ತುಮಕೂರು | ಭೌತಶಾಸ್ತ್ರ ವಿಭಾಗ ಪುನಾರಂಭಿಸಿಸಲು ಒತ್ತಾಯಿಸಿ ಸಿಎಂಗೆ ಎಐಡಿಎಸ್‌ಒ ಮನವಿ

Date:

Advertisements

ನಿಗದಿತ ದಾಖಲಾತಿ ಇದ್ದರೂ ಪ್ರಸ್ತುತ ಶೈಕ್ಷಣಿಕ ವರ್ಷದಿಂದ ತುಮಕೂರು ವಿ.ವಿ ವಿಜ್ಞಾನ ಕಾಲೇಜಿನಲ್ಲಿರುವ ಭೌತಶಾಸ್ತ್ರ ಸ್ನಾತಕೋತ್ತರ ಪದವಿ ವಿಭಾಗವನ್ನು ಅವೈಜ್ಞಾನಿಕ ಕಾರಣಗಳನ್ನು ನೀಡಿ ಮುಚ್ಚಲಾಗಿದೆ ಎಂದು ಎಐಡಿಎಸ್‌ಒ ತುಮಕೂರು ಜಿಲ್ಲಾ ಅಧ್ಯಕ್ಷರಾದ ಅಶ್ವಿನಿ ಆರೋಪಿಸಿದ್ದು, ಈ ಕೂಡಲೇ ಮುಚ್ಚಿರುವ ವಿಭಾಗವನನ್ನು ಪುನರಾಂಭಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಸರ್ಕಾರಿ ವಿಜ್ಞಾನ ಕಾಲೇಜಿಗೆ 2007ರಲ್ಲಿ ಸರ್ಕಾರ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಪರಿಸರ ವಿಜ್ಞಾನ ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು ಮಂಜೂರು ಮಾಡಿದೆ. ನಂತರ 2010ರಲ್ಲಿ ಸರ್ಕಾರಿ ವಿಜ್ಞಾನ ಕಾಲೇಜು ತುಮಕೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಾಗಿ ಮಾರ್ಪಾಡಾಗಿದೆ.

ಈಗ ಹೊಸದಾಗಿ ವಿ.ವಿ ಕ್ಯಾಂಪಸ್ ನಗರದ ಹೊರವಲಯದಲ್ಲಿ ಆರಂಭವಾಗುತ್ತಿದ್ದು ಅಲ್ಲಿ ಇನ್ನೂ ಸಂಪೂರ್ಣವಾಗಿ ತರಗತಿಗಳನ್ನು ಪ್ರಾರಂಭಿಸಿಲ್ಲ ಮತ್ತು ಅಲ್ಲಿಯೂ ಈಗಾಗಲೇ ಒಂದು ಭೌತಶಾಸ್ತ್ರ ಸ್ನಾತಕೋತ್ತರ ಪದವಿ ವಿಭಾಗ (ವಿ.ವಿ ವಿಜ್ಞಾನ ಕಾಲೇಜಿನ ಮತ್ತು ಕ್ಯಾಂಪಸ್‌ನಲ್ಲಿರುವ ಭೌತಶಾಸ್ತ್ರ ವಿಭಾಗದ ಪಠ್ಯ ವಿಷಯ ಬೇರೆ ಬೇರೆ ಇರುತ್ತದೆ) ಚಾಲನೆಯಲ್ಲಿದ್ದು ಅಲ್ಲಿಯೂ ಬಹಳಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ.

Advertisements

ಆದರೆ, ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿಯು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನಲ್ಲಿರುವ ಭೌತಶಾಸ್ತ್ರ ಸ್ನಾತಕೋತ್ತರ ವಿಭಾಗದ ಪ್ರವೇಶವನ್ನು ಸ್ಥಗಿತಗೊಳಿಸಿರುವ ಕ್ರಮ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಧಕ್ಕೆಯನ್ನು ತರುತ್ತದೆ. ಕುಲಪತಿಗಳನ್ನು ಈ ಕುರಿತು ಪ್ರಶ್ನೆ ಮಾಡಿದಾಗ ತಾಂತ್ರಿಕ ದೋಷಗಳು ಮತ್ತು ಶೈಕ್ಷಣಿಕ ಗುಣಮಟ್ಟದ ಕೊರತೆ, ಹಣಕಾಸಿನ ಕೊರತೆ ಮತ್ತು ವಿದ್ಯಾರ್ಥಿಗಳಿಗೆ ಎರಡು ಕಡೆ ಒಂದೇ ಕೋರ್ಸ್‌ಗಳಿದ್ದರೆ ಗೊಂದಲವಾಗುತ್ತದೆ ಎಂಬ ಕಾರಣಗಳನ್ನು ಹೇಳುತ್ತಾರೆ. ನೆಗಡಿ ಬಂದರೆ ಮೂಗನ್ನೇ ಕತ್ತರಿಸಿ ಎಂಬ ಗಾದೆಯಂತೆ ಉತ್ತರಿಸುತ್ತಾರೆ.

ಕರ್ನಾಟಕದಲ್ಲಿರುವ ಹಲವಾರು ವಿಶ್ವವಿದ್ಯಾನಿಲಯಗಳ ಘಟಕ ಕಾಲೇಜುಗಳಲ್ಲಿ, ಸಂಯೋಜಿತ ಪದವಿ ಕಾಲೇಜುಗಳಲ್ಲಿ ಮತ್ತು ವಿಶ್ವವಿದ್ಯಾನಿಲಯದ ಕ್ಯಾಂಪಸ್‌ಗಳಲ್ಲಿ ಕೂಡ ಒಂದೇ ಸ್ನಾತಕೋತ್ತರ ಪದವಿ ಕೋರ್ಸ್ಗಳಿರುವುದನ್ನು ನೋಡಬಹುದು.

ವಿಶ್ವವಿದ್ಯಾನಿಲಯದ ಈ ಶಿಕ್ಷಣವಿರೋಧಿ ನಿಲುವು ತುಮಕೂರಿನ ಶಿಕ್ಷಣತಜ್ಞರು, ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ ಮತ್ತು ಶಿಕ್ಷಣಪ್ರೇಮಿ ಜನತೆಗೆ ಆತಂಕವನ್ನುಂಟು ಮಾಡಿದೆ ಎಂದು ಹೇಳಿದ್ದಾರೆ. ಈ ಕ್ರಮವನ್ನು ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯು ಖಂಡಿಸುತ್ತದೆ. ಮತ್ತು ಮಾನ್ಯ ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಿ ಈ ಸಮಸ್ಯೆಯನ್ನು ಬಗೆಹರಿಸಲು, ಮುಚ್ಚಿರುವ ಭೌತಶಾಸ್ತ್ರ ಸ್ನಾತಕೋತ್ತರ ವಿಭಾಗವನ್ನು ಪುನರಾರಂಭಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿಗಳಾದ ಲಕ್ಕಪ್ಪ ಸಿ.ಬಿ, ಸೆಕ್ರೇಟರಿಯೇಟ್ ಸದಸ್ಯರಾದ ಭರತ್ ಮತ್ತು ಪಲ್ಲವಿ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X