ದೇವರಹಿಪ್ಪರಗಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಬರ ಪರಿಹಾರದ ಹಣ ರೈತರ ಖಾತೆಗೆ ಜಮಾಆಗಿಲ್ಲ. ರೈತರಿಗೆ ಕೂಡಲೇ ಪರಿಹಾರ ಹಾಗೂ ಬೆಳೆ ವಿಮೆ ನೀಡಬೇಕೆಂದು ಎಂದು ಆಗ್ರಹಿಸಿ ತಹಸೀಲ್ದಾರ್ ಪ್ರಕಾಶ ಸಿಂದಗಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ವೇಳೆ ತಾಲೂಕು ಘಟಕದ ಅಧ್ಯಕ್ಷ ಐ.ಎಸ್. ಕುಳೆಕುಮಟಗಿ ಮಾತನಾಡಿ, ರಾಜ್ಯದಲ್ಲಿ ಬರಗಾಲ ಘೋಷಣೆ ಮಾಡಿ ನಾಲ್ಕು ತಿಂಗಳುಗತಿಸಿದರೂ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಬರ ಪರಿಹಾರದ ಹಣ ರೈತರ ಖಾತೆಗೆ ಜಮಾ ಆಗದೆ ಇರುವುದು ವಿಪರ್ಯಾಸ. ಸಂಕಷ್ಟದಲ್ಲಿರುವ ರೈತರಿಗೆ ಕೂಡಲೇ ಪರಿಹಾರ ಹಾಗೂ ಬೆಳೆ ವಿಮೆ ಒದಗಿಸಬೇಕು ಎಂದು ಅವರು ಆಗ್ರಹಿಸಿದರು.
ರೈತ ಸಂಘದ ಗೌರವ ಅಧ್ಯಕ್ಷರಾದ ಶಿವಾನಂದ ಹಿರೇಮಠ ಮಾತನಾಡಿ, ವಿಜಯಪುರ ಜಿಲ್ಲೆಯ ರೈತರ ಸಂಪೂರ್ಣ ಸಾಲ ಮನ್ನಾ ಹಾಗೂ ಬೆಳೆ ವಿಮೆ ನೀಡಬೇಕು. ಈ ಕುರಿತು ಶಾಸಕರು, ಸಂಸದರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ರೈತರ ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲದಿದ್ದರೆ ಬರುವಂತ ಚುನಾವಣೆಯಲ್ಲಿ ಪಾಠಕಲಿಸಬೇಕಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರ ಘಟಕದ ಅಧ್ಯಕ್ಷರಾದ ಸಂಪತ್ ಜಮಾದಾರ, ರೈತ ಮುಖಂಡರುಗಳಾದ ಪ್ರಕಾಶ ಗುಡಿಮನಿ, ರುದ್ರಯ್ಯ ಹಿರೇಮಠ, ಸಿದ್ದನಗೌಡ ಬಿರಾದಾರ, ಹಣಮಂತ್ರಾಯಗೌಡ ಪಾಟೀಲ, ಸಾಹೇಬಗೌಡ ಪಾಟೀಲ, ಬಾಬುಗೌಡ ಪಾಟೀಲ, ಗಂಗಾರಾಮ ರಾಠೋಡ, ಸಂತೋಷ ರಾಠೋಡ, ಶ್ರೀಮಂತ ರಾಠೋಡ,ದ್ವಾವಪ್ಪಗೌಡ ಪಾಟೀಲ, ಶಿವಪುತ್ರಗೌಡ ಪಾಟೀಲ ಸೇರಿದಂತೆ ಹಲವಾರು ಗ್ರಾಮಗಳ ರೈತರು ಮುಖಂಡರು ಉಪಸ್ಥಿತರಿದ್ದರು.
ತಾಲೂಕಿನ ಸುದ್ದಿ ಸಮಾಚಾರಕ್ಕಾಗಿ ನಿಮ್ಮ ಮೇಲ್ ಹಾಗೂ ಫೋನ್ ನಂಬರ್ ನೀಡಿ.