ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಅಣಲೆಕೊಪ್ಪ 7ನೇ ವಾರ್ಡಿನ 5ನೇ ಕ್ರಾಸ್‌ನಲ್ಲಿ ಚರಂಡಿ ಗಬ್ಬೆದ್ದು ನಾರುತ್ತಿದ್ದರೂ ಈ ವಾರ್ಡ್‌ನ ಕೌನ್ಸಿಲರ್ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.
ಚರಂಡಿಗಳು ತುಂಬಿ ತ್ಯಾಜ್ಯ ನೀರು ಹರಿಯುತ್ತಿರುವ ಕಾರಣ ಗಬ್ಬು ನಾರುತ್ತಿದೆ. ಇದರಿಂದ ಸೊಳ್ಳೆ, ಕ್ರಿಮಿ ಕೀಟಗಳ ಕಾಟ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗಗಳು ಎದುರಾಗುವ ಭೀತಿ ಉಂಟಾಗಿದೆ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳೀಯ ನಿವಾಸಿ ಸಂದೀಪ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “7ನೇ ವಾರ್ಡ್‌ನ ಚರಂಡಿಗಳು ತುಂಬಿ ಹರಿಯುತ್ತಿದ್ದು, ಗಬ್ಬೆದ್ದು ನಾರುತ್ತಿವೆ. 5 ವರ್ಷದಿಂದಲೂ ಈ ಸಮಸ್ಯೆ ಬಗೆಹರಿದಿಲ್ಲ. ಸಾಂಕ್ರಾಮಿಕ ರೋಗಗಳ ಸಮಸ್ಯೆ ಎದುರುಗೊಳ್ಳುತ್ತಿದೆ. ಸ್ಥಳೀಯ ವಾರ್ಡ್ ಕೌನ್ಸಿಲರ್ ಪ್ರೇಮಾಶ್ರೀ ಅವರ ಗಮನಕ್ಕೆ ತಂದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ” ಎಂದು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಕುಡಿಯುವ ನೀರಿನ ಬಿಕ್ಕಟ್ಟು ನಿವಾರಣೆಗೆ ಜಿಲ್ಲಾಡಳಿತ ಸಿದ್ಧತೆ
“ಸಾಗರ ತಾಲೂಕು ಆಡಳಿತ ಮತ್ತು ಅಧಿಕಾರಿಗಳು ವಾರ್ಡ್‌ಗಳಿಗೆ ಭೇಟಿ ನೀಡಿ ಗಮನ ಹರಿಸಬೇಕು. ಚರಂಡಿ ಸ್ವಚ್ಛಗೊಳಿಸಿಕೊಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಶೀಘ್ರದಲ್ಲಿ ಚರಂಡಿಗಳನ್ನು ಸರಿಪಡಿಸಿಕೊಡಬೇಕು” ಎಂದು ಒತ್ತಾಯಿಸಿದರು.