ಭಾರತೀಯ ವಿಜ್ಞಾನ ಕಾಂಗ್ರೆಸ್ ಅಸೋಸಿಯೇಷನ್ ವಿಜಯಪುರ ಘಟಕ ಮತ್ತು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಯೋಗದಲ್ಲಿ ಇದೇ ಜನವರಿ 31ರಂದು ‘ಪ್ರಾದೇಶಿಕ ಭಾಷೆಗಳಲ್ಲಿ ವಿಜ್ಞಾನ ಸಂವಹನ’ ಎಂಬ ವಿಷಯದ ಕುರಿತು ಒಂದು ದಿನದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ವಿವಿ ಕುಲಪತಿ ಬಿ ಕೆ ತುಳಸಿಮಾಲ ತಿಳಿಸಿದ್ದಾರೆ.
ವಿಜಯಪುರ ನಗರದಲ್ಲಿ ಪತ್ರಿಕಾ ಪ್ರಕಟಣೆ ಹೊಡರಿಸಿರುವ ಮಹಿಳಾ ವಿವಿಯ ಕುಲಪತಿ ಬಿ ಕೆ ತುಳಸಿಮಾಲ ಅವರು ಮಾತನಾಡಿ, “ವಿಚಾರ ಸಂಕಿರಣ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಭಾಗವಹಿಸಲಿದ್ದಾರೆ” ಎಂದು ಹೇಳಿದ್ದಾರೆ.
“ಸಂಪನ್ಮೂಲ ವ್ಯಕ್ತಿಗಳಾಗಿ ಸಹಾಯಕ ಪ್ರಾಧ್ಯಾಪಕ ಶ್ರೀರಾಮ ಭಟ್ ಹಾಗೂ ಹುನಗುಂದದ ವಿಜ್ಞಾನ ಶಿಕ್ಷಕ ರಮೇಶ ಎರಪ್ಪಾ ಬಾಲಾ ಭಾಗವಹಿಸಲಿದ್ದಾರೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ” ಎಂದರು.
ಈ ಸುದ್ದಿ ಓದಿದ್ದೀರಾ? ಗದಗ | ತಹಸೀಲ್ದಾರ ಕಛೇರಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ಸಾರ್ವಜನಿಕರ ಪರದಾಟ
“ಸಮಾರಂಭದಲ್ಲಿ ಸಹಾಯಕ ಪ್ರಾಧ್ಯಾಪಕರುಗಳಾದ ಡಾ.ಬಾಬು ಲಮಾಣಿ, ಡಾ.ತಹಮೀನಾ ಕೋಲಾರ ಮತ್ತು ಸಂದೀಪ ನಾಯಕ, ಬೋಧಕ ಸಿಬ್ಬಂದಿ ವರ್ಗದವರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ” ಎಂದು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.