ಮಂಡ್ಯ ಜಿಲ್ಲೆಯ ಕರೆಗೋಡು ಗ್ರಾಮದಲ್ಲಿ ಕೇಸರಿ ಧ್ವಜ ತೆರವಿಗೆ ಅಡ್ಡಿ ಮಾಡಿ, ದಾಂಧಲೆ ನಡೆಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಹಾಗೂ ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿ ವಿರುದ್ಧ ಮಂಡ್ಯದಲ್ಲಿ ಎಫ್‌ಐಆರ್‌ಗಳು ದಾಖಲಾಗಿವೆ.
ಶಾಸಕ ನರೇಂದ್ರ ಸ್ವಾಮಿ ನೀಡಿದ ದೂರಿನ ಆಧಾರದ ಮೇಲೆ ಸಿ.ಟಿ ವಿರುದ್ಧ ಹಾಗೂ ಡಿವೈಎಸ್‌ಪಿ ಶಿವಮೂರ್ತಿ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಸೇರಿದಂತೆ ಹಿಂದುತ್ವವಾದಿಗಳ ವಿರುದ್ಧ ಎಫ್‌ಐಆರ್‌ಗಳು ದಾಖಲಾಗಿವೆ.
ಡಿಐಎಸ್‌ಪಿ ಶಿವಮೂರ್ತಿ ನೀಡಿದ ದೂರಿನ ಆಧಾರದ ಮೇಲೆ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಎರಡು ಎಫ್‌ಐಆರ್ ದಾಖಲಾಗಿವೆ. ದೂರಿನಲ್ಲಿ, ಕೆರೆಗೋಡಿನಿಂದ ಮಂಡ್ಯಕ್ಕೆ ಪಾದಯಾತ್ರೆ ನಡೆಸಿದ್ದ ಬಿಜೆಪಿ, ಜೆಡಿಎಸ್ ಹಾಗೂ ಹಿಂದುತ್ವವಾದಿ ಕಾರ್ಯಕರ್ತರು ಮಂಡ್ಯದ ಮಹವೀರ ಸರ್ಕಲ್‌ನಲ್ಲಿ ಬ್ಯಾನರ್ ಹಾಗೂ ಸಾರ್ವಜನಿಕರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಗುಂಪು ಕಟ್ಟಿಕೊಂಡು ಪೊಲೀಸರ ಕೆಲಸಕ್ಕೆ ಅಡ್ಡಿ ಮಾಡಿದ್ದಾರೆ ಉಲ್ಲೇಖಿಸಿದ್ದಾರೆ.
ಅವರ ದೂರಿನ ಆಧಾರದ ಮೇಲೆ ಪ್ರಕಾಶ್, ಆರಾಧ್ಯ, ಬಸವರಾಜು, ಕಾಂತ, ಅವಿನಾಶ್, ಅಭಿ ಪಾಟೀಲ್, ಶಿವಕುಮಾರ್, ಸೋಮಶೇಖರ್ ಸೇರಿದಂತೆ 42-50 ಜನರ ವಿರುದ್ಧ ಐಪಿಸಿ ಸೆಕ್ಷನ್ 143, 147, 148, 504, 353, 149ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಅಲ್ಲದೆ, ಜಿಲ್ಲಾ ಕುರುಬರ ಸಂಘದ ಕಾರ್ಯದರ್ಶಿ ಶಶಿಧರ್ ಎಂಬವರು ಮತ್ತೊಂದು ದೂರು ನೀಡಿದ್ದು, “ಹಿಂದುತ್ವವಾದಿಗಳ ಪಾದಯಾತ್ರೆ ವೇಳೆ, ಕುರುಬರ ಸಂಘದ ವಿದ್ಯಾರ್ಥಿ ನಿಲಯದ ಮೇಲೆ ದಾಳಿ ನಡೆದಿದೆ. ಪರಿಣಾಮ, ಹಾಸ್ಟೆಲ್‌ನ ಕಿಟಕಿ ಗಾಜುಗಳು ಒಡೆದಿವೆ. ಸಂಘದ ಆವರಣಕ್ಕೆ ನುಗ್ಗಿ ದಾಂಧಲೆ ನಡೆಸಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ. ಅವರ ದೂರಿನ ಆಧಾರದ ಮೇಲೂ ಎಫ್‌ಐಆರ್ ದಾಖಲಾಗಿದೆ.
ಸಿ.ಟಿ ರವಿ ವಿರುದ್ಧ ದೂರು ನೀಡಿದ ಶಾಸಕ
ರಾಷ್ಟ್ರಧ್ವಜವನ್ನು ತಾಲಿಬಾನಿ ಧ್ವಜಕ್ಕೆ ಹೋಲಿಸಿ, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಬಿಜೆಪಿ ನಾಯಕ ಸಿ.ಟಿ ರವಿ ವಿರುದ್ಧ ಐಪಿಸಿ ಸೆಕ್ಷನ್ 51ಎ(ಎ) ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಮಳವಳ್ಳಿ ಶಾಸಕ ಪಿ.ಎಂ ನರೇಂದ್ರಸ್ವಾಮಿ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅವರಿಗೆ ದೂರು ಸಲ್ಲಿಸಿದ್ದಾರೆ.
ಬಳಿಕ ಮಾಡಿದ ಶಾಸಕ, “ರಾಷ್ಟ್ರ ಮತ್ತು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವುದರಿಂದ ಭಾರತದ ಪ್ರಜೆಯಾಗಿ ದೂರು ಸಲ್ಲಿಸಿದ್ದೇನೆ. ಪೊಲೀಸರ ಸೂಕ್ತ ಕ್ರಮ ವಹಿಸಲು ಮುಂದಾಗಬೇಕು. ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜ ಎಂದಿರುವ ಬಿಜೆಪಿಯ ಸಿ.ಟಿ ರವಿಗೆ ಬುದ್ಧಿಭ್ರಮಣೆಯಾಗಿದೆ. ಸಂವಿಧಾನಬದ್ಧವಾಗಿ ಎಲ್ಲರನ್ನೂ ಸಮಾನವಾಗಿ ಕಾಣುತ್ತೇನೆಂದು ಪ್ರಮಾಣವಚನ ಸ್ವೀಕರಿಸಿ ಸಚಿವರಾಗಿದ್ದ ಅವರು ಮಾನಸಿಕವಾಗಿ ವಿಚಲಿತರಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರಧ್ವಜಕ್ಕೆ ಸಿಟಿ ರವಿ ತಾಲಿ ಬಾನ್ ಧ್ವಜ ಎಂದು ಕರೆದಿರುತ್ತಾರೆ ಅವರು ಸಂಸ್ಕೃತಿ ಹಾಗಿದೆ ಅವರದು ನಾಲಿಗೆ ಇದಿಯೋ ಅಥವಾ ಬೇರೆನಿದೆ ಅವರವರ ಸಂಸ್ಕೃತಿ ನಾಲಿಗೆಯ ಮೇಲೆ ತಿಳಿದು ಬರುತ್ತದೆ