ಹಿಂದೂ ಭಕ್ತನನ್ನು ಗುಂಡಿಕ್ಕಿ ಕೊಂದವರೇ ಈಗ ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ: ಸಿದ್ದರಾಮಯ್ಯ

Date:

Advertisements

ದೇಶದ ಆಡಳಿತದಿಂದ ಬಿಜೆಪಿಯನ್ನು ದೂರವಿಡುವುದೇ ಗಾಂಧೀಜಿಯವರಿಗೆ ಸಲ್ಲಿಸುವ ಗೌರವ. ಅವರು ಅಧಿಕಾರದಲ್ಲಿರಬಾರದು. ದೇಶದಲ್ಲಿ ಐಕ್ಯತೆ, ಶಾಂತಿಯಿಂದ ಇರಲು, ಎಲ್ಲರೂ ಮನುಷ್ಯರಾಗಿ ಬಾಳಬೇಕಾದರೆ ಜಾತ್ಯತೀತತೆಯಲ್ಲಿ ನಂಬಿಕೆ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಹಾತ್ಮ ಗಾಂಧೀಜಿಯವರ ಪುಣ್ಯ ಸ್ಮರಣೆಯ ಅಂಗವಾಗಿ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು.

“ಹಂತಕ ಗೋಡ್ಸೆ, ಗಾಂಧೀಜಿಯವರ ಕಾಲಿಗೆ ನಮಸ್ಕರಿಸುವ ನೆಪದಲ್ಲಿ ಅವರನ್ನು ಹತ್ಯೆಗೈದ. ಗಾಂಧಿಜೀಯವರನ್ನು ಹತ್ಯೆಗೈದ ಗೋಡ್ಸೆ ಆರ್‍‌ಎಸ್‌ಎಸ್ ಸಂಘಟನೆ ಹಾಗೂ ಬಿಜೆಪಿಯವರ ಆರಾಧ್ಯ ದೈವ. ನಮ್ಮನ್ನು ಹಿಂದೂ ವಿರೋಧಿಗಳು ಎಂದು ಬಿಂಬಿಸುತ್ತಾರೆ” ಎಂದರು.

Advertisements

“ಮಹಾತ್ಮ ಗಾಂಧೀಜಿ ಒಬ್ಬ ಶ್ರೇಷ್ಠ ಹಿಂದೂ. ಅಂತಹ ಹಿಂದೂ ಭಕ್ತನನ್ನೇ ಗುಂಡಿಕ್ಕಿ ಕೊಂದವರೇ ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ. ಗಾಂಧೀಜಿಯವರನ್ನು ಮಾತ್ರ ಮಹಾತ್ಮ ಮತ್ತು ರಾಷ್ಟ್ರಪಿತ ಎಂದು ಕರೆಯಲಾಗುತ್ತದೆ. ಅವರು ತಮ್ಮ ಜೀವನದುದ್ದಕ್ಕೂ ಸತ್ಯ ಮತ್ತು ಅಹಿಂಸೆಯನ್ನು ಪಾಲಿಸಿದರು. ಗಾಂಧೀಜಿಯವರು ನುಡಿದಂತೆ ನಡೆಯುತ್ತಿದ್ದರು. ದೇಶ ವಿಭಜನೆಯಾದಾಗ ಸ್ವಾತಂತ್ರ್ಯವನ್ನು ಸಂಭ್ರಮಿಸದೇ ಹಿಂದೂ ಮುಸಲ್ಮಾನರ ನಡುವೆ ಸೌಹಾರ್ದತೆಯನ್ನು ಸ್ಥಾಪಿಸಲು ಗಾಂಧೀಜಿ ಶ್ರಮಿಸಿದರು. ಭಾರತದ ಹಿಂದೂಗಳು ಪಾಕಿಸ್ತಾನಕ್ಕೆ ಹೋಗದೇ ಇಲ್ಲಿಯೇ ಉಳಿಯಬೇಕೆಂದು ಪ್ರಯತ್ನಿಸಿದರು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

ಕಾಂಗ್ರೆಸ್ ಪಕ್ಷ ಸರ್ವ ಜನಾಂಗದ ಒಳಿತನ್ನು ಬಯಸುತ್ತದೆ

“ದೇಶ ರಾಮರಾಜ್ಯವಾಗಬೇಕೆಂಬ ಚಿಂತನೆಯುಳ್ಳ ಗಾಂಧೀಜಿಯವರನ್ನು ಕೊಂದ ಗೋಡ್ಸೆಯನ್ನು ಬೆಂಬಲಿಸುವವರು ‘ತಾವು ಮಾತ್ರ ಹಿಂದೂಗಳು’ ಎಂದು ಪ್ರತಿಪಾದಿಸುತ್ತಿದ್ದಾರೆ. ಮನುಷ್ಯರ ನಡುವೆ ವೈಷಮ್ಯ ಬೆಳೆಸುವುದನ್ನು ಯಾವ ಧರ್ಮವೂ ಬೋಧಿಸುವುದಿಲ್ಲ. ಕಾಂಗ್ರೆಸ್ ಪಕ್ಷ ಸರ್ವ ಜನಾಂಗದ ಒಳಿತನ್ನು ಬಯಸುವ ಹಾಗೂ ಸರ್ವ ಧರ್ಮಗಳನ್ನು ಗೌರವಿಸುವ ಪಕ್ಷ. ಮಹಾತ್ಮ ಗಾಂಧೀಜಿಯವರು ತೋರಿದ ಹಾದಿಯಲ್ಲಿ ನಡೆಯುವ ಕಾಂಗ್ರೆಸ್ ಪಕ್ಷಕ್ಕೆ ಅವರ ತತ್ಪಾದರ್ಶಗಳೇ ದಾರಿದೀಪ. ಸಮಾಜದಲ್ಲಿನ ಅಸಮಾನತೆಯನ್ನು ತೊಡೆದು, ಮಾನವರಾಗಿ ಸಾಮರಸ್ಯದಿಂದ ಬಾಳುವುದೇ ನಮ್ಮ ಮುಂದಿರುವ ಸವಾಲು” ಎಂದರು.

ಶ್ರೀರಾಮನನ್ನು ರಾಜಕೀಯವಾಗಿ ಬಳಸುವ ಬಿಜೆಪಿ

“ಬಿಜೆಪಿಯವರು ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಾರೆ. ರಾಮಭಕ್ತರಾಗಿದ್ದ ಗಾಂಧೀಜಿಯವರ ಹತ್ಯೆಗೈದ ಗೋಡ್ಸೆಯನ್ನು ಪಾಲಿಸುವವರನ್ನು ಜನರು ನಂಬುವುದಿಲ್ಲ. ಎಲ್ಲರನ್ನೂ ಸಮನಾಗಿ ಕಾಣುವ ರಾಮನ ಆದರ್ಶವನ್ನು ನಿಜಅರ್ಥದಲ್ಲಿ ಪಾಲಿಸುವ ನಾನು ಜನವರಿ 22 ರಂದು ನೂತನ ಶ್ರೀರಾಮ ಮಂದಿರವನ್ನು ಸ್ಥಳೀಯವಾಗಿ ಉದ್ಘಾಟಿಸಿದೆ. ‘ಜೈ ಶ್ರೀರಾಮ್’ ಎಂಬುದು ಬಿಜೆಪಿಯವರ ಸ್ವತ್ತಲ್ಲ. ಮಹಾತ್ಮ ಗಾಂಧೀಜಿಯವರೇ ‘ಹೇ ರಾಮ್’ ಎಂದು ಹೇಳಿದ್ದರು” ಎಂದರು.

“ಬಿಜೆಪಿಯವರ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂಬುದು ಕೇವಲ ಬಾಯಿಮಾತಾಗಿದ್ದು, ಜಾತ್ಯತೀತತೆಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ. ಆದರೆ ಈ ಮಾತಿಗೆ ವಿರುದ್ಧವಾಗಿ ಬಿಜೆಪಿಯವರು ನಡೆದುಕೊಳ್ಳುತ್ತಿದ್ದಾರೆ. ವಾಸ್ತವವಾಗಿ ದೇಶದ ಐಕ್ಯತೆ, 143 ಕೋಟಿ ಜನ ಅನ್ಯೋನ್ಯವಾಗಿ ಸೌಹಾರ್ದಯುತವಾಗಿ ಬಾಳ ಬೇಕಾದರೆ ಯಾರನ್ನೂ ಕೂಡ ದ್ವೇಷಿಸಬಾರದು” ಎಂದು ಹೇಳಿದರು.

“ದೇಶಭಕ್ತಿಯ ಬಗ್ಗೆ ಬಿಜೆಪಿ ನಮಗೆ ಹೇಳಿಕೊಡುವ ಅಗತ್ಯವಿಲ್ಲ. ಬಿಜೆಪಿಯವರಿಗೆ ದೇಶದ ಇತಿಹಾಸವೇ ತಿಳಿದಿಲ್ಲ. ಅದಕ್ಕೆ ಅಂಬೇಡ್ಕರ್ ಅವರು ಯಾರಿಗೆ ಇತಿಹಾಸ ತಿಳಿದಿಲ್ಲವೋ ಅವರು ಇತಿಹಾಸ ನಿರ್ಮಿಸಲು ಸಾಧ್ಯವಿಲ್ಲ ಎಂದಿದ್ದು. ಗಾಂಧಿಯವರನ್ನು ಸ್ಮರಿಸಿ, ಅವರು ನಡೆದ ದಾರಿಯಲ್ಲಿ ನಡೆಯುವ ಪ್ರಯತ್ನ ಮಾಡೋಣ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X