ವಿಜಯಪುರ | ಬರ ಪರಿಹಾರ ಬಿಡುಗಡೆಗೆ ಕೆಆರ್‌ಎಸ್‌ ಆಗ್ರಹ

Date:

Advertisements

ರಾಜ್ಯದ ರೈತರಿಗೆ ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿ ಕಚೇರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಹಕ್ಕೊತ್ತಾಯ ಸಲ್ಲಿಸಿ ಮಾತನಾಡಿದ ಪಕ್ಷ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, “ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಬರಗಾಲದಿಂದ ತತ್ತರಿಸಿ ಹೋಗಿವೆ. ರೈತರಿಗೆ ಉಳುಮೆ ಮಾಡಲು ಭೂಮಿ ಇದ್ದರೂ ದುಡಿಮೆ ಇಲ್ಲದೆ ಅನ್ನಕ್ಕಾಗಿ ಹೊರ ರಾಜ್ಯಕ್ಕೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬರಗಾಲ ಘೋಷಣೆ ಮಾಡಿ ರಾಜ್ಯ ಸರ್ಕಾರ ನಾಲ್ಕು ತಿಂಗಳು ಕಳೆಯುತ್ತಾ ಬಂದರು ಇದೂವರೆಗೂ ಪರಿಹಾರ ಬಿಡುಗಡೆಯಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಿತ್ತನೆ ಬೀಜ, ಗೊಬ್ಬರ, ಉಳುಮೆಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಅನ್ನದಾತರು ಪರಿತಪಿಸುತ್ತಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಅನುದಾನವನ್ನು ಬಿಡುಗಡೆ ಮಾಡಿ ರೈತರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಬೇಕು. ಬರಗಾಲಕ್ಕಾಗಿ ಈಗಾಗಲೇ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಅನುದಾನ ತುಂಬಾ ಕಡಿಮೆಯಾಗಿದ್ದು, ರೈತರು ಮಾಡಿರುವ ಸಾಲದ ಬಡ್ಡಿ ಕಟ್ಟಲು ಸಾಕಾಗದು. ಹೀಗಾಗಿ, ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು” ಎಂದು ಒತ್ತಾಯಿಸಿದ್ದಾರೆ.

Advertisements

ಈ ವೇಳೆ, ರಾಕೇಶ ಇಂಗಳಗಿ, ವಿಕ್ರಮ ವಾಗಮೋರೆ, ಹಮೀದ್ ಇನಾಮದಾರ, ಪ್ರವೀಣ ಕನಸೆ, ಕಾಂತುಗೌಡ ಬೆಂಡವಾಡ, ಸುನೀಲ ತಳವಾರ, ಸುರೇಂದ್ರ ಕುನಸಲೇ, ಗಣಪತಿ ರಾಠೋಡ, ರಾಘವೇಂದ್ರ ಚಲವಾದಿ, ಮೈಬೂಬ ತಾಂಬೋಳಿ, ನಬಿರಸುಲ ಹುಣಶ್ಯಾಳ, ಭೀಮಾಶಂಕರ ಕಾಂಬಳೆ, ಪುಂಡಲಿಕ ಬಿರಾದಾರ, ನಬೀರಸೂಲ್ ಜಮಾದಾರ ಮತ್ತಿತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X