ಗಾಝಾದಲ್ಲಿ ನರಮೇಧ ತಡೆಗಟ್ಟಿ: ಇಸ್ರೇಲ್‌ಗೆ ಅಂತಾರಾಷ್ಟ್ರೀಯ ನ್ಯಾಯಾಲಯ ಆದೇಶ

Date:

Advertisements

ಗಾಝಾ ಪಟ್ಟಿಯಲ್ಲಿ ಜನಾಂಗೀಯ ಹತ್ಯೆ ನಡೆಯದಂತೆ ಖಾತ್ರಿಗೊಳಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶುಕ್ರವಾರ ಅಂತಾರಾಷ್ಟ್ರೀಯ ನ್ಯಾಯಾಲಯವು ಇಸ್ರೇಲ್ ಗೆ ಸೂಚಿಸಿದೆ.

ಇಸ್ರೇಲ್ ವಿರುದ್ಧ ಜನಾಂಗೀಯ ಹತ್ಯೆಯ ಆರೋಪ ಮಾಡಿ, ಒಂಭತ್ತು ತಾತ್ಕಾಲಿಕ ಕ್ರಮಕ್ಕಾಗಿ ಆಗ್ರಹಿಸಿದ್ದ ದಕ್ಷಿಣ ಆಫ್ರಿಕಾದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯವು ಈ ಸೂಚನ ನೀಡಿದೆ.

ಗಾಝಾ ಪಟ್ಟಿಯಲ್ಲಿನ ಪ್ಯಾಲೆಸ್ತೀನಿಯನ್ನರಿಗೆ ಮೂಲಭೂತ ಸೇವೆಗಳು ಹಾಗೂ ಮಾನವೀಯ ನೆರವುಗಳನ್ನು ಒದಗಿಸಲು ಅವಕಾಶ ಒದಗಿಸಬೇಕು ಎಂದೂ ನ್ಯಾಯಾಲಯವು ಇಸ್ರೇಲ್‌ಗೆ ಸೂಚಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲರನ್ನೂ ಒಳಗೊಳ್ಳದಿದ್ದರೆ ‘ಗಣರಾಜ್ಯ’ ಹೇಗಾಗುತ್ತದೆ?

ಈ ಮಧ್ಯಂತರ ಆದೇಶವು ಇಸ್ರೇಲ್‌ಅನ್ನು ಅಂತಾರಾಷ್ಟ್ರೀಯ ಕಾನೂನು ಬಾಧ್ಯತೆಗೆ ಒಳಪಡಿಸುತ್ತದೆ ಎಂದು ಹೇಳಿರುವ ಅಂತಾರಾಷ್ಟ್ರೀಯ ನ್ಯಾಯಾಲಯದ ಅಧ್ಯಕ್ಷ ಜೋನ್ ಇ. ಡೊನೊಘ್, ಆದೇಶವನ್ನು ಪಾಲಿಸಿರುವುದರ ಕುರಿತು ಒಂದು ತಿಂಗಳೊಳಗೆ ವರದಿ ಸಲ್ಲಿಸಬೇಕು ಎಂದು ಇಸ್ರೇಲ್ಗೆ ಆದೇಶಿಸಿದ್ದಾರೆ.

ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ತನ್ನ ಆದೇಶವನ್ನು ಜಾರಿಗೊಳಿಸುವ ಯಾವುದೇ ಅಧಿಕಾರ ಇಲ್ಲದೆ ಇರುವುದರಿಂದ, ಇಸ್ರೇಲ್ ಅದರ ಆದೇಶವನ್ನು ಪಾಲಿಸಲಿದೆಯೆ ಎಂಬುದು ಇನ್ನೂ ಚರ್ಚಾಸ್ಪದವಾಗಿಯೇ ಉಳಿದಿದೆ. ಉದಾಹರಣೆಗೆ, ಮಾರ್ಚ್ 2022ರಲ್ಲಿ ಉಕ್ರೇನ್ ಮೇಲಿನ ಆಕ್ರಮಣವನ್ನು ಸ್ಥಗಿತಗೊಳಿಸುವಂತೆ ರಷ್ಯಾಗೆ ಅಂತಾರಾಷ್ಟ್ರೀಯ ನ್ಯಾಯಾಲಯ ಆದೇಶಿಸಿತ್ತು.

ಕಾನೂನಾತ್ಮಕವಾಗಿ ಈ ಆದೇಶವನ್ನು ಪಾಲಿಸಲೇಬೇಕಿತ್ತಾದರೂ, ಮಾಸ್ಕೊ ಅದನ್ನು ನಿರ್ಲಕ್ಷಿಸಲು ನಿರ್ಧರಿಸಿತು. ಅದರ ಪರಿಣಾಮ ಒತ್ತೆಯಾಳು ಪ್ರಕರಣಗಳು ಮುಂದುವರಿದವು. ಆದರೆ, ಅಂತಾರಾಷ್ಟ್ರೀಯ ನ್ಯಾಯಾಲಯವು ನೀಡಿರುವ ಆದೇಶವು ಅಂತಾರಾಷ್ಟ್ರೀಯ ಸಾರ್ವಜನಿಕ ಅಭಿಪ್ರಾಯವನ್ನು ರೂಪಿಸುವಲ್ಲಿ ಗಮನಾರ್ಹ ಪಾತ್ರ ವಹಿಸುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ...

Download Eedina App Android / iOS

X