ಬಿಬಿಎಂಪಿ | ನಾಮಫಲಕಗಳಲ್ಲಿ ಕನ್ನಡ ಅಳವಡಿಸದ 49,241 ಮಳಿಗೆಗಳಿಗೆ ನೋಟಿಸ್

Date:

Advertisements

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ವಾಣಿಜ್ಯ ಮಳಿಗೆಗಳಲ್ಲಿ ತ್ವರಿತಗತಿಯಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲದೇ, ಕನ್ನಡ ಬಳಸದೇ ಇರುವ ನಗರದ ಒಟ್ಟು 49,241 ಮಳಿಗೆಗಳಿಗೆ ನೋಟಿಸ್ ನೀಡಲಾಗಿದೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಅಳವಡಿಕೆ ಹಾಗೂ ಸಹಾಯ 2.0ರಲ್ಲಿ ಬಂದಂತಹ ದೂರುಗಳಿಗೆ ಸಂಬಂಧಿಸಿದಂತೆ ಮಾತನಾಡಿದ ಅವರು, “ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 49,241 ಮಳಿಗೆಗಳಿಗೆ ನೋಟಿಸ್ ನೀಡಲಾಗಿದ್ದು, 16,813 ಮಳಿಗೆಗಳು ಶೇ. 60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಿವೆ. 32,428 ಮಳಿಗೆಗಳಲ್ಲಿ ನಾಮಫಲಕಗಳನ್ನು ಅಳವಡಿಸಬೇಕಿದೆ. ಫೆಬ್ರುವರಿ ಅಂತ್ಯದೊಳಗಾಗಿ ಎಲ್ಲ ಮಳಿಗೆಗಳಲ್ಲಿ ಕನ್ನಡ ನಾಮಫಲಕವನ್ನು ಅಳವಡಿಸಿಕೊಂಡಿರಬೇಕು. ಅದಕ್ಕಾಗಿ ಆಯಾ ವಲಯಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

“ನಗರದ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬರುವ ವಾಣಿಜ್ಯ ಮಳಿಗೆಗಳಲ್ಲಿ ಆದ್ಯತೆ ಮೇರೆಗೆ ಕನ್ನಡ ನಾಮಫಲಕಗಳನ್ನು ಅಳವಡಿಸಬೇಕು. ಮಳಿಗೆಗಳಿಗೆ ತಿಳಿವಳಿಕೆ ಪತ್ರ ನೀಡಿದ ಬಳಿಕ 7 ದಿನ ಕಾಲಾವಕಾಶ ನೀಡಿದ ಬಳಿಕವೂ ಕನ್ನಡ ನಾಮಫಲಕ‌ ಅಳವಡಿಸದಿದ್ದಲ್ಲಿ ಅಂತಹ ಮಳಿಗೆಯ ಮೇಲೆ ಶಿಸ್ತು ಕ್ರಮ ಜರುಗಿಸಿ ಕೂಡಲೇ ನಾಮಫಲಕ ಅಳವಡಿಸುವಂತೆ ಮಾಡಬೇಕು” ಎಂದು ಸೂಚಿಸಿದರು.

Advertisements

ಸಹಾಯ 2.0ರಲ್ಲಿ ಬರುವ ದೂರುಗಳನ್ನು ತ್ವರಿತವಾಗಿ ಇತ್ಯರ್ಥ ಮಾಡಿ

“ಪಾಲಿಕೆಯ ಸಹಾಯ 2.0ರಲ್ಲಿ ಬರುವ ದೂರುಗಳನ್ನು ನಿಗದಿತ ಸಮಯದಲ್ಲಿ ಇತ್ಯರ್ಥಪಡಿಸಬೇಕು. ದೂರುಗಳು ಬಂದ ತಕ್ಷಣ ಬಗೆಹರಿಸಬಹುದಾದ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು” ಎಂದು ವಲಯ ಆಯುಕ್ತರಿಗೆ ಸೂಚನೆ ನೀಡಿದರು.

“ಆಯಾ ವಲಯ ವ್ಯಾಪ್ತಿಯಲ್ಲಿ ಪ್ರಮುಖವಾಗಿ ಕಸದ ಸಮಸ್ಯೆ, ಬೀದಿ ದೀಪಗಳ ಅಳವಡಿಕೆ ಹಾಗೂ ರಸ್ತೆ ಗುಂಡಿ ಸಮಸ್ಯೆಗಳ ಕುರಿತು ದೂರುಗಳು ಬರುತ್ತವೆ. ಬರುವಂತಹ ದೂರುಗಳನ್ನು ಆದ್ಯತೆ ಮೇರೆಗೆ ತ್ವರಿತಗತಿಯಲ್ಲಿ ಇತ್ಯರ್ಥಪಡಿಸಬೇಕು” ಎಂದು ಹೇಳಿದರು.

ಸಭೆಯಲ್ಲಿ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್, ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು, ಉಪ ಆಯುಕ್ತ ಮಂಜುನಾಥ ಸ್ವಾಮಿ, ಕಂದಾಯ ವಿಭಾಗದ ಜಂಟಿ ಆಯುಕ್ತೆ ಲಕ್ಷ್ಮಿದೇವಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X