ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಕಟ್ಯಾರು ಎಂಬಲ್ಲಿ ಪಟಾಕಿ ಗೋದಾಮಿನಲ್ಲಿ ಸ್ಫೋಟ ಉಂಟಾಗಿದ್ದು, ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆಯೊಂದು ನಡೆದಿದೆ.
ಸ್ವಾಮಿ(55) ಹಾಗೂ ಇನ್ನೊಬ್ಬ ಕಾರ್ಮಿಕ ದುರ್ಮರಣ ಹೊಂದಿರುವುದಾಗಿ ವರದಿಯಾಗಿದೆ. ಮತ್ತೋರ್ವ ಕಾರ್ಮಿಕ ಕೂಡಾ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಬಶೀರ್ ಎಂಬುವವರಿಗೆ ಸೇರಿದ ಸಾಲಿಡ್ ಫೈರ್ ವರ್ಕ್ಸ್ ಪಟಾಕಿ ಗೋದಾಮಿನ ಸಿಡಿಮದ್ದು ತಯಾರಕ ಸ್ಥಳದಲ್ಲಿ ಸ್ಫೋಟಕ ಸಂಭವಿಸಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಸ್ಫೋಟದ ತೀವ್ರತೆಗೆ ಜನ ಭಯಭೀತಗೊಂಡಿದ್ದಾರೆಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಏಮ್ಸ್ ಮಂಜೂರು ಮಾಡುವಂತೆ ಕೇಂದ್ರಕ್ಕೆ ಒತ್ತಾಯಿಸಲು ಸಿಎಂಗೆ ಮನವಿ
ಸ್ಫೋಟದ ರಭಸಕ್ಕೆ ಕಾರ್ಮಿಕರು ಗೋದಾಮಿನಿಂದ ಹಾರಿ ಬಿದ್ದಿದ್ದಾರೆ ಎನ್ನಲಾಗಿದೆ. ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.