ವಿಜಯಪುರ | ಅಂಬೇಡ್ಕರ್‌ ಪ್ರತಿಮೆಗೆ ಅಪಮಾನ; ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Date:

Advertisements

ಕಲಬುರಗಿಯಲ್ಲಿ ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಕಾನೂನು ಕ್ರಮಗಳ್ಳಬೇಕೆಂದು ಆಗ್ರಹಿಸಿ ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ದಲಿತ ಮತ್ತು ಪ್ರಗತಿ ಪರ ಸಂಘಟನೆಗಳು ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿವೆ.

ಕಲಬುರಗಿ ನಗರದ ಕೋಟನೂರ್ ಲುಂಬಿಣಿ ಉದ್ಯಾನದಲ್ಲಿರುವ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್‌ವರ ಪುತ್ಥಳಿಗೆ ಅವಮಾನ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಿ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿವೆ.

ಪದೇ ಪದೇ ವಿಶ್ವ ರತ್ನ, ಡಾ. ಬಾಬಾ ಸಾಹೇಬ್ ಅಂಬೇಡ್ಕರವರ ಪುತ್ಥಳಿಗಳಿಗೆ ಮತ್ತು ಭಾರತ ದೇಶದ ರಾಷ್ಟ್ರೀಯ ನಾಯಕರಗಳ ಮೂರ್ತಿಗಳಿಗೆ ಅವಮಾನಗೊಳಿಸುತ್ತಿದ್ದು, ಇಂತಹ ಘಟನೆಗಳು ಮರುಕಳಿಸಿದಂತೆ ಸೂಕ್ತ ಪೊಲೀಸ್ ಬಂದೋಬಸ್ತ ಮತ್ತು ಗುಪ್ತಚರ ಇಲಾಖೆಗಳು ಜಾಗೃತಿ ವಹಿಸಬೇಕು. ಕಲಬುರಗಿ ನಗರದಲ್ಲಿ ನೆಡೆದ ಅಹಿತಕರ ಘಟನೆಗೆ ಕಾರಣಿಕರ್ತರಾದವರನ್ನು ದೇಶದ್ರೋಹಿ ಕಾಯ್ದೆ ಅಡಿಯಲ್ಲಿ ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು.

Advertisements

ಇಂತಹ ಘಟನೆಗಳು ಮರುಕಳಿಸಿದರೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನ ಹೊಣೆಗಾರರನ್ನಾಗಿ ಮಾಡಬೇಕು‌ ಎಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಲಕ್ಕಪ್ಪ ಬಡಿಗೇರ, ಹನಮಂತ ವಡ್ಡರ, ಡಿಎಸ್ಎಸ್ ವಿಜಯಪುರ ಜಿಲ್ಲಾ ಸಂಚಾಲಕ ಶರಣು ಶಿಂಧೆ, ಪರಶುರಾಮ ದೊರೆಗೂಳ, ಸಲೀಮ್ ನಾಯ್ಕೋಡಿ, ಚಾಂದ್ ಪಾಷಾ ಅವಲ್ದಾರ್, ಭೀಮಣ್ಣ ವಡ್ಡರ್, ನಬಿಲಾಲ್ ನಾಯ್ಕೋಡಿ , ರಾಜೇಂದ್ರ,  ಸಂತೋಷ್, ಸಂಗು ದೇಸಾಯಿ  ಇತರರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X