ಮೈಸೂರು | ಅಂಬೇಡ್ಕರ್​ ನಾಮಫಲಕ ವಿಚಾರ: ಎರಡು ಸಮುದಾಯಗಳ ನಡುವೆ ಸಂಘರ್ಷ; ಪೊಲೀಸರ ಸಹಿತ 30ಕ್ಕೂ ಅಧಿಕ ಮಂದಿಗೆ ಗಾಯ

Date:

Advertisements

ಅಂಬೇಡ್ಕರ್ ನಾಮಫಲಕ ನೆಡುವ ವಿಚಾರವಾಗಿ ಸೋಮವಾರ ಸಂಜೆ 7.30ರಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿರುವುದಾಗಿ ವರದಿಯಾಗಿದೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳ ನಡುವೆ ಘರ್ಷಣೆ ನಡೆದಿದೆ.

ದಲಿತ ಸಮುದಾಯ ಹಾಗೂ ನಾಯಕ ಸಮುದಾಯದ ನಡುವೆ ಅಂಬೇಡ್ಕರ್ ನಾಮಫಲಕ ಅಳವಡಿಸುವ ವಿಚಾರದಲ್ಲಿ ಘರ್ಷಣೆ ಉಂಟಾಗಿದ್ದು, ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.

Advertisements

IMG 20240129 WA1772

ದಲಿತರ ಬೀದಿಯ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಉದ್ರಿಕ್ತ ಗುಂಪು ಧ್ವಂಸ ಮಾಡಿದ್ದಲ್ಲದೆ, ಕಲ್ಲು ತೂರಾಟ ಕೂಡ ನಡೆದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನಂಜನಗೂಡು ಗ್ರಾಮಾಂತರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪೊಲೀಸರ ಸಹಿತ 30ಕ್ಕೂ ಅಧಿಕ ಮಂದಿಗೆ ಗಾಯಗಳಾಗಿರುವುದಾಗಿ ವರದಿಯಾಗಿದೆ. ಈ ಪೈಕಿ ಎಂಟು ಮಂದಿಯನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಂಜನಗೂಡು ಸರ್ಕಲ್ ಇನ್ಸ್‌ಪೆಕ್ಟರ್ ಸುನಿಲ್, ಗ್ರಾಮಾಂತರ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಜಗದೀಶ್ ಹಾಗೂ ಸಿಬ್ಬಂದಿ ಗೋಪಾಲಕೃಷ್ಣ ಎಂಬುವವರಿಗೆ ಗಾಯಗಳಾಗಿವೆ.

ಘಟನೆಯ ಬಗ್ಗೆ ಮಾಹಿತಿ ಅರಿತ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಟ್ಕರ್, ಅಡಿಷನಲ್ ಎಸ್ ಪಿ ನಂದಿನಿ ಸಹಿತ ನೂರಾರು ಪೊಲೀಸರು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಘಟನೆ ಹಿನ್ನೆಲೆ

ಹಲ್ಲರೆ ಗ್ರಾಮದಿಂದ ಹುರ ಗ್ರಾಮದ ಕಡೆಗೆ ತೆರಳುವ ರಸ್ತೆಗೆ ಡಾ. ಬಿ ಆರ್ ಅಂಬೇಡ್ಕ‌ರ್ ಹೆಸರಿಡಲು ಪರಿಶಿಷ್ಟ ಸಮುದಾಯದ ಯುವಕರು ಸ್ಥಳೀಯ ಪಂಚಾಯಿತಿಗೆ ಅರ್ಜಿ ಸಲ್ಲಿಸಿ ಪಿಡಿಒ ಅವರಿಂದ ಅನುಮತಿ ಪಡೆದಿದ್ದರು. ಆದರೆ ‘ಬೀದಿಯ ಕೊನೆಯಲ್ಲಿ ನಮ್ಮ ಮನೆಗಳಿದ್ದು, ಇಲ್ಲಿ ಫಲಕ ಅಳವಡಿಸಬೇಡಿ’ ಎಂದು ನಾಯಕ ಸಮುದಾಯದವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಐದು ದಿನಗಳ ಹಿಂದೆ ನಾಮಫಲಕ ಅಳವಡಿಕೆ ಕಾರ್ಯಕ್ರಮ ಮುಂದೂಡಲಾಗಿತ್ತು.

ಸೋಮವಾರ ಸಂಜೆ ಪರಿಶಿಷ್ಟ ಜಾತಿಯ ಯುವಕರು ರಸ್ತೆಯಲ್ಲಿ ನಾಮಫಲಕ ಅಳವಡಿಸಲು ಮುಂದಾದಾಗ ಆರಂಭಗೊಂಡ ಜಗಳವು ಹೊಡೆದಾಟಕ್ಕೆ ತಿರುಗಿದ್ದು, ಪರಸ್ಪರ ಕಲ್ಲು ಹಾಗೂ ಒನಕೆಯಿಂದ ಹಲ್ಲೆ ನಡೆಸಿದ್ದಾರೆ. ಮಹಿಳೆಯರು, ಮಕ್ಕಳೂ ಕೂಡ ಘಟನೆಯಲ್ಲಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X