ರಾಮಭಕ್ತ ಗಾಂಧಿಯನ್ನೇ ಹತ್ಯೆಗೈದ ಗೋಡ್ಸೆಯನ್ನು ಪೂಜಿಸುವವರು ನಮ್ಮ ನಡುವೆ ಇರುವುದು ದುರಂತ: ಸಿಎಂ ಸಿದ್ದರಾಮಯ್ಯ

Date:

Advertisements

ಎಲ್ಲ ಜಾತಿಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದ ಮಹಾತ್ಮಾ ಗಾಂಧೀಜಿಯವರು ಎಲ್ಲರನ್ನೂ ಸಮಾನವಾಗಿ ಕಾಣುವ, ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಮಂಗಳವಾರ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಇಂದು, ಮಹಾತ್ಮಾ ಗಾಂಧೀಜಿಯವರು 1948ರ ಜನವರಿ 30 ರಂದು ಗೋಡ್ಸೆ ಗುಂಡಿಗೆ ಬಲಿಯಾಗಿ ಹುತಾತ್ಮರಾದ ದಿನ” ಎಂದು ಹೇಳಿದರು.

“ಗಾಂಧೀಜಿಯವರು ವಲ್ಲಭಾ ಬಾಯಿ ಪಟೇಲರೊಂದಿಗೆ ಸಂವಾದಿಸಿದ ನಂತರ ಭಜನೆಗೆ ತೆರಳಲು ಸ್ವಲ್ಪ ವಿಳಂಬವಾಗಿದ್ದ ಸಂದರ್ಭದಲ್ಲಿ ಹಂತಕ ಗೋಡ್ಸೆ, ಗಾಂಧೀಜಿಯವರ ಕಾಲಿಗೆ ನಮಸ್ಕರಿಸುವ ನೆಪದಲ್ಲಿ ಅವರನ್ನು ಹತ್ಯೆಗೈದ. ಈ ದೇಶಕ್ಕೆ ಅವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಲಭಿಸಿತು. ಕಾಂಗ್ರೆಸ್ ನ ಬಹಳಷ್ಟು ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ” ಎಂದು ತಿಳಿಸಿದರು.

Advertisements

ಶ್ರೀರಾಮನ ಮೇಲೆ ಗಾಂಧಿಯವರಿಗೆ ಅಪಾರ ಭಕ್ತಿ

“ತಮ್ಮ ಕೊನೆಯುಸಿರೆಳೆದಾಗಲೂ ‘ಹೇ ರಾಮ್’ ಎಂದು ಉಚ್ಛರಿಸಿದ್ದರು. ಶ್ರೀರಾಮನ ಬಗ್ಗೆ ಅಪಾರ ಭಕ್ತಿ, ನಂಬಿಕೆಯನ್ನು ಹೊಂದಿದ್ದರು. ಆದ್ದರಿಂದಲೇ ‘ರಘುಪತಿ ರಾಘವ ರಾಜಾರಾಮ್ ’ ಎಂಬುದು ಅವರ ನೆಚ್ಚಿನ ಭಜನೆಯಾಗಿತ್ತು. ಶ್ರೀರಾಮ ಪಿತೃವಾಕ್ಯ ಪರಿಪಾಲಕನಾಗಿದ್ದು, ಹದಿನಾಲ್ಕು ವರ್ಷಗಳ ಕಾಲ ವನವಾಸಕ್ಕೆ ತೆರಳಿದ್ದ. ಆದರ್ಶಮಯ ಆಡಳಿತವನ್ನು ನೀಡಿದ ಶ್ರೀರಾಮಚಂದ್ರನನ್ನು ಪೂಜಿಸುವ ಮಹಾತ್ಮಾ ಗಾಂಧಿಯವರನ್ನು ಮತಾಂಧನಾಗಿದ್ದ ಗೋಡ್ಸೆ ಹತ್ಯೆಗೈದ. ಗಾಂಧಿ ಆದರ್ಶದಲ್ಲಿ ನಡೆದು ನಾವೆಲ್ಲರೂ ಎಲ್ಲ ಧರ್ಮದವರನ್ನೂ ಸಮಾನವಾಗಿ ಕಾಣಬೇಕು. ಸತ್ಯ ಅಹಿಂಸೆಯ ಹಾದಿಯನ್ನು ತೋರಿದ ಗಾಂಧೀಜಿಯವರನ್ನು ರಾಷ್ಟ್ರಪಿತ ಎಂದು ಕರೆಯಲಾಗುತ್ತದೆ. ಅಂತಹ ಮಹಾನ್ ವ್ಯಕ್ತಿಯ ಹತ್ಯೆಗೈದ ಗೋಡ್ಸೆಯನ್ನು ಪೂಜಿಸುವವರು ನಮ್ಮ ನಡುವೆ ಇರುವುದು ದುರಂತ. ರಾಜ್ಯದ ಜನತೆ ಹಾಗೂ ಸರ್ಕಾರದ ಪರವಾಗಿ ಮಹಾತ್ಮಾ ಗಾಂಧೀಜಿಯವರಿಗೆ ನಮ್ಮ ನಮನಗಳನ್ನು ಸಲ್ಲಿಸುತ್ತೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೆರಗೋಡು ಧ್ವಜ ವಿವಾದ | ಧ್ವಜ ತೆರವು ವಿಚಾರವಾಗಿ ಸರ್ಕಾರವೇ ನಕಲಿ ದಾಖಲೆ ಸೃಷ್ಟಿಸಿದೆ: ಕುಮಾರಸ್ವಾಮಿ

ಸಮಾಜದಲ್ಲಿ ಶಾಂತಿ ನೆಲೆಸಬೇಕು

ಗಾಂಧೀಜಿಯವರು ಶಾಂತಿ ಸಂದೇಶವನ್ನು ಸಾರಿದರು. ಆದರೆ ಇತ್ತೀಚೆಗೆ ಸಮಾಜದಲ್ಲಿ ಶಾಂತಿಯನ್ನು ಕದಡುವ ಪ್ರಸಂಗಗಳು ನಡೆಯುತ್ತಿವೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ”ಗೋಡ್ಸೆ ಅನುಯಾಯಿಗಳು ಸಮಾಜದಲ್ಲಿ ಶಾಂತಿಯನ್ನು ಕದಡುತ್ತಿದ್ದಾರೆ. ಪರಸ್ಪರ ಪ್ರೀತಿ ವಿಶ್ವಾಸ ಹಾಗೂ ಶಾಂತಿ ಸಮಾಜದಲ್ಲಿ ನೆಲೆಸಬೇಕು. ಮನುಷ್ಯ ಮನುಷ್ಯರ ನಡುವೆ ವೈಷಮ್ಯ ಹೆಚ್ಚಿಸುವ ಕೆಲಸವಾಗಬಾರದು” ಎಂದು ಹೇಳಿದರು.

ಮಂಡ್ಯ ಘಟನೆ: ರಾಜಕೀಯ ದುರುದ್ದೇಶದಿಂದ ಕೂಡಿದೆ

ಜಿಲ್ಲಾಡಳಿತದ ವೈಫಲ್ಯದಿಂದ ಮಂಡ್ಯ ಘಟನೆ ನಡೆದಿದೆ ಎಂದು ಸಂಸದೆ ಸುಮಲತಾ ದೂಷಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ರಾಷ್ಟ್ರಧ್ವಜ ಅಥವಾ ಕನ್ನಡ ಧ್ವಜ ಹಾರಿಸಲು ಅನುಮತಿ ನೀಡಲಾಗಿತ್ತೇ ಹೊರತು ಯಾವುದೇ ಧರ್ಮ, ಜಾತಿ, ಪಕ್ಷದ ಧ್ವಜವನ್ನು ಹಾರಿಸುವುದಿಲ್ಲ ಎಂದು ಮುಚ್ಚಳಿಕೆ ಪತ್ರ ನೀಡಿದ ನಂತರ ಅದರ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಇದರಿಂದ ರಾಜಕೀಯ ಲಾಭ ಪಡೆಯುವ ದುರುದ್ದೇಶ ಇದ್ದು, ಸಮಾಜದಲ್ಲಿ ಅಶಾಂತಿಯನ್ನು ಉಂಟು ಮಾಡುವ ಪ್ರಯತ್ನ ಮಾಡಲಾಗಿದೆ” ಎಂದರು.

ಫೆಬ್ರವರಿ 8 ರಂದು ಮಂಡ್ಯ ಬಂದ್ ಮಾಡಲು ಮಾಜಿ ಸಿಎಂ ಕುಮಾರಸ್ವಾಮಿಯವರು ಕರೆ ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಿ, “ಬಂದ್ ಮಾಡುವ ಅಥವಾ ಮಾಡದಿರುವ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ. ಇವರೇ ಮುಚ್ಚಳಿಕೆ ಪತ್ರ ನೀಡಿ, ನಂತರ ಕಾರ್ಯಕ್ರಮದಲ್ಲಿ ಕೇಸರಿ ಧ್ವಜವನ್ನು ಹಾರಿಸಿ, ತಮ್ಮ ಮುಚ್ಚಳಿಕೆಯನ್ನು ತಾವೇ ಉಲ್ಲಂಘನೆ ಮಾಡಿರುವುದು ತಪ್ಪು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X