ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; ಫೆ. 27ಕ್ಕೆ ಮತದಾನ ಮತ್ತು ಫಲಿತಾಂಶ

Date:

Advertisements

ಭಾರತ ಚುನಾವಣಾ ಆಯೋಗ ರಾಜ್ಯಸಭೆಯ 56 ಸ್ಥಾನಗಳಿಗೆ ಸೋಮವಾರ ಚುನಾವಣೆಯನ್ನು ಘೋಷಿಸಿದ್ದು, ಅದರಲ್ಲಿ ಕರ್ನಾಟಕ ರಾಜ್ಯದ ನಾಲ್ಕು ಸ್ಥಾನಗಳು ಸಹ ಒಳಗೊಂಡಿವೆ.

ರಾಜ್ಯಸಭೆಯ ಈ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ರಾಜ್ಯ ವಿಧಾನಸಭೆಯ 224 ಶಾಸಕರು ಮತದಾರರಾಗಿದ್ದು, ಫೆಬ್ರವರಿ 27 ರಂದು ವಿಧಾನಸೌಧದಲ್ಲಿ ಬೆಳಗ್ಗೆ 9:00 ರಿಂದ ಸಂಜೆ 4:00 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಂದು ಸಂಜೆ 5 ಗಂಟೆಗೆ ಅಲ್ಲಿಯೇ ಮತ ಎಣಿಕೆ ಕಾರ್ಯ ಆರಂಭವಾಗಲಿದೆ.

ಪ್ರಸ್ತುತ ರಾಜ್ಯದಿಂದ ರಾಜ್ಯಸಭೆಯ ಪ್ರತಿನಿಧಿಗಳಾಗಿರುವ ರಾಜೀವ್ ಚಂದ್ರಶೇಖರ್, ಜಿ.ಸಿ ಚಂದ್ರಶೇಖರ್, ಡಾ.ಎಲ್.ಹನುಮಂತಯ್ಯ ಹಾಗೂ ಸೈಯದ್ ನಾಸಿರ್ ಹುಸೇನ್ ಅವರ ಅಧಿಕಾರ ಅವಧಿ 02-04-2024 ಕ್ಕೆ ಕೊನೆಗೊಳ್ಳಲಿದ್ದು, ಇವರುಗಳಿಂದ ತೆರವಾಗಲಿರುವ 4 ಸ್ಥಾನಗಳಿಗೆ ಈ ಚುನಾವಣೆ ನಡೆಯಲಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisements

ಭಾರತ ಚುನಾವಣಾ ಆಯೋಗ ಘೋಷಿಸಿರುವ ರಾಜ್ಯಸಭೆಯ ಸ್ಥಾನಗಳ ಚುನಾವಣಾ ವೇಳಾಪಟ್ಟಿ ಈ ಕೆಳಗಿನಂತಿದೆ.

ಸಂಖ್ಯೆ  ಕಾರ್ಯಕ್ರಮಗಳು    ನಿಗದಿಪಡಿಸಿರುವ ದಿನಾಂಕ
01      ಅಧಿಸೂಚನೆಯ      ದಿನಾಂಕ 08 ಫೆಬ್ರವರಿ 2024 (ಗುರುವಾರ)
02      ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ 15 ಫೆಬ್ರವರಿ 2024 (ಗುರುವಾರ)
03      ನಾಮಪತ್ರಗಳ ಪರಿಶೀಲನೆ ದಿನಾಂಕ 16 ಫೆಬ್ರವರಿ 2024 (ಶುಕ್ರವಾರ)
04      ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನಾಂಕ 20 ಫೆಬ್ರವರಿ 2024 (ಮಂಗಳವಾರ)
05      ಮತದಾನದ ದಿನಾಂಕ ಹಾಗೂ ಸಮಯ 27 ಫೆಬ್ರವರಿ 2024 (ಮಂಗಳವಾರ)
ಬೆಳಿಗ್ಗೆ 9:00 ರಿಂದ ಸಂಜೆ 4:00 ಗಂಟೆ
06     ಮತ ಎಣಿಕೆ ದಿನಾಂಕ ಹಾಗೂ ಸಮಯ 27 ಫೆಬ್ರವರಿ 2024 (ಮಂಗಳವಾರ)
ಸಂಜೆ 5:00 ಗಂಟೆಯಿಂದ ಪ್ರಾರಂಭ
07      ಚುನಾವಣಾ ಪ್ರಕ್ರಿಯೆ ಕೊನೆಗೊಳ್ಳುವ ದಿನಾಂಕ 29 ಫೆಬ್ರವರಿ 2024 (ಗುರುವಾರ)

ರಾಜಕೀಯ ಬಲಾಬಲ

ರಾಜ್ಯಸಭೆಯ ಸದಸ್ಯರನ್ನು ರಾಜ್ಯ ವಿಧಾನಸಭೆಯ ಸದಸ್ಯರು ಆಯ್ಕೆ ಮಾಡುತ್ತಾರೆ. ಓರ್ವ ರಾಜ್ಯಸಭಾ ಅಭ್ಯರ್ಥಿ ಗೆಲ್ಲಲು 45 ಬೇಕು. ಈಗಾಗಲೇ ಕಾಂಗ್ರೆಸ್​ ಕಾಂಗ್ರೆಸ್​ ಬಳಿ 135 ವಿಧಾನಸಭಾ ಸ್ಥಾನಗಳು ಇದ್ದರೆ, ಬಿಜೆಪಿ ಬಳಿ 66 ಹಾಗೂ ಜೆಡಿಎಸ್​ 19 ಸ್ಥಾನಗಳನ್ನು ಹೊಂದಿದೆ. ಹಾಗಾಗಿ ಕಾಂಗ್ರೆಸ್​ ಮತ್ತೆ ಮೂರು ಸ್ಥಾನ ಹಾಗೂ ಬಿಜೆಪಿ 1 ಸ್ಥಾನದಲ್ಲಿ ನಿರಾಯಾಸವಾಗಿ ಗೆಲ್ಲಲಿದೆ. ಒಂದು ವೇಳೆ ಐದನೇ ಅಭ್ಯರ್ಥಿ ಕಣಕ್ಕಿಳಿದರೆ ಮಾತ್ರ ಚುನಾವಣೆ ನಡೆಯಲಿದೆ.

ಮತದಾನ ಪ್ರಕ್ರಿಯೆ

ರಾಜ್ಯಸಭಾ ಚುನಾವಣೆಯಲ್ಲಿ ತಮ್ಮ ತಮ್ಮ ಪಕ್ಷದ ಅಧಿಕೃತ ಪ್ರತಿನಿಧಿ/ಏಜೆಂಟ್‌ಗಳಿಗೆ ತೋರಿಸಿಯೇ ಮತ ಚಲಾಯಿಸಬೇಕು. ಹಾಗಂತ, ವಿಪ್ ಉಲ್ಲಂಘಿಸಿ ಕ್ರಾಸ್ ವೋಟಿಂಗ್ ಮಾಡಬಾರದು ಎನ್ನುವ ಕಾನೂನೇನೂ ಇಲ್ಲ. ಒಂದು ವೇಳೆ ಅಡ್ಡಮತದಾನ ಮಾಡಿದರೆ ಆಯಾ ಪಕ್ಷದಿಂದ ಪಕ್ಷ ವಿರೋಧಿ ಚಟುವಟಿಕೆ ಅಡಿಯಲ್ಲಿ ಕ್ರಮಕೈಗೊಳ್ಳುವ ಅವಕಾಶವೂ ಇದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X