ಮಂಡ್ಯದಲ್ಲಿ ಭಗವಾಧ್ವಜ | ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಕುಮಾರಸ್ವಾಮಿ ಕುತಂತ್ರ: ಸಿದ್ದರಾಮಯ್ಯ

Date:

Advertisements

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಭಗವಾಧ್ವಜ ಹಾರಿಸಿದ್ದರ ಪರವಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಪ್ರತಿಭಟನೆ ಮಾಡಲು ಹೋಗುತ್ತಾರೆ ಎಂದರೆ ಇದು ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಹಾಗೂ ಪ್ರಚೋದನೆ ನೀಡಲು ಮಾಡುತ್ತಿರುವ ರಾಜಕೀಯ ಕುತಂತ್ರ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಅವರು ಸೋಮವಾರ ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಇದರಲ್ಲಿ ಸರ್ಕಾರದ ವೈಫಲ್ಯ ಇಲ್ಲ. ರಾಷ್ಟ್ರಧ್ವಜ ಅಥವಾ ಕನ್ನಡ ಧ್ವಜ ಹಾರಿಸುತ್ತೇವೆ, ಯಾವುದೇ ಧರ್ಮದ ಧ್ವಜವನ್ನು ಹಾಕುವುದಿಲ್ಲ ಎಂದು ಹೇಳಿ ಅದನ್ನು ಉಲ್ಲಂಘಿಸಿ ಭಗವಾಧ್ವಜವನ್ನು ಹಾರಿಸಿದ್ದಾರೆ. ಅವರೇ ಬರೆದುಕೊಟ್ಟ ಮುಚ್ಚಳಿಕೆಗೆ ಬರೆದುಕೊಟ್ಟಿದ್ದರ ವಿರುದ್ಧವಾಗಿ ನಡೆದುಕೊಂಡಿದ್ದಾರೆ” ಎಂದರು.

ಇಬ್ಬರಿಗೆ ಲಾಠಿ ಚಾರ್ಜ್ ವೇಳೆ ಗಾಯವಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, “ಪೋಲಿಸರಿಗೆ ಹೊಡೆದಿದ್ದಾರೆ ಎಂಬ ಮಾಹಿತಿ ಇದೆ. ಪೋಲಿಸಿನವರಿಗೆ ಹೊಡೆದರೆ ಏನು ಮಾಡುತ್ತಾರೆ?” ಎಂದರು.

Advertisements

ಧ್ವಜದ ವಿಚಾರದಲ್ಲಿ ನಕಲಿ ದಾಖಲೆ ಸೃಷಿಯಾಗಿದ್ದು, ಘಟನೆಗೆ ಜಿಲ್ಲಾಧಿಕಾರಿ ಕಾರಣ, ಅವರು ಅಮಾನತು ಆಗುವವರೆಗೆ ನಾವು ಹೋರಾಟ ನಿಲ್ಲಿಸುವುದಿಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿಯವರು ಹೇಳಿರುವ ಬಗ್ಗೆ ಮಾತನಾಡಿ, “ಕುಮಾರಸ್ವಾಮಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನು ಗೊತ್ತಿದೆ. ಅವರು ಹೇಳಿದ್ದನ್ನು ಈವರೆಗೆ ಸಾಬೀತು ಮಾಡಿದ್ದಾರೆಯೇ? ಸುಮ್ಮನೆ ಆರೋಪ ಮಾಡಬೇಕೆಂದು ಮಾಡುತ್ತಿದ್ದಾರೆ ಎಂದರು. ಕಾನೂನನ್ನು ಯಾರೇ ಕೈಗೆತ್ತಿಕೊಂಡರೆ ಸರ್ಕಾರ ಅದನ್ನು ಸಹಿಸುವುದಿಲ್ಲ” ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

ಕುಮಾರಸ್ವಾಮಿ ಈಗ ಬಿಜೆಪಿ ವಕ್ತಾರರು

“ಹೆಚ್.ಡಿ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಕೈಜೋಡಿಸಿರುವುದರಿಂದ ಈಗ ಬಿಜೆಪಿಯ ವಕ್ತಾರರಾಗಿದ್ದಾರೆ. ಬಿಜೆಪಿಯನ್ನು ಹಾಡಿ ಹೊಗಳುತ್ತಿದ್ದಾರೆ. ತಮ್ಮ ಪಕ್ಷದ ಹೆಸರಿನ ಜೊತೆಗೆ ಜಾತ್ಯಾತೀತ ಎಂದು ಇಟ್ಟುಕೊಂಡಿದ್ದಾರೆ. ಜಾತ್ಯಾತೀತ ಎಂದರೆ ಏನು? ಬಿಜೆಪಿ ಅವರೊಂದಿಗೆ ಸೇರಿಕೊಂಡರೆ ಇವರನ್ನು ಏನೆಂದು ಕರೆಯಬೇಕು” ಎಂದು ಪ್ರಶ್ನಿಸಿದರು.

ಮೊದಲು ನಡವಳಿಕೆ ಕಲಿತು ಆಮೇಲೆ ಬೇರೆಯವರಿಗೆ ಹೇಳಲಿ

“ಹೆಸರಿನಲ್ಲಿ ರಾಮ ಇದ್ದರೆ ಸಾಲದು ನಡವಳಿಕೆ ಸರಿಯಾಗಿರಬೇಕು ಎಂದಿರುವ ಕುಮಾರಸ್ವಾಮಿಯವರು ಮೊದಲು ನಡವಳಿಕೆ ಕಲಿತು ಆಮೇಲೆ ಬೇರೆಯವರಿಗೆ ಹೇಳಲಿ ಎಂದು ತಿರುಗೇಟು” ನೀಡಿದರು.

“ಕೋಮುವಿಷಯಗಳನ್ನು ಮುನ್ನೆಲೆಗೆ ತರುತ್ತಾರೆ ನಿನ್ನೆ ಚಿತ್ರದುರ್ಗದಲ್ಲಿ ಅಹಿಂದ ಸಮಾವೇಶದಿಂದಾಗಿ ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲುತ್ತೇವೆ ಎಂಬ ಭಯ ಹುಟ್ಟಿದೆ. ಅದಕ್ಕೆ ಈ ರೀತಿ ಹೇಳಿಕೆ ನೀಡುತ್ತಾರೆ. ಯಾವುದೇ ವಿಷಯವಿಲ್ಲದೇ ಇಲ್ಲದಲ್ಲಿ ಅಂಥ ಕಡೆ ಕೋಮುವಿಷಯಗಳನ್ನು ಮುಂದಕ್ಕೆ ತರುತ್ತಾರೆ” ಎಂದರು.

ಸರ್ಕಾರ ಹೇಗೆ ಬೀಳುತ್ತದೆ?

ಮುಂದಿನ ಲೋಕಸಭಾ ಚುನಾವಣೆ ವೇಳೆಗೆ ಸರ್ಕಾರ ಬಿದ್ದುಹೋಗಲಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ, “ನಾವು 136 ಜನ ಗೆದ್ದಿದ್ದೇವೆ ಶೇ 43% ರಷ್ಟು ಮತಗಳು ನಮಗೆ ಬಂದಿವೆ ಹೇಗೆ ಬಿದ್ದುಹೋಗುತ್ತದೆ” ಎಂದು ಮರುಪ್ರಶ್ನಿಸಿದರು.

ತುಮಕೂರಿನವರೆಗೆ ಮೆಟ್ರೋ ವಿಸ್ತರಣೆಯಾಗಬೇಕೆಂದು ಗೃಹ ಸಚಿವ ಜಿ.ಪರಮೇಶ್ವರ್ ಬೇಡಿಕೆ ಇಟ್ಟುರುವ ಬಗ್ಗೆ ಪ್ರತಿಕ್ರಿಯೆ ನೀಡಿ. ಅದನ್ನು ಸಚಿವ ಸಂಪುಟದಲ್ಲಿಟ್ಟು ತೀರ್ಮಾನಿಸಲಾಗುವುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X