ತುಮಕೂರು | ಸರ್ಕಾರಕ್ಕೆ ಕಾಂತರಾಜ ವರದಿ ಸ್ವೀಕರಿಸುವಂತೆ ಹಂದಿಜೋಗಿ ಸಂಘದ ಒತ್ತಾಯ

Date:

Advertisements

ಕಾಂತರಾಜ ವರದಿಯನ್ನು ಜಾರಿಗೆ ತಂದು ಕೆಳವರ್ಗದ ಶೋಷಿತ ಜಾತಿಗಳಿಗೆ ಸರ್ಕಾರ ಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು ಎಂದು ಅಖಿಲ ಕರ್ನಾಟಕ ಹಂದಿಜೋಗಿ ಸಂಘದ ಪದಾಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಗರದ ಐಎಂಎ ಹಾಲ್‌ನಲ್ಲಿ ಅಖಿಲ ಕರ್ನಾಟಕ ಹಂದಿಜೋಗಿ ಸಂಘದ ಜಿಲ್ಲಾ ಶಾಖೆಯ ಪದಾಧಿಕಾರಿಗಳ ಆಯ್ಕೆ ಸಮಾರಂಭದಲ್ಲಿ ತುಮಕೂರು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ಎಚ್.ವಿ. ರಂಗಸ್ವಾಮಿ ಮಾತನಾಡಿ, ಕಾಂತರಾಜ ವರದಿ ಜಾರಿಗೆ ಬಂದಿದ್ದರೆ ಹಿಂದುಳಿದ ಮತ್ತು ಪರಿಶಿಷ್ಟ ಜಾತಿಯಲ್ಲಿ ಸರ್ಕಾರದ ಸೌಲಭ್ಯಗಳನ್ನೂ ಪಡೆಯಲು ಸಾಧ್ಯವಾಗದ ಮೈಕ್ರೋಸ್ಕೋಪಿಕ್ ಜಾತಿಗಳಿಗೆ ತುಂಬಾ ಅನುಕೂಲವಾಗುತ್ತಿತ್ತು.

ಕೆಲ ಮೇಲ್ಜಾತಿಗಳು ಕಾಂತರಾಜ ವರದಿಯನ್ನು ವಿರೋಧಿಸುತ್ತಿದ್ದು, ಕಾಂತರಾಜು ವರದಿಯನ್ನು ಯಾರೋ ಮರದ ಕೆಳಗೆ ಕುಳಿತು ವರದಿ ತಯಾರಿ ಮಾಡಿದ್ದಾರೆ ಎಂದು ಮೇಲ್ವರ್ಗದವರು ಮಾತನಾಡುತ್ತಿರುವುದು ಶೋಷಿತ ಜಾತಿಗಳು ಅವರ ಪಲ್ಲಕ್ಕಿ ಹೊರಲಷ್ಟೇ ಸೀಮಿತವಾಗಿರಬೇಕು ಎಂಬಂತಿದೆ, ಈ ಜಾತಿಗಳು ಮುಂದುವರಿಯುವುದು ಮೇಲ್ವರ್ಗಗಳಿಗೆ ಬೇಕಿಲ್ಲ, ಹೊಟ್ಟೆತುಂಬಿದವರಿಗೆ ಹಸಿದವನ ಹಸಿವು ತಿಳಿಯುವುದಿಲ್ಲ. ಮೇಲ್ವರ್ಗದವರು ಬಲಾಢ್ಯರಾಗಿರುವುದರಿಂದ ಕಾಂತರಾಜು ವರದಿಯನ್ನು ವಿರೋಧಿಸುತ್ತಿದ್ದಾರೆ ಎಂದು ಹೇಳಿದರು.

Advertisements

ಕಾಂತರಾಜ ವರದಿಯನ್ನು ಜಾರಿಗೆ ತರುವುದಷ್ಟೇ ಅಲ್ಲ, ಆ ವರದಿಯನ್ನು ಒಪ್ಪಿಕೊಳ್ಳಬೇಕು, ವರದಿ ಇನ್ನೂ ಮಂಡನೆಯೇ ಆಗಿಲ್ಲ ಕಡತದಲ್ಲೇ ಇದೆ, ಆ ವರದಿಯಲ್ಲಿ ಯಾವಯಾವ ಜಾತಿ ಎಷ್ಟಿದೆ, ಏನು ಕುಲಕಸುಬು ಮಾಡುತ್ತಿದ್ದಾರೆ, ವಾಹನ, ಜಮೀನು, ಆರ್ಥಿಕ, ಸಾಮಾಜಿಕ ಮಟ್ಟ ಸೇರಿದಂತೆ 54 ಅಂಶಗಳನ್ನು ಅಧ್ಯಯನ ಮಾಡಿದ್ದಾರೆ ಆ ಹಿನ್ನಲೆಯಲ್ಲಿ ಕಾಂತರಾಜು ವರದಿ ಜಾರಿಗೆ ಸರ್ಕಾರಕ್ಕೆ ಹಂದಿಜೋಗಿ ಸಂಘವು ಒತ್ತಾಯಿಸಬೇಕಿದೆ ಎಂದರು.

ಪ್ರಜಾಪ್ರಭುತ್ವದಲ್ಲಿ ಸಂಖ್ಯೆಯೇ ಎಲ್ಲಾ ಸೌಲಭ್ಯ ಪಡೆಯಲು ಸಹಕಾರಿಯಾಗಿರುವುದರಿಂದ ಶೋಷಿತ ಸಣ್ಣ ಜಾತಿಗಳು ಹೊಡೆದು ಹೋಗಿರುವ ಜಾತಿಗಳಾಗಿದ್ದು, ಈ ಎಲ್ಲಾ ಜಾತಿಗಳು ಒಗ್ಗೂಡಿ ಸಂಖ್ಯೆಯನ್ನು ಹೆಚ್ಚಿಸಿಕೊಂಡು ಸರ್ಕಾರಕ್ಕೆ ನಮ್ಮ ಪಾಲು ನೀಡುವಂತೆ ಕೇಳಬೇಕು, ಒಂದಾಗದಿದ್ದರೆ ನೀರಿನಲ್ಲಿ ಮುಳುಗಿದಂತೆ, ಸರ್ಕಾರಕ್ಕೆ ನಾವು ಲಕ್ಷಇದ್ದೇವೆ, ಎರಡು ಲಕ್ಷಇದ್ದೇವೆಎಂದು ಸಣ್ಣ ಜಾತಿಗಳು ಎಷ್ಟೇ ಹೇಳಿದರೂ ಅದುಗಣನೆಗೆ ಬರುವುದಿಲ್ಲ, ಆದ್ದರಿಂದ ಸಣ್ಣ-ಪುಟ್ಟ ಜಾತಿಗಳು ಒಗ್ಗಟ್ಟಾಗಬೇಕಿದೆ ಎಂದು ಹೇಳಿದರು.

ಒಗ್ಗಟ್ಟಾಗಿ ನಮ್ಮ ಹಕ್ಕುಗಳಿಗೆ, ಸೌಲಭ್ಯಗಳಿಗೆ ಹೋರಾಟವನ್ನು ಮಾಡಬೇಕಿದೆ, ನಾವು ಒಟ್ಟಾಗಲು ಸಾಧ್ಯವಾಗುತ್ತಿಲ್ಲ, ಏಕೆಂದರೆ ಕೆಳಜಾತಿಗಳಲ್ಲಿ ಏಡಿಕಾಯಿಯಂತೆ ಹಿಂದಕ್ಕೆಳೆಯುವ ಪ್ರವೃತ್ತಿಯಿಂದ ಮತ್ತೆ ಮತ್ತೆ ಹಿಂದಕ್ಕೆ ಹೋಗುತ್ತಿದ್ದು, ಮತ್ತಷ್ಟು ಶೋಷಣೆಗೆ ಒಳಗಾಗುತ್ತಿದ್ದಾರೆ ಎಂದರು.

ಮೇಲ್ಜಾತಿಯವರು ಮಠ-ಮಾನ್ಯಗಳನ್ನು ಕಟ್ಟಿಕೊಂಡು ಸಾಮಾಜಿಕವಾಗಿ, ಆರ್ಥಿಕವಾಗಿ ಮುಂದುವರೆದಿದ್ದಾರೆ, ಕೆಳ ಜಾತಿಯ ಶೋಷಿತ ಜಾತಿಗಳಿಗೆ ಇಂತಹ ಅವಕಾಶ ಇಲ್ಲದಿರುವುದರಿಂದ ಇನ್ನೂ ಮೇಲ್ವರ್ಗದವರ ಪಲ್ಲಕ್ಕಿ ಹೊರುವ ಸ್ಥಿತಿ ಇದೆ, ಆದ್ದರಿಂದ ಕಂದಾಚಾರ, ಮೂಡನಂಬಿಕೆಗಳನ್ನು ಬದಿಗೊತ್ತಿ ಹಂದಿಜೋಗಿ, ಹೆಳವ, ಕೊರಮ, ಕೊರಚ, ಬುಡಬುಡಿಕೆ, ಶಿಳ್ಳೆಕ್ಯಾತ, ಇನ್ನೂ ಮುಂತಾದ ಮೈಕ್ರೋಸ್ಕೋಪಿಕ್ ಜಾತಿಗಳು ಒಗ್ಗಾಟ್ಟಾಗಿ ತಮ್ಮ ಸೌಲಭ್ಯಗಳಿಗಾಗಿ ಹೋರಾಟ ನಡೆಸುವ ಅನಿವಾರ್ಯ ಈಗ ಬಂದಿದೆ ಎಂದು ಹೇಳಿದರು.

ಹಂದಿಜೋಗಿ ಜನಾಂಗದ ಅವಕಾಶಗಳನ್ನು ಇತರೆ ಜಾತಿಗಳು ಪಡೆದುಕೊಳ್ಳುತ್ತಿರುವ ಬಗ್ಗೆ ಸರ್ಕಾರಕ್ಕೆ ಮನದಟ್ಟು ಮಾಡಿತಪ್ಪಿಸಬೇಕಾಗಿದೆ. ಹಂದಿಜೋಗಿ ಜನಾಂಗದ ಜಾತಿ ಪ್ರಮಾಣಪತ್ರ ಮತ್ತು ಸವಲತ್ತುಗಳನ್ನು ಹೆಳವ, ಹಂಡಿಜೋಗಿ ಎಂಬುವವರು ಪಡೆದು ನಿಜವಾದ ಹಂದಿಜೋಗಿ ಜನಾಂಗಕ್ಕೆ ಸೌಲಭ್ಯಗಳು ಸಿಗದಂತಾಗಿವೆ, ಮೇಲ್ಜಾತಿಯವರು ಪಡೆದಿದ್ದರೆ ಅದನ್ನು ಪ್ರಬಲವಾಗಿ ವಿರೋಧಿಸಬಹುದಿತ್ತು, ಆದರೆ ಹಂದಿಜೋಗಿ ಜಾತಿಯಂತೆಯೇ ಶೋಷಣೆಗೆ ಒಳಪಟ್ಟಿರುವ ಈ ಜಾತಿಗಳು ಅನುಕೂಲ ಪಡೆಯುತ್ತಿರುವುದನ್ನು ತಡೆಯಲು ಕಾಂತರಾಜು ವರದಿ ಪರಿಣಾಮಕಾರಿಯಾಗಲಿದೆ ಎಂದು ಹೇಳಿದರು.

ಸಭೆಯಲ್ಲಿಅಲೆಮಾರಿ-ಅರೆಅಲೆಮಾರಿ ಸಂಘದರಾಜ್ಯಾಧ್ಯಕ್ಷ ಎಂ.ವಿ.ವೆಂಕಟರಮಣಯ್ಯ, ಅಗರೆಗೋವಿಂದರಾಜು ಮಾತನಾಡಿದರು. ಇದೇ ಸಂದರ್ಭದಲ್ಲಿತುಮಕೂರುಜಿಲ್ಲೆಗೆ ಹಂದಿಜೋಗಿ ಸಂಘಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಅಖಿಲ ಕರ್ನಾಟಕ ಹಂದಿಜೋಗಿ ಸಂಘದ ರಾಜ್ಯಾಧ್ಯಕ್ಷ  ರಾಜೇಂದ್ರಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಡ್ಯರಾಜು, ಉಪಾಧ್ಯಕ್ಷರುಗಳಾದ ಪಿಳ್ಳಣ್ಣ, ಸಿ.ಗೋವಿಂದರಾಜು, ತಿಪಟೂರುರಂಗಸ್ವಾಮಿ, ಖಜಾಂಚಿ ಮಡಿವಾಳ ವೆಂಕಟರಾಮು, ಹುಳಿಯಾರು ಮುಕುಂದ, ಗೋವಿಂದ ಹುಳಿಯಾರು, ಅಲೆಮಾರಿರಾಜಪ್ಪ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X