ಸಚಿವ ಬೋಸರಾಜು ಮನವಿ; ರಾಯಚೂರಿಗೆ ಏಮ್ಸ್‌ ಮಂಜೂರು ಮಾಡುವಂತೆ ವಿತ್ತ ಸಚಿವರಿಗೆ ಪತ್ರ ಬರೆದ ಸಿಎಂ

Date:

Advertisements

ಸಚಿವ ಎನ್ ಎಸ್ ಬೋಸರಾಜು ಅವರ ಮನವಿಯಂತೆ 2024-25 ನೇ ಸಾಲಿನ ಕೇಂದ್ರ ಆಯ-ವ್ಯಯದಲ್ಲಿ ರಾಯಚೂರಿಗೆ ಏಮ್ಸ್ (AIIMS) ಮಂಜೂರು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ.

ಜನವರಿ 25ರಂದು ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ಅವರು, ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿಯನ್ನು ಮಾಡಿಕೊಂಡಿದ್ದರು.

“ರಾಯಚೂರು ನಗರದಲ್ಲಿ ALL INDIA INSTITUTE OF MEDICAL SCIENCE (AIIMS) ಸ್ಥಾಪನೆ ಮಾಡಲು ಜಿಲ್ಲೆಯ ಜನರ ಮನವಿಯ ಮೇರೆಗೆ ಈಗಾಗಲೇ ನಮ್ಮ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿದೆ. ರಾಯಚೂರು ನಗರದಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಹಾಗೂ ಹೋರಾಟ ಸಮಿತಿಯಿಂದ ಕಳೆದ 625 ದಿನಗಳಿಂದ ಸರದಿ ಸತ್ಯಾಗ್ರಾಹ ಮುಂದುವರೆದಿದೆ” ಎಂದು ಬೋಸರಾಜು ಹೇಳಿದ್ದಾರೆ.”

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

“ರಾಯಚೂರು ಜಿಲ್ಲೆಯನ್ನು ಕೇಂದ್ರ ಸರಕಾರವು ಮಹತ್ವಾಕಾಂಕ್ಷೆ ಜಿಲ್ಲೆಯೆಂದು (Aspiration District) ಘೋಷಣೆ ಮಾಡಿದೆ. ಹಾಗೂ ಸಂವಿಧಾನದ 371 (ಜೆ) ವಿಧಿಯ ಅನ್ವಯ ವಿಶೇಷ ಸ್ಥಾನಮಾನ ನೀಡಲಾಗಿದೆ. ಹಿಂದುಳಿದ ಜಿಲ್ಲೆಯಾಗಿರುವ ರಾಯಚೂರಿನಲ್ಲಿ ಏಮ್ಸ್‌ (AIIMS) ಸ್ಥಾಪಿಸುವ ಮೂಲಕ ಆರೋಗ್ಯ, ಉದ್ಯೋಗ, ವೈದ್ಯಕೀಯ ಶಿಕ್ಷಣದ ಬಲವರ್ಧನೆಗಾಗಿ ಹಾಗೂ ಹಿಂದುಳಿದ ಹಣೆಪಟ್ಟಿ ಕಳಚುವ ಹಿನ್ನಲೆಯಲ್ಲಿ ಏಮ್ಸ್‌ ಮಂಜೂರು ಮಾಡಬೇಕಾಗಿದೆ” ಎಂದು ಬೋಸರಾಜು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X