ಚಿತ್ರದುರ್ಗ | ‘ಸಂವಿಧಾನ ಜಾಗೃತಿ ಜಾಥಾʼ ಸ್ತಬ್ಧಚಿತ್ರ ವಾಹನಕ್ಕೆ ಚಾಲನೆ

Date:

Advertisements

ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಸಂವಿಧಾನ ಜಾಗೃತಿ ಜಾಥಾದ ಸ್ತಬ್ಧಚಿತ್ರ ವಾಹನಕ್ಕೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕ‌ರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಭಾರತದ ಸಂವಿಧಾನ ಅಂಗೀಕರಿಸಿಕೊಂಡು 75 ವರ್ಷಗಳಾದ ಹಿನ್ನಲೆಯಲ್ಲಿ ಸರ್ಕಾರದ ವತಿಯಿಂದ ‘ಸಂವಿಧಾನ ಜಾಗೃತಿ ಜಾಥಾʼ ಎಂಬ ಶೀರ್ಷಿಕೆಯಡಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ, ನಗರ ಸ್ಥಳೀಯ ಸಂಸ್ಥೆಗಳಿಗೆ ಸಂವಿಧಾನ ಜಾಗೃತಿ ಸ್ತಬ್ದಚಿತ್ರ ಮೆರವಣಿಗೆ ಸಂಚರಿಸಲಿದೆ ಎಂದು ಮಾಹಿತಿ ನೀಡಿದರು.

ಫೆಬ್ರವರಿ 25ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ರಾಷ್ಟ್ರಮಟ್ಟದ ಬೃಹತ್ ಸಮಾವೇಶ ಕಾರ್ಯಕ್ರಮ ಆಯೋಜಿಸಲಾಗುವದು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಸಂವಿಧಾನ ಜಾಗೃತಿ ಸ್ಥಬ್ದಚಿತ್ರ ಭಾಗವಹಿಸುವುದು. ಇದಕ್ಕೂ ಮುನ್ನಾ ಜನವರಿ 26ರಿಂದ ಫೆಬ್ರವರಿ 23ರವರೆಗೆ ಜಿಲ್ಲೆಯ ಎಲ್ಲಾ 189ಗ್ರಾಮ ಪಂಚಾಯಿತಿ, 07 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂಚರಿಸಿ, ಸಂವಿಧಾನದ ಕುರಿತು ಜಾಗೃತಿ ಮೂಡಿಸಲಿದೆ.

Advertisements

ಈ ಜಾಗೃತಿ ಜಾಥಾದಲ್ಲಿ ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳು, ಮಹಿಳಾ ಸ್ವ-ಸಹಾಯ ಸಂಘಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಸಚಿವ ಡಿ.ಸುಧಾಕರ್ ಮತ್ತು ಸ್ಥಳೀಯ ಶಾಸಕ ವೀರೇಂದ್ರ ಕರೆ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X