ದೇಶದ ರಹಸ್ಯಗಳನ್ನು ಸೋರಿಕೆ ಮಾಡಿದ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಇಮ್ರಾನ್ ಖಾನ್ ಹಾಗೂ ಪಿಟಿಐ ಪಕ್ಷದ ಉಪಾಧ್ಯಕ್ಷ ಶಾ ಮೊಹಮ್ಮದ್ ಖುರೇಷಿ ಅವರಿಗೆ ಪಾಕಿಸ್ತಾನದ ವಿಶೇಷ ನ್ಯಾಯಾಲಯ ಸೈಪರ್ ಪ್ರಕರಣದಲ್ಲಿ 10 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.
ಸೈಪರ್ ಪ್ರಕರಣವು ರಾಜತಾಂತ್ರಿಕ ಪ್ರಕರಣಕ್ಕೆ ಸಂಬಂಧಿಸಿದ್ದು, ಇಮ್ರಾನ್ ಖಾನ್ ಆಳ್ವಿಕೆಯಲ್ಲಿ ಪ್ರಮುಖ ದಾಖಲೆಗಳು ಕಾಣೆಯಾಗಿದ್ದವು. ತಮ್ಮನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸುವುದಕ್ಕಾಗಿ ಸೈಪರ್ ಪ್ರಕರಣದ ಮೂಲಕ ಅವಿಶ್ವಾಸ ನಿರ್ಣಯ ಮಂಡಿಸಲಾಗಿದೆ ಎಂದು ಇಮ್ರಾನ್ ಖಾನ್ ಆರೋಪಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಹಾಗೂ ಖುರೇಷಿ ವಿರುದ್ಧ ಹತ್ತು ಸಾಕ್ಷಿಗಳನ್ನು ದಾಖಲಿಸಿಕೊಳ್ಳಲಾಯಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕ್‌ನ ತನಿಖಾ ಸಂಸ್ಥೆ ಎಫ್‌ಐಎ ಇಬ್ಬರು ಆರೋಪಿಗಳ ವಿರುದ್ಧ ದೇಶದ ರಾಜತಾಂತ್ರಿಕ ರಹಸ್ಯಗಳನ್ನು ಸೋರಿಕೆ ಮಾಡಿರುವುದಕ್ಕಾಗಿ ಆಗಸ್ಟ್‌ನಲ್ಲಿ ಬಂಧಿಸಿತ್ತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ
ಕಳೆದ ಡಿಸೆಂಬರ್‌ನಲ್ಲಿ ಪಾಕ್‌ನ ಸುಪ್ರೀಂ ಕೋರ್ಟ್ ಇಬ್ಬರಿಗೂ ಜಾಮೀನು ನೀಡಿತ್ತು. ಆದಾಗ್ಯೂ ಇಬ್ಬರು ಆರೋಪಿಗಳು ಇತರ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿದ್ದರು.
2022ರ ಏಪ್ರಿಲ್‌ನಲ್ಲಿ ಅವಿಶ್ವಾಸ ನಿರ್ಣಯದ ಮೂಲಕ ಇಮ್ರಾನ್ ಖಾನ್ ಅವರನ್ನು ಪದಚ್ಯುತಗೊಳಿಸಲಾಯಿತು. ತೋಷ್ಕಾನಾ ಪ್ರಕರಣದಲ್ಲಿ 2023ರ ಆಗಸ್ಟ್ 5ರಲ್ಲಿ ಇಸ್ಲಾಮಾಬಾದ್ ನ್ಯಾಯಾಲಯ ಇಮ್ರಾನ್‌ಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಸದ್ಯ ಇಮ್ರಾನ್ ಅಟೋಕ್‌ನ ಜಿಲ್ಲಾ ನ್ಯಾಯಾಲಯದಲ್ಲಿ ಸೆರೆಮನೆ ವಾಸ ಅನುಭವಿಸುತ್ತಿದ್ದಾರೆ.