ನನ್ನ ತಂದೆ ‘ಸಂಘಿ’ ಅಲ್ಲ: ಸೂಪರ್‌ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ

Date:

Advertisements

ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯಲ್ಲಿ ಭಾಗವಹಿಸಿದ್ದ ಬಳಿಕ ನೀಡಿದ್ದ ಹೇಳಿಕೆಯೊಂದರ ಹಿನ್ನೆಲೆಯಲ್ಲಿ ವ್ಯಾಪಕ ಟೀಕೆಗೆ ಒಳಗಾಗಿದ್ದ ತನ್ನ ತಂದೆ, ಸೂಪರ್‍‌ಸ್ಟಾರ್ ರಜನಿಕಾಂತ್ ಬಗ್ಗೆ ಮಾತನಾಡಿರುವ ಪುತ್ರಿ, ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್, “ನನ್ನ ತಂದೆ ಸಂಘಿ ಅಲ್ಲ” ಎಂದು ತಿಳಿಸಿದ್ದಾರೆ.

ಮುಂಬರುವ ಫೆಬ್ರವರಿ 9ರಂದು ಬಿಡುಗಡೆಯಾಗಲಿರುವ ‘ಲಾಲ್ ಸಲಾಮ್‌’ ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿರುವ ನಿರ್ದೇಶಕಿ ಐಶ್ವರ್ಯಾ, “ತಮ್ಮ ತಂದೆ ಬಿಜೆಪಿ ಮತ್ತು ಆರೆಸ್ಸೆಸ್‌ಗೆ ಬೆಂಬಲವಾಗಿದ್ದಾರೆ ಎಂಬ ಟೀಕೆಗಳು ಬರುತ್ತಿದೆ. ಒಂದು ವೇಳೆ ಅವರು ‘ಸಂಘಿ’ ಆಗಿದ್ದಿದ್ದರೆ ‘ಲಾಲ್‌ ಸಲಾಂ’ ಸಿನಿಮಾ ಮಾಡುತ್ತಿರಲಿಲ್ಲ” ಎಂದು ಹೇಳಿದ್ದಾರೆ.

‘ಸಂಘಿ’ ಎಂದು ಸಂಘಪರಿವಾರದ ಹಿಂದುತ್ವ ಸಿದ್ಧಾಂತದ ಬೆಂಬಲಿಗರ ವಿರುದ್ಧ ಬಳಸುವ ಪದವಾಗಿದೆ. ಇದೇ ಪದವನ್ನು ಐಶ್ವರ್ಯಾ ರಜನಿಕಾಂತ್ ಅವರು ಬಳಸಿದ್ದು, ತಂದೆಯ ಪರ ಬೆಂಬಲವನ್ನು ಸೂಚಿಸಿದ್ದಾರೆ.

Advertisements

ಲಾಲ್ ಸಲಾಮ್‌ ಚಿತ್ರದಲ್ಲಿ ರಜನಿಕಾಂತ್ ಮುಸ್ಲಿಂ ಪಾತ್ರದ ‘ಮೊಯ್ದೀನ್ ಭಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ‘ಲಾಲ್ ಸಲಾಮ್‌’ ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭವು ಚೆನ್ನೈನ ಸಾಯಿರಾಮ್ ಇಂಜಿನಿಯರಿಂಗ್ ಕ್ಯಾಂಪಸ್‌ನ ಆವರಣದಲ್ಲಿ ನೆರೆವೇರಿತು.

“ನಾನು ಸಾಮಾಜಿಕ ಮಾಧ್ಯಮದಿಂದ ದೂರವಿರಲು ಪ್ರಯತ್ನಿಸುತ್ತೇನೆ. ಆದರೆ ನನ್ನ ತಂಡವು, ಜನರು ಏನನ್ನು ಚರ್ಚಿಸುತ್ತಿದ್ದಾರೆ, ಏನೆಲ್ಲ ಮಾತನಾಡುತ್ತಾ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂಬುದನ್ನು ನನಗೆ ತೋರಿಸುತ್ತಲೇ ಇರುತ್ತಾರೆ. ಇತ್ತೀಚೆಗೆ ನನ್ನ ತಂದೆ ರಜನಿಕಾಂತ್‌ ಅವರನ್ನು ಜನರು ‘ಸಂಘಿ’ ಎಂದು ಕರೆಯುತ್ತಿರುವುದಾಗಿ ನನ್ನ ಗಮನಕ್ಕೆ ತಂದರು. ನನಗೆ ಸಂಘಿ ಎಂದರೆ ಏನು ಎಂಬುದು ಮೊದಲು ಗೊತ್ತಿರಲಿಲ್ಲ. ನಂತರ ನಾನು ಸಂಘಿ ಎಂದರೆ ಏನು ಎಂದು ಕೇಳಿದೆ. ಆಗ ನಿರ್ದಿಷ್ಟ ರಾಜಕೀಯ ಪಕ್ಷವನ್ನ ಬೆಂಬಲಿಸುವವರನ್ನ ಸಂಘಿ ಎಂದು ಕರೆಯುತ್ತಾರೆ ಎಂಬ ಉತ್ತರ ನನಗೆ ಸಿಕ್ಕಿತು” ಎಂದು ಐಶ್ಚರ್ಯಾ ತಿಳಿಸಿದ್ದಾರೆ.

“ನಾವು ಮನುಷ್ಯರು. ಇದನ್ನೆಲ್ಲ ನೋಡಿ ನನಗೆ ನಿಜವಾಗಿಯೂ ಸಿಟ್ಟು ಬರುತ್ತದೆ. ಸಂಘಿ ಎಂದು ಅವರನ್ನು ಏಕೆ ಕರೆಯುತ್ತಾರೆಂದು ನನಗೆ ಅರ್ಥವಾಗುತ್ತಿಲ್ಲ. ನಾನು ಒಂದಂತೂ ಸ್ಪಷ್ಟವಾಗಿ ಹೇಳಬಲ್ಲೆ. ರಜನಿಕಾಂತ್ ‘ಸಂಘಿ’ ಅಲ್ಲ. ಒಂದು ವೇಳೆ ಅವರು ಸಂಘಿ ಆಗಿದ್ದಿದ್ದರೆ ಲಾಲ್ ಸಲಾಂನಂತಹ ಸಿನಿಮಾ ಮಾಡುತ್ತಲೇ ಇರಲಿಲ್ಲ. ಈ ಸಿನಿಮಾವನ್ನು ಮಾನವೀಯತೆ ಇರುವ ವ್ಯಕ್ತಿಯಿಂದ ಮಾತ್ರ ಮಾಡಲು ಸಾಧ್ಯ. ಲಾಲ್ ಸಲಾಂ ಸಿನಿಮಾದ ನೋಡಿ. ಆಮೇಲೆ ನಿಮಗೆ ಇದು ಅರ್ಥವಾಗಬಹುದು” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್‌ಗೆ ಝಡ್–ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಲು ಕೇಂದ್ರ ನಿರ್ಧಾರ

ಜನವರಿ 22ರಂದು ತಮಿಳು ನಟ ಧನುಷ್ ಮತ್ತು ರಜನಿಕಾಂತ್ ಅವರು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ವೇಳೆ ರಜನಿಕಾಂತ್ ಅವರು ಮಾಧ್ಯಮವೊಂದಕ್ಕೆ ಮಾತನಾಡುತ್ತಾ, 500 ವರ್ಷಗಳ ಸಮಸ್ಯೆಗೆ ಪರಿಹಾರ ಸಿಕ್ಕಿದೆ ಎಂದು ಹೇಳಿದ್ದರು.

ಇದನ್ನು ಟೀಕಿಸಿದ್ದ ತಮಿಳಿನ ಖ್ಯಾತ ನಿರ್ದೇಶಕ ಪಾ ರಂಜಿತ್, “ರಜನಿಕಾಂತ್ ಅಯೋಧ್ಯೆಗೆ ಹೋಗಿದ್ದು, ರಾಮನ ದರ್ಶನ ಪಡೆದದ್ದು ತಪ್ಪಲ್ಲ. ಆದರೆ, 500 ವರ್ಷಗಳ ಸಮಸ್ಯೆಗೆ ಪರಿಹಾರ ಸಿಕ್ಕಿದೆ ಎಂದು ಹೇಳಿದ್ದನ್ನು ನಾನು ಒಪ್ಪಲಾರೆ. ಇದರ ಹಿಂದಿನ ರಾಜಕಾರಣವನ್ನು ಪ್ರಶ್ನೆ ಮಾಡಬೇಕು. ಸಮಸ್ಯೆ ಮತ್ತು ಪರಿಹಾರ ಎನ್ನುವುದನ್ನು ನಾನು ಟೀಕಿಸುತ್ತೇನೆ’ ಎಂದಿದ್ದರು. ಆ ಬಳಿಕ ರಜನಿಕಾಂತ್ ಅವರನ್ನು ‘ಸಂಘಿ’ ಎಂದು ವ್ಯಾಪಕವಾಗಿ ಟೀಕಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರು ಈ ಹೇಳಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X