಒಟ್ಟು 800 ಏಕಬಳಕೆಯ ಡಯಾಲೈಸರ್ ಗಳ ಅಳವಡಿಕೆ ಕಾರ್ಯ ಅಂತಿಮ ಘಟ್ಟಕ್ಕೆ ತಲುಪಿದೆ.

ಇದನ್ನು ಓದಿದ್ದೀರಾ? ಕೊನೆಗೂ ಬಿಡುಗಡೆಗೊಂಡ ನಿಗಮ, ಮಂಡಳಿ ಪಟ್ಟಿ: 34 ಶಾಸಕರಿಗೆ ಮಣೆ

ನಾಳೆಯಿಂದ 475 ಏಕಬಳಕೆಯ ಡಯಾಲೈಸರ್ ಗಳು ಕಾರ್ಯ ಆರಂಭಿಸಲಿದ್ದು, ರೋಗಿಗಳಿಗೆ ಸೊಂಕು ರಹಿತ ಡಯಾಲಿಸಿಸ್ ಸೇವೆ ಲಭ್ಯವಾಗಲಿದೆ. ಉಳಿದ ಕೇಂದ್ರಗಳಲ್ಲೂ ಒಂದು ತಿಂಗಳೊಳಗೆ ಏಕ ಬಳಕೆಯ ಡಯಾಲಿಸಿಸ್ ಯಂತ್ರಗಳ ಸೇವೆ ಆರಂಭವಾಗಲಿದೆ.

ಪ್ರತಿಯೊಂದು ಡಯಾಲಿಸಿಸ್ ಸೈಕಲ್‌ಗೆ 1573 ರೂ ಗಳು ವೆಚ್ಚವಾಗಲಿದ್ದು, ಸರ್ಕಾರವೇ ವೆಚ್ಚವನ್ನ ಭರಿಸಿ ರೋಗಿಗಳಿಗೆ ಉಚಿತವಾಗಿ ಆರೋಗ್ಯ ಸೇವೆ ಒದಗಿಸಲಿದೆ. 800 ಡಯಾಲಿಸಿಸ್ ಯಂತ್ರಗಳಿಂದ ವಾರ್ಷಿಕ 7.20 ಲಕ್ಷ ಡಯಾಲಿಸಿಸ್ ಸೇವೆಗಳನ್ನ ಒದಗಿಸಲು ಸಾಮರ್ಥ್ಯ ಕಲ್ಪಿಸಲಾಗಿದ್ದು, ಸೋಂಕು ರಹಿತ ಡಯಾಲಿಸಿಸ್ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X