ರಾಯಚೂರು | ವಿದ್ಯುತ್ ದರ ಹೆಚ್ಚಳ ಹಿಂಪಡೆಯುವಂತೆ ಆಗ್ರಹ

Date:

Advertisements

ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಿಂದ ವಿದ್ಯುತ್ ದರಗಳನ್ನು ಹೆಚ್ಚಿಸಿದ್ದು, ಇದರಿಂದ ಕಾರ್ಖಾನೆಗಳಿಗೆ ಮತ್ತು ಜನರಿಗೆ ತೊಂದರೆಯಾಗುತ್ತಿದೆ. ಇದನ್ನು ಕೂಡಲೇ ಹಿಂಪಡೆಯಬೇಕು ಎಂದು ರಾಯಚೂರು ಕಾಟನ್ ಮಿಲ್ಲರ್ಸ್ ಅಸೋಸಿಯೇಷನ್ ಅಧ್ಯಕ್ಷ ವಿ ಲಕ್ಷ್ಮಿರೆಡ್ಡಿ ಹೇಳಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಿಂದ ವಿದ್ಯುತ್ ದರಗಳನ್ನು ಹೆಚ್ಚಿಸಿದರ ಬಗ್ಗೆ ಮೂರು ತಿಂಗಳ ಹಿಂದೆಯೇ ಕೆಇಆರ್‌ಸಿಗೆ ಹೆಚ್ಚಿಸಿರುವ ವಿದ್ಯುತ್ ದರಗಳ ಮತ್ತು ಫ್ಯೂಲ್ ಚಾರ್ಜ್‌ಗಳಿಗೆ ಸಂಬಂಧಿಸಿದಂತೆ ಸಂಘದ ವತಿಯಿಂದ ಆಕ್ಷೇಪಣೆ ಮಾಡಲಾಗಿತ್ತು. ಆದರೆ ಜೆಸ್ಕಾಂ ಇಲಾಖೆಯವರು ಪ್ರತಿ ಕಿಲೋ ವ್ಯಾಟ್ ವಿದ್ಯುತ್‌ಗೆ ₹100 ಹೆಚ್ಚಿಸಿ ಪ್ರತಿ ಯೂನಿಟ್‌ಗೆ 50 ಪೈಸೆಯಷ್ಟು ಕಡಿಮೆ ಮಾಡಿದೆ. ಇದರಿಂದ ಸಣ್ಣ ಸಣ್ಣ ಕೈಗಾರಿಕೋದ್ಯಮಿದಾರರಿಗೆ 10 ಹೆಚ್‌ಪಿಯಿಂದ 100 ಹೆಚ್‌ಪಿವರೆಗೆ ವಿದ್ಯುತ್ ಬಳಕೆ ಮಾಡುವಂತಹ ಕಾರ್ಖಾನೆಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ” ಎಂದು ತಿಳಿಸಿದರು.

“ತಾರತಮ್ಯ ಮಾಡುತ್ತಿರುವುದು ಸರಿಯಲ್ಲ. ಇದರಿಂದ ಸಣ್ಣ ಸಣ್ಣ ಕೈಗಾರಿಕೋದ್ಯಮಿದಾರರಿಗೆ ಸಾಕಷ್ಟು ಹೊರೆಯಾಗಿದೆ. 5 ಕಿಲೋ ವ್ಯಾಟ್‌ನಿಂದ 500 ಕಿಲೋ ವ್ಯಾಟ್‌ವರೆಗೆ ಹೆಚ್ಚಿಸಿದೆ,
ಕನಿಷ್ಠ 1 ಲಕ್ಷ ಯೂನಿಟ್ ಮೇಲ್ಪಟ್ಟು ಬಳಕೆ ಮಾಡಿದರೆ ಮಾತ್ರ ಅವರಿಗೆ ಇದರ ಉಪಯೋಗವಾಗುತ್ತದೆ. ಆದರೆ ನಮ್ಮಲ್ಲಿ 500 ಯೂನಿಟ್‌ಗಳಿಂದ 30,000 ಯೂನಿಟ್‌ಗಳವರೆಗೆ ವಿದ್ಯುತ್ ಬಳಕೆ ಮಾಡುವಂತಹ ಕೈಗಾರಿಕಾ ಘಟಕಗಳಿಗೆ ಬಹಳಷ್ಟು ಹೊರೆಯಾಗುತ್ತದೆ” ಎಂದರು.

Advertisements

ಕಾಟನ್ ಜಿನ್ನಿಂಗ್ ಕಾರ್ಖಾನೆಗಳು ಸೀಜನಲ್ ಇಂಡಸ್ಟ್ರಿಗಳಾಗಿರುವುದರಿಂದ ಹಾಗೂ ವಿದ್ಯುತ್ ಬಳಕೆ ಕಡಿಮೆ ಇರುವುದರಿಂದ ಪ್ರತಿ ಕಿಲೋ ವ್ಯಾಟ್‌ಗೆ ಹೋಲಿಸಿದರೆ ವಿದ್ಯುತ್ ದರದ ಹಣವು ಸಾಕಷ್ಟು ಹೆಚ್ಚಾಗುತ್ತದೆ. ಗೃಹ ಬಳಕೆ, ವಾಣಿಜ್ಯ ಬಳಕೆ ಹಾಗೂ ತಾತ್ಕಾಲಿಕ ವಿದ್ಯುತ್ ಬಳಕೆ ಎಲ್ಲವುಗಳ ಮೇಲೆಯೂ ಪ್ರತಿ ಯೂನಿಟ್‌ಗೆ ಹೆಚ್ಚಿಗೆ ಮಾಡಲಾಗಿದೆ. ವಿದ್ಯುತ್ ದರಗಳನ್ನು ಹೆಚ್ಚಿಸಲಾಗಿದೆ. ಇದರಿಂದ ಸಣ್ಣ ಸಣ್ಣ ಉದ್ಯಮಿದಾರರು ತಮ್ಮ ತಮ್ಮ ಕೈಗಾರಿಕೆಗಳನ್ನು ಮುಚ್ಚುವ ಪರಿಸ್ಥಿತಿ ಒದಗಿ ಬರುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಭಾರತದಲ್ಲಿ ಬೌದ್ಧ ಧರ್ಮ ಮರುಹುಟ್ಟು ಪಡೆಯಬೇಕಿದೆ: ಬಿ ಗೋಪಾಲ್

“ಕೆಲಸ ಮಾಡುವಂತಹ ಉದ್ಯೋಗಿಗಳು ಕೆಲಸವಿಲ್ಲದೇ ಅವರ ಕುಟುಂಬಗಳು ಬೀದಿ ಪಾಲಾಗಿ ತುಂಬಾ ಕಷ್ಟ ಅನುಭವಿಸಬೇಕಾಗುತ್ತದೆ. ನಿರುದ್ಯೋಗ ಸಮಸ್ಯೆಯು ಹೆಚ್ಚಳವಾಗಲಿದೆ. ಕೂಡಲೇ ಜೆಸ್ಕಾಂ ಇಲಾಖೆಯು ಹೆಚ್ಚಿಸಿರುವ ವಿದ್ಯುತ್ ದರಗಳನ್ನು ತಕ್ಷಣವೇ ಹಿಂದಕ್ಕೆ ಪಡೆದು ಕಡಿಮೆ ಮಾಡಿ ಸಣ್ಣ ಸಣ್ಣ ಕೈಗಾರಿಕೋದ್ಯಮಿದಾರರ ಹಿತವನ್ನು ಕಾಪಾಡಬೇಕು” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಆನಂದರೆಡ್ಡಿ, ಅಮಿನ್ ಪಾಷಾ, ಬಾಷಾ ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X