ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆಗೆ ಸಿದ್ದ; ಪ್ರಮೋದ್ ಮಧ್ವರಾಜ್

Date:

Advertisements

ಪಕ್ಷ ಬಯಸಿದರೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ನಾನು ಚುನಾವಣೆಗೆ ನಿಲ್ಲಲು ಸಿದ್ಧನಿದ್ದೇನೆ. ಇಲ್ಲದಿದ್ದರೆ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ನಾನು ಅವರನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಈಗಾಗಲೇ 6,000 ಮಂದಿ ಬಿಜೆಪಿಯ ಕಾರ್ಯಕರ್ತರು ಹಾಗೂ ಮುಖಂಡರನ್ನು ಭೇಟಿ ಮಾಡಿದ್ದೇನೆ. ಪಕ್ಷಕ್ಕೆ ನಾನು ಅರ್ಹ ಎಂದು ಕಂಡರೆ ನನಗೆ ಟಿಕೆಟ್ ಕೊಡುತ್ತದೆ. ಬೇರೆ ಅರ್ಹರು ಇದ್ದರೆ ಅವರಿಗೆ ಟಿಕೆಟ್ ನೀಡುತ್ತದೆ. ಕಾರ್ಯಕರ್ತರು ಮತ್ತು ಜನರ ಅಭಿಪ್ರಾಯ ನನ್ನ ಕಡೆಗೆ ಇದೆ ಎಂಬ ಮಾಹಿತಿ ಇದೆ. ಟಿಕೆಟ್‌ಗೆ ಎಲ್ಲರಿಗೂ ಪ್ರಯತ್ನ ಮಾಡುವ ಹಕ್ಕು ಇದೆ. ನಾನು ಆಕಾಂಕ್ಷಿ ಎಂದು ನಾಯಕರ ಬಳಿ ಹೇಳಿದ್ದೇನೆ. ಚುನಾವಣೆಯಲ್ಲಿ ಎದುರಾಳಿಯನ್ನು ಲಘುವಾಗಿ ಪರಿಗಣಿಸುವುದು ಸರಿಯಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮಹಾತ್ಮಾ ಗಾಂಧಿಯವರ 76ನೇ ಪುಣ್ಯತಿಥಿ, ಹುತಾತ್ಮ ದಿನ ಆಚರಣೆ

Advertisements

“ಮೀನುಗಾರರ ಸಮಸ್ಯೆಯನ್ನು ಸರ್ಕಾರಗಳ ಮುಂದೆ ಸಮರ್ಥವಾಗಿ ಮಂಡಿಸುವ ಅನುಭವ ಜನಪ್ರತಿನಿಧಿ ಆದವರಿಗೆ ಬೇಕಾಗುತ್ತದೆ. ಮೀನುಗಾರರು ನನ್ನ ಮೇಲೆ ವಿಶ್ವಾಸ ಇಟ್ಟು ನನಗೆ ಟಿಕೆಟ್ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಬಿಜೆಪಿ ಹಿಂದುಳಿದ ವರ್ಗಕ್ಕೆ ನ್ಯಾಯ ಒದಗಿಸಿ‌ ಕೊಡುತ್ತದೆಂಬ ವಿಶ್ವಾಸ ಇದೆ. ಗುಜರಾತ್‌ನಿಂದ ಪಶ್ಚಿಮ ಬಂಗಾಳದವರೆಗೆ ಒಬ್ಬನೇ ಒಬ್ಬ ಮೀನುಗಾರ ಸಂಸದ ಇಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

Download Eedina App Android / iOS

X