ಜೆಡಿಎಸ್ ಮಾಜಿ ಶಾಸಕ ನಾಗನಗೌಡ ಕಂದಕೂರು ಅವರು ಹೃದಯಾಘಾತದಿಂದ ಭಾನುವಾರ ನಿಧನರಾಗಿದ್ದಾರೆ. ಅವರಿಗೆ ಬೆಳಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಆಸ್ಪತ್ರೆಗೆ ಕರೆದೊಯ್ದಲಾಯಿತಾದರೂ, ಅವರು ಬದುಕುಳಿಯಲು ಸಾಧ್ಯವಾಗಿಲ್ಲ.
79 ವರ್ಷ ವಯಸ್ಸಿನ ನಾಗನಗೌಡ ಕಂದಕೂರು ಜೆಡಿಎಸ್‌ನಲ್ಲಿ ತೊಡಗಿಸಿಕೊಂಡಿದ್ದರು. ಅವರು ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದಲ್ಲಿ 2018ರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ, ಶಾಸಕರಾಗಿದ್ದರು. ಆದರೆ, 2023ರ ಚುನಾವಣೆಯಲ್ಲಿ ವಯಸ್ಸಿನ ಕಾರಣ ನೀಡಿ ಸ್ಪರ್ಧೆಯಿಂದ ಹಿಂದೆ ಸರಿದು, ರಾಜಕಾರಣದಿಂದ ದೂರ ಉಳಿದಿದ್ದರು.